86
ಬೆಂಗಳೂರು:ಹೊಸದಾಗಿ ಬೀಟೆ ಮರದಲ್ಲಿ ಕಲಾತ್ಮಕವಾಗಿ ಕುಸರಿ ಕೆತ್ತನೆಯಿಂದ ವಿನ್ಯಾಸಗೊಳಿಸಿ ಅಳವಡಿಸಿರುವ ವಿಧಾನಸೌಧದ ನವೀಕೃತ ಪಶ್ಚಿಮ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಎಚ್.ಕೆ ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರು, ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಪ್ಪ, ಮುಖ್ಯಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.