Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆಸ್ತಿ ತೆರಿಗೆ ಪರಿಹಾರ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

by admin August 2, 2024
written by admin August 2, 2024 0 comments 1 minutes read
0FacebookTwitterPinterestEmail
282

ಬೆಂಗಳೂರು:ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್) ಕಾಲಾವಧಿಯನ್ನು ಸಾರ್ವಜನಿಕರ ಒತ್ತಡದ ಮೇರೆಗೆ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೀಡಿದ್ದ ಒಂದು ಬಾರಿ ಪರಿಹಾರ ಯೋಜನೆ ಕಾಲಾವಧಿ ಜುಲೈ 31ಕ್ಕೆ ಕೊನೆಗೊಂಡಿದೆ ಎಂದರು.

ಈವರೆಗೂ 3 ಸಾವಿರ ಕೋಟಿ ರೂ.ನಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, 400 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಿದೆ, ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ, ಸರ್ವರ್ ಸಮಸ್ಯೆ ಇತ್ತು ಹಾಗೂ ಕೆಲವರು ಚೆಕ್ ನೀಡಿದ್ದರು.

ಅನಗತ್ಯ ಆತಂಕ ಬೇಡ

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಲಾಗುವುದು, ಒಂದು ವೇಳೆ ಹೆಚ್ಚಿಗೆ ಹಣ ಪಾವತಿಸಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ಸರಿಹೊಂದಿಸಲಾಗುವುದು, ಈ ವಿಚಾರದಲ್ಲಿ ಅನಗತ್ಯ ಆತಂಕ ಬೇಡ ಎಂದರು.

ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ-ಜಿಡಿಎಸ್ ಪಾದಯಾತ್ರೆಗೆ ಅರ್ಥ ಅಥವಾ ವಿಷಯ ಯಾವುದೂ ಇಲ್ಲ, ಅವರ ಪಾದಯಾತ್ರೆ ವಿಚಾರ ಏನು, ಅವರ ಕಾಲದಲ್ಲಿ ನಡೆದಿರುವ ಹಗರಣಗಳ ಬಯಲು ಮಾಡಲು ನಮಗೆ ಒಳ್ಳೆಯ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಶಾಂತಿಯುತ ಮೈಸೂರು ಚಲೋಗೆ ಅನುಮತಿ
ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಹೊಸ ಹಗರಣಗಳಿದ್ದರೆ ಹೇಳಲಿ, ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ, ಅವರ ಕಾಲದ ಹಗರಣಗಳ ಬಗ್ಗೆ ಹಾಗೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ ಕೇಳುತ್ತೇವೆ, ಉತ್ತರ ನೀಡಲಿ.

ಪಾದಯಾತ್ರೆ ಮೂಲಕ ನೆಲೆ ಕಳೆದುಕೊಳ್ಳುವುದನ್ನು ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಪ್ರಯತ್ನಿಸಿದರು, ಆದರೆ ಅವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಒಪ್ಪಿಸಿದ್ದಾರೆ, ಅವರು ಏನಾದರೂ ಮಾಡಿಕೊಳ್ಳಲಿ, ಅದು ಅವರವರ ವಿಚಾರ, ಅವರ ಒಪ್ಪಿಗೆಯ ಗುಟ್ಟು ಏನೆಂದು ಅವರನ್ನೇ ಕೇಳಿ ಎಂದರು.

ಮೊದಲು ಅವರ ಅವಧಿಯ ಅಕ್ರಮಗಳಿಗೆ ಉತ್ತರ ನೀಡಲಿ, ನಂತರ ರಾಜ್ಯ ಮಟ್ಟದ ಕಾಂಗ್ರೆಸ್ ಜನಾಂದೋಲನದ ಬಗ್ಗೆ ಆಲೋಚನೆ ಮಾಡುತ್ತೇವೆ.

ಇ.ಡಿ. ದಾಳಿಗೆ ಚಹಾ, ಬಿಸ್ಕೆಟ್‌ನೊಂದಿಗೆ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದೇನೆ ಎಂಬ ರಾಹುಲ್ ಗಾಂಧಿ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಈ ಕುರಿತು ಮಾಹಿತಿ ಇಲ್ಲ, ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು, ಅವರದೇ ಆದ ಮಾಹಿತಿ ಪಡೆದಿರುತ್ತಾರೆ.

ನ್ಯಾನೋ ತಂತ್ರಜ್ಞಾನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ಹೆಸರು ಹೇಳುವಂತೆ ಬೆದರಿಕೆ

ಸಂವಿಧಾನಿಕ ಸಂಸ್ಥೆಗಳು ಯಾವ ರೀತಿ ವರ್ತಿಸುತ್ತಿವೆ ಎಂಬುದನ್ನು ಎಲ್ಲರೂ ನೋಡುತ್ತಿದ್ದೀರಿ, ತನಿಖೆ ಹೆಸರಲ್ಲಿ ಅಧಿಕಾರಿಗಳಿಗೆ ಒತ್ತಡ ಹಾಕಿ ಮುಖ್ಯಮಂತ್ರಿ ಹಾಗೂ ನನ್ನ ಹೆಸರು ಹೇಳುವಂತೆ ಬೆದರಿಸುವುದು ನಡೆಯುತ್ತಿದೆ.

ಸಿಬಿಐ ಏನೇನು ಮಾಡುತ್ತಿದೆ ಎಂಬ ಪಟ್ಟಿ ನನ್ನ ಬಳಿ ಇದೆ, ನಿಧಾನವಾಗಿ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumarextended to august 31stone time settlementproperty tax
0 FacebookTwitterPinterestEmail
admin

previous post
ಶಾಂತಿಯುತ ಮೈಸೂರು ಚಲೋಗೆ ಅನುಮತಿ
next post
ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ