Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಪ್ರಾಮಾಣಿಕ ಎಂದು ಅಜ್ಜಯ್ಯನ ಮೇಲೆ ಡಿಕೆಶಿ ಪ್ರಮಾಣ ಮಾಡಲಿ

by KM Shivaraju August 4, 2024
written by KM Shivaraju August 4, 2024 0 comments 3 minutes read
0FacebookTwitterPinterestEmail
199

ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಹೆಚ್ ಡಿಕೆ

ಬೆಂಗಳೂರು : ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಉಪ ಮುಖ್ಯಮಂತ್ರು ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಆರೋಪಿಸಿದ್ದಾರೆ.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ ಅವರು, ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೇಂದ್ರ ಅವರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದ್ದಾರೆ.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಅವರು ಹೇಳಿದ್ದಾರೆ.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೇಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ.

ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ..

ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

ಅಸಲಿ ಸೊಸೈಟಿಯನ್ನು ನಕಲಿ ಮಾಡಿದ್ದಾರೆ

ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಅವರು ಬಿಡಿಸಿದ್ದಾರೆ.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಸಚಿವರು ಸವಾಲು ಹಾಕಿದ್ದಾರೆ.

ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ

ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಮೂಡಾ ಮಾತನಾಡಿದ್ದೇವೆ

ಮೂಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ. ಇಲ್ಲಿ ನಿಂಗ, ಜವರ, ದೇವರಾಜ, ದಲಿತ ಅನ್ನೋ ಪ್ರಶ್ನೆ ಇಲ್ಲ. ನಕಲಿ ದಾಖಲೆ ಸೃಷ್ಟಿ 15 ಸೈಟುಗಳನ್ನು ತಗೊಂಡಿದ್ದಾರೆ. ಇದನ್ನು ಸಿಎಂ ಕಾನೂನು ಬಾಹಿರವಾಗಿ ತಗೊಂಡಿದ್ದಾರೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಡಿಕೆಶಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ; ಏಕವಚನ ನನಗೂ ಬರುತ್ತದೆ

ಡಿಸಿಎಂ ಡಿಕೆ ಶಿವಕುಮಾರ್ ಅವರು ಏ‌ನು ಪ್ರಶ್ನೆಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಬಗ್ಗೆ, ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ, ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ’ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ್, ಎ.ಮಂಜು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದರಾದ ಡಾ.ಡಾ.ಸಿ.ಎನ್.ಮಂಜುನಾಥ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಕೃಷ್ಣಪ್ಪ, ಹರೀಶ್ ಗೌಡ, ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಎರಡೂ ಪಕ್ಷಗಳ ಶಾಸಕರು, ಸಂಸದರು, ನಾಯಕರು, ಅಸಂಖ್ಯಾತ ಕಾರ್ಯಕರ್ತರು ನಮ್ಮ ಜತೆಯಲ್ಲಿ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
challengeddkshdkhoneson Ajjayapoliticalretirementswear
0 FacebookTwitterPinterestEmail
KM Shivaraju

previous post
ಗಾಂಧಿ ಕುಟುಂಬಕ್ಕೆ ಕರ್ನಾಟಕ ಕಾಂಗ್ರೆಸ್‌ನ ಕಪ್ಪಕಾಣಿಕೆ !
next post
ಕುಮಾರಣ್ಣ ನೀವು, ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ?

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ