Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೈತನ ಅವಮಾನಿಸಿದ ಜಿ.ಟಿ.ಮಾಲ್ ಒಂದು ವಾರ ಬಂದ್

by admin July 18, 2024
written by admin July 18, 2024 0 comments 2 minutes read
0FacebookTwitterPinterestEmail
157

ಬೆಂಗಳೂರು:ರೈತನಿಗೆ ಅಪಮಾನ ಮಾಡಿದ ನಗರದ ಮಾಗಡಿ ರಸ್ತೆಯ ಜಿ.ಟಿ.ಮಾಲ್ ಅನ್ನು ಒಂದು ವಾರ ಬಂದ್ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗಿಂದು ತಿಳಿಸಿದ್ದಾರೆ.

ರೈತರೊಬ್ಬರನ್ನು ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷಬೇಧ ಮರೆತು ಸದಸ್ಯರು ಮಾತನಾಡಿ, ಮಾಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವರು, ರೈತನಿಗೆ ಅಪಮಾನ ಮಾಡಿದ ಮಾಲ್ ಅನ್ನು ಒಂದು ವಾರ ಮುಚ್ಚಿಸುವಂತಹ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಠಿಣ ಕ್ರಮ ಕೈಗೊಳ್ಳಬೇಕು

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ಗ್ರಾಮೀಣ ಭಾಗದಿಂದ ಬಂದಿದ್ದ ತಮ್ಮ ತಂದೆಯನ್ನು ಮಗ ಮಾಲ್‌ಗೆ ಕರೆದೊಯ್ದಾಗ ಅವರ ಉಡುಗೆ ಗಮನಿಸಿದ ಸುರಕ್ಷತಾ ಸಿಬ್ಬಂದಿ ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಒಳಗೆ ಬಿಟ್ಟಿಲ್ಲ, ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇನೆ, ಸರ್ಕಾರ ಮಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತಹ ಕ್ರಮದಿಂದ ಎಲ್ಲಾ ಮಾಲ್‌ಗಳಿಗೂ ಸಂದೇಶ ರವಾನಿಸಬೇಕು, ಮಾಲ್‌ನ ಮಾಲೀಕರು ಎಷ್ಟೇ ಶ್ರೀಮಂತರಾದರೂ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ಪಂದಿಸುವುದು ಮುಖ್ಯ ಎಂದರು.

ಸಭಾಧ್ಯಕ್ಷರ ಹೇಳಿಕೆಗೆ ಧನಿಗೂಡಿಸಿದ ಲಕ್ಷ್ಮಣ ಸವದಿ, ಮಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರೆ ಸಾಲದು, ಒಂದು ವಾರ ವಿದ್ಯುತ್ ಕಡಿತ ಮಾಡಿ, ತಕ್ಕ ಪಾಠ ಆಗಲಿದೆ, ಸರ್ಕಾರದ ಆದೇಶ ಹೊರಡಿಸಿ, ರೈತರ ಉಡುಪಿಗೆ ಬೆಲೆ ಕೊಡದ ಮಾಲ್ ವಿರುದ್ಧ ಕ್ರಮ ಆಗಬೇಕು ಎಂದರು.

ಪರಿಶಿಷ್ಟರ ಹಣ ದುರ್ಬಳಕೆ ಜನಾಂಗಕ್ಕೆ ಬಗೆದ ದೋಹ
ಈ ಕೃತ್ಯಕ್ಕೆ ಮಾಲ್ ಮುಚ್ಚಿಸಬೇಕು

ಪ್ರಕಾಶ್ ಕೋಳಿವಾಡ್ ಮಾತನಾಡಿ, ಅವಮಾನಿತನಾದ ರೈತ ತಮ್ಮ ಕ್ಷೇತ್ರದ ಅರೆಮಲ್ಲಾಪುರ ಗ್ರಾಮದವರಾಗಿದ್ದು, ಒಂಭತ್ತು ಮಕ್ಕಳಿದ್ದಾರೆ, ಎಲ್ಲರಿಗೂ ಶಿಕ್ಷಣ ಕೊಡಿಸಿದ್ದಾರೆ, ಒಬ್ಬ ಪುತ್ರ ಎಂಬಿಎ ಓದುತ್ತಿದ್ದು, ಮಗನನ್ನು ನೋಡಲು ಬೆಂಗಳೂರಿಗೆ ಬಂದಿದ್ದರು, ಮಗ ಜಿ.ಟಿ ಮಾಲ್‌ಗೆ ಕರೆದುಕೊಂಡು ಹೋದಾಗ ಉಡುಗೆ ನೋಡಿ ಅಪಮಾನ ಮಾಡಲಾಗಿದೆ, ಈ ಕೃತ್ಯಕ್ಕೆ ಮಾಲ್ ಮುಚ್ಚಿಸಬೇಕು ಎಂದರು.

ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮಾತನಾಡಿ, ಮಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಬೆಂಗಳೂರಿನಲ್ಲಿನ ಕೆಲವು ಕ್ಲಬ್‌ಗಳಲ್ಲಿ ಶೂ ಧರಿಸಲೇಬೇಕು ಎಂಬ ಷರತ್ತು ಹಾಕುತ್ತಾರೆ, ಇಂತಹ ಕ್ಲಬ್‌ಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.

ಸಚಿವ ಭೈರತಿ ಸುರೇಶ್ ಮಾತನಾಡಿ, ಕ್ಲಬ್‌ಗಳಲ್ಲಿ ಪಂಚೆ, ಚಪ್ಪಲಿ ಹಾಕುವಂತಿಲ್ಲ, ಮಾಜಿ ಪ್ರಧಾನಿ ದೇವೇಗೌಡರು ಪಂಚೆ ಉಟ್ಟುಕೊಂಡು ಹೋದರೆ ಆಗಲೂ ಹಾಗೆಯೇ ಮಾಡುತ್ತಾರಾ, ಸಾಂಪ್ರದಾಯಿಕ ಉಡುಗೆಗೆ ಗೌರವ ಸಿಗುವಂತಾಗಬೇಕು ಎಂದರು.

ಕ್ಲಬ್‌ಗಳಿಗೆ ಏಕೆ ಹೋಗುತ್ತೀರಾ

ಸುರೇಶ್‌ಕುಮಾರ್ ಮಾತನಾಡಿ, ಚಡ್ಡಿ, ಪ್ಯಾಂಟ್ ಹಾಕಿಕೊಂಡು ಹೋದರೆ ಬಿಡುತ್ತಾರೆ, ಪಂಚೆ ಧರಿಸಿದ್ದರೆ ಬಿಡುವುದಿಲ್ಲ, ಅಂತಹ ಕ್ಲಬ್‌ಗಳಿಗೆ ಏಕೆ ಹೋಗುತ್ತೀರಾ ಎಂದು ಛೇಡಿಸಿದರು.

ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರೈತರಿಗೆ ಅವಮಾನ ಮಾಡಿದ ವಿಚಾರ ಹತ್ತಾರು ಬಾರಿ ಚರ್ಚೆಯಾಗಿದೆ, ಸರ್ಕಾರದಿಂದ ಕ್ರಮ ಕೈಗೊಳ್ಳುವ ಆದೇಶ ಹೊರಡಿಸಿ, ಅನುಷ್ಠಾನ ಮಾಡಬೇಕು.

ಹ್ಯಾರಿಸ್ ನೇತೃತ್ವದಲ್ಲಿ ಒಂದು ಸಮಿತಿ, ಎ.ಮಂಜು ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಕ್ಲಬ್‌ಗಳ ಕುರಿತು ವರದಿ ಕೊಟ್ಟಿದೆ, ಆದರೆ, ಏನೂ ಪ್ರಯೋಜನ ಆಗಿಲ್ಲ, ಇಂತಹ ಘಟನೆ ಮರುಕಳಿಸಿದರೆ, ಜೈಲಿಗೆ ಹಾಕುತ್ತೇವೆ ಎಂಬ ಸಂದೇಶ ನೀಡಿ, ಆದೇಶ ಹೊರಡಿಸಿ ಎಂದರು.

ಘನತೆ, ಸ್ವಾಭಿಮಾನಕ್ಕೆ ಧಕ್ಕೆ

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ರೈತರಿಗೆ ಮಾಲ್ ಪ್ರವೇಶ ಮಾಡಲು ಅವಕಾಶ ಕೊಡದೇ ಇರುವುದು ಸರಿಯಲ್ಲ, ಮಾಲ್ ಮಾಲೀಕರಾಗಲೀ, ಆಡಳಿತ ವರ್ಗದವರಾಗಲೀ ಅಪಮಾನ ಮಾಡುವುದು, ಘನತೆ, ಸ್ವಾಭಿಮಾನಕ್ಕೆ ಧಕ್ಕೆ ತರುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ, ಇಂತಹ ನಡವಳಿಕೆ ಖಂಡಿಸುತ್ತೇವೆ, ವರದಿ ಪಡೆದು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಶರಣಗೌಡ ಕಂದಕೂರ್ ಮಾತನಾಡಿ, ಮಾಲ್‌ನ ಭದ್ರತಾ ಸಿಬ್ಬಂದಿ ಸಹಾ ರೈತರ ಮಗ, ಮಾಲ್ ಮಾಲೀಕರ ಮೇಲೆ ಎಫ್‌ಐಆರ್ ದಾಖಲಿಸಬೇಕು, ಸೆಕ್ಯೂರಿಟಿ ಏಜೆನ್ಸಿ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.

ಹಲವು ಶಾಸಕರ ಒತ್ತಾಯಕ್ಕ ಮಣಿದ ಸಚಿವ ಭೈರತಿ ಸುರೇಶ್, ತಪ್ಪು ಎಸಗಿದ ಮಾಲ್ ಅನ್ನು ಏಳು ದಿನ ಮುಚ್ಚಿಸುವುದಾಗಿ ಭರವಸೆ ನೀಡಿದಾಗ ಚರ್ಚೆಗೆ ತೆರೆ ಬಿದ್ದಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
byrati sureshdr.hc mahadevappagovt. ordergt mal one week closedhumiliation to a farmer incidentprakash kolivadsureshkumarut khadar
0 FacebookTwitterPinterestEmail
admin

previous post
ಪರಿಶಿಷ್ಟರ ಹಣ ದುರ್ಬಳಕೆ ಜನಾಂಗಕ್ಕೆ ಬಗೆದ ದೋಹ
next post
ಇ.ಡಿ. ತನಿಖೆಯಿಂದ ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಕೇಂದ್ರ ಸಂಚು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ