35
ಸಂಪುಟ ಸಭೆ ನಿರ್ಧಾರ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಮುಡಾ ಹಗರಣ ವಿಷಯಕ್ಕೆ ಸಂಬಂಧಿಸಿದ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು, ಮುಖ್ಯಮಂತ್ರಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಹಾಗೂ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಅರ್ಜಿ ತಿರಸ್ಕರಿಸಲು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.