Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೇಕೆದಾಟು ಯೋಜನೆ: ತಮಿಳುನಾಡಿಗೆ ಡಿಕೆಶಿ ಮನವಿ

by admin July 16, 2024
written by admin July 16, 2024 0 comments 1 minutes read
0FacebookTwitterPinterestEmail
218

ಬೆಂಗಳೂರು:ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಅನುಕೂಲ ಆಗಲಿದ್ದು, ಯೋಜನೆ ಜಾರಿಗೆ ಸಹಕಾರ ನೀಡುವಂತೆ ನಮ್ರತೆಯಿಂದ ಕೇಳಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡು ಸರ್ಕಾರ ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ, ಅದು ಅವರ ಹಕ್ಕು, ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ, ಆದರೆ ಅವರಿಗೂ ಹೆಚ್ಚು ಅನುಕೂಲವಾಗುವ ಮೇಕೆದಾಟು ಯೋಜನೆ ಜಾರಿಗೆ ಸಹಕಾರ ನೀಡಬೇಕು ಎಂದರು.

ಮಳೆಯೇ ನಮಗೆ ಆಧಾರ

ರಾಜ್ಯದಲ್ಲಿ ನಿನ್ನೆಯಿಂದ ಹೆಚ್ಚು ಮಳೆ ಬೀಳುತ್ತಿದೆ, ಕಾವೇರಿ ಕೊಳ್ಳದ ಅಣೆಕಟ್ಟುಗಳ ಒಳಹರಿವು ಪ್ರಮಾಣ ಹೆಚ್ಚಿದೆ, ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ, ಮಳೆಯೇ ನಮಗೆ ಆಧಾರ.

ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ, ನಿಮ್ಮ ಹಿತಾಸಕ್ತಿ ಕಾಪಾಡುವುದಕ್ಕಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡಿ, ಈ ಅಣೆಕಟ್ಟೆಯಲ್ಲಿ ಸಂಗ್ರಹವಾದ ನೀರನ್ನು ನಿಮಗೇ ಬಿಡಲಾಗುವುದು.

ಬೆಂಗಳೂರಿನಲ್ಲಿ ಕನ್ನಡಿಗರು, ತಮಿಳಿಗರು, ಆಂಧ್ರದವರು ಸೇರಿದಂತೆ ಉತ್ತರ ಭಾರತದ ರಾಜ್ಯಗಳ ಜನರೂ ವಾಸಿಸುತ್ತಿದ್ದಾರೆ, ಎಲ್ಲರಿಗೂ ಕುಡಿಯುವ ನೀರು ಲಭಿಸಲಿದೆ, ಆದ್ದರಿಂದ ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯದ ಪರವಾಗಿ ವಿನಮ್ರವಾಗಿ ಮನವಿ ಮಾಡುತ್ತೇವೆ ಎಂದರು.

ಮಳೆ ಇದೇ ರೀತಿ ಬಿದ್ದರೆ, ತಮಿಳುನಾಡಿಗೆ ಖಂಡಿತವಾಗಿ ನೀರು ಬಿಡುಗಡೆ ಮಾಡುತ್ತೇವೆ, ಬಿಡಲೇಬೇಕು, ಒಳಹರಿವು ಹೆಚ್ಚಳವಾದರೆ ನೀರನ್ನು ಹರಿಸಲೇಬೇಕು, ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ.

ವಾಹನಕ್ಕೆ ಜಾಗ ಇದ್ದರೆ ಮಾತ್ರ ಮನೆ ಕಟ್ಟಲು ಅನುಮತಿ
ಕುಮಾರಸ್ವಾಮಿಗೆ ರೈತರ ಕಾಳಜಿ ಇಲ್ಲ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ, ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಹೋಗಬೇಕಿತ್ತಾ ಎಂಬ ಹೇಳಿಕೆ ಕೊಟ್ಟಿದ್ದಾರೆ, ಅವರನ್ನು ಗೋಡಂಬಿ, ದ್ರಾಕ್ಷಿ ತಿನ್ನಲು ನಾವು ಕರೆದಿದ್ದೇವಾ, ಹಾಗಿದ್ದರೆ, ಅವರು ತಮ್ಮ ಪಕ್ಷದ ನಾಯಕರನ್ನು ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಕಳುಹಿಸಿದ್ದರೆ, ಅವರಿಗೆ ರಾಜಕಾರಣ, ಟೀಕೆ, ಆರೋಪ, ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ಕಾವೇರಿ ನೀರು, ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಟೀಕಿಸಿದರು.

ಕುಮಾರಸ್ವಾಮಿ ಅವರಿಗೆ ಅಸೂಯೆ ಬಿಟ್ಟರೆ ಬೇರೇನೂ ಇಲ್ಲ, ಮೊದಲಿಂದಲೂ ವೈಯಕ್ತಿಕ ದಾಳಿ ಮಾಡಿಕೊಂಡು ಬಂದಿದ್ದಾರೆ, ಬಹಿರಂಗವಾಗಿ ಚರ್ಚೆ ಮಾಡೋಣ ಬಾ ಎಂದು ಕರೆಯುತ್ತಿದ್ದೇನೆ, ಕಳೆದ ಬಾರಿ ಸದನದಲ್ಲಿ ಚರ್ಚೆಗೆ ಕರೆದಾಗಲೂ ಬರಲಿಲ್ಲ.

ನಾನು ಯಾವುದೇ ತಪ್ಪು ಮಾಡಿಲ್ಲ

ತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವ ಬಗ್ಗೆ ಪ್ರತಿಪ್ರಿಯಿಸಿದ ಅವರು, ಈಗಾಗಲೇ ಈ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ, ಸಿಬಿಐ ತನ್ನ ವ್ಯಾಪ್ತಿ ಮೀರಿ ಪ್ರಕರಣ ತನಿಖೆಗೆ ಮುಂದಾಗಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ.

ಮುಂದಿನ ಒಂದೆರಡು ದಿನಗಳಲ್ಲಿ ಅವರ ಮುಂದೆ ಹೋಗಿ ನನ್ನ ವಾದ ಮಂಡಿಸುತ್ತೇನೆ, ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cooperate for meke datudcm shivakumar urges tamilnadunot done any wrongtamilnadu will benefit more
0 FacebookTwitterPinterestEmail
admin

previous post
ವಾಹನಕ್ಕೆ ಜಾಗ ಇದ್ದರೆ ಮಾತ್ರ ಮನೆ ಕಟ್ಟಲು ಅನುಮತಿ
next post
ಸರ್ಕಾರಿ ನೌಕರರಿಗೆ ಖುಷಿ ನೀಡಿದ ಮುಖ್ಯಮಂತ್ರಿ

You may also like

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (526)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,020)
  • ರಾಜ್ಯ (2,334)
  • ರಾಷ್ಟ್ರ (2,299)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026

KMS Special

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ