40
ನವದೆಹಲಿ:ಬೆಂಗಳೂರು-ಮೈಸೂರು ನಡುವೆ ಬಿಜೆಪಿ-ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಕುರಿತು ಸಂಸತ್ ಭವನದಲ್ಲಿನ ಎಚ್.ಡಿ.ಕುಮಾರಸ್ವಾಮಿ ಅವರ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಪಾದಯಾತ್ರೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರ ಮನವೊಲಿಕೆ ಪ್ರಯತ್ನ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರತಿನಿಧಿಯೂ ಸಭೆಯಲ್ಲಿ ಪಾಲ್ಗೊಂಡಿದ್ದರು.
ಉಭಯ ಪಕ್ಷಗಳ ಹಿತಾಸಕ್ತಿ
ಉಭಯ ಪಕ್ಷಗಳ ಹಿತಾಸಕ್ತಿಗೆ ಧಕ್ಕೆಯಾಗದಂತೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಸಭೆಯಲ್ಲಿ ಒಮ್ಮತ ವ್ಯಕ್ತವಾಯಿತು.
ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಂಡೆಪ್ಪ ಕಾಶೆಂಪೂರ್, ಮಲ್ಲೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.