Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಣೆ

by KM Shivaraju August 4, 2024
written by KM Shivaraju August 4, 2024 0 comments 2 minutes read
0FacebookTwitterPinterestEmail
159
ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ ಎಂದರು.

ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ  ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಹೇಳಿದರು.

ಅವಕಾಶ ಪತ್ರ ಪಡೆದ ಕ್ರಿಡಾ ಸಾಧಕರ ವಿವರ

ಗಿರೀಶ್‌ ಎಚ್.ಎನ್‌ (ಪ್ಯಾರಾ ಅಥ್ಲೆಟಿಕ್ಸ್)‌, ದಿವ್ಯಾ ಟಿ.ಎಸ್.‌ (ಶೂಟಿಂಗ್)‌, ಉಷಾರಾಣಿ ಎನ್.‌ (ಕಬಡ್ಡಿ), ಸುಷ್ಮಿತಾ ಪವಾರ್‌ (ಕಬಡ್ಡಿ), ನಿಕ್ಕಿನ್‌ ತಿಮ್ಮಯ್ಯ (ಹಾಕಿ), ಎಸ್.ವಿ.ಸುನೀಲ್‌ (ಹಾಕಿ), ಕಿಶನ್‌ ಗಂಗೊಳ್ಳಿ (ಚೆಸ್)‌, ರಾಘವೇಂದ್ರ ರತ್ನಾಕರ ಅಣ್ವೇಕರ್‌ (ಈಜು), ರಾಧಾ ವಿ. (ಪ್ಯಾರಾ ಅಥ್ಲೆಟಿಕ್ಸ್)‌, ಶರತ್‌ ಎಂ.ಎಸ್‌ (ಪ್ಯಾರಾ ಅಥ್ಲೆಟಿಕ್ಸ್)‌, ಗುರುರಾಜ (ವೇಯ್ಟ್‌ ಲಿಫ್ಟಿಂಗ್)‌ ಮತ್ತು ಮಲಪ್ರಭಾ ಯಲ್ಲಪ್ಪ ಜಾಧವ (ಕುರಾಶ್)‌ ಇವರಿಗೆ ನೇಮಕಾತಿ ಆಫರ್‌ ಲೆಟರ್‌ ನೀಡಿದರು.

ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterDistributionGovernmentrecruitment letterSiddaramaiahsports activitiessportspersonssupport
0 FacebookTwitterPinterestEmail
KM Shivaraju

previous post
ರಾಜ್ಯದಿಂದ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ವಿಜಯೇಂದ್ರ
next post
ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ