Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಗನ್ ತೋರಿಸಿ ಸದಾಶಿವ ನಗರದಲ್ಲಿ ವಿಧವೆಯರಿಂದ ನಿವೇಶನ ಕಬ್ಜ ಮಾಡಿದ ಡಿಸಿಎಂ ಡಿಕೆಶಿ

by KM Shivaraju August 5, 2024
written by KM Shivaraju August 5, 2024 0 comments 2 minutes read
0FacebookTwitterPinterestEmail
232

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು.

ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಅಡ್ವಾನ್ಸ್ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ. ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂಥ ವ್ಯಕ್ತಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ಗನ್ ಇಟ್ಟು ವಿಧವಾ ತಾಯಂದಿರ ನಿವೇಶನಗಳನ್ನು ರಿಜಿಸ್ಟರ್ ಮಾಡಿಸಿಕೊಂಡವರು ನೀವು, ಅನ್ಯಾಯವಾಗಿ ಕಂಡೋರ ಆಸ್ತಿಯನ್ನು ಕಬ್ಜ ಮಾಡಿದವರು ನೀವು. ಇಂಥ ಕೆಟ್ಟ ಹಿನ್ನೆಲೆಯ ನೀವು ನನ್ನ ಬಗ್ಗೆ ಮಾತನಾಡುತ್ತಿದ್ದೀರಿ. ಬನ್ನಿ ಪ್ರಮಾಣ ಮಾಡೋಣ. ಅಜ್ಜಯನ ಮುಂದೆ ಆಗಲಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಅಮ್ಮನ ಮುಂದೆ ಆಗಲಿ ಪ್ರಮಾಣ ಮಾಡೋಣ. ನೀವೇ ವಿಧಾನಸೌಧಕ್ಕೆ ಬನ್ನಿ ಎಂದು ಕರೆದಿದ್ದೀರಲ್ಲ. ಅಲ್ಲಿಗೂ ಬರಲು ನಾನು ತಯಾರಿದ್ದೇನೆ. ಬನ್ನಿ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಗೆ ಸವಾಲು ಹಾಕಿದರು.

ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ಧಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡುತ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಆಯಿತಲ್ಲವೇ? ಇಷ್ಟು ದಿನ ಏನು ಮಾಡ್ತಿದ್ರಪ್ಪ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋಡೋನ್ ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದ ಅವರು ಬಹಿರಂಗ ಸಭೆಯಲ್ಲಿ ಆ ಕಲ್ಲು ಗೋದಾಮುಗಳ ಪೋಟೊಗಳನ್ನು ತೋರಿಸಿ, ಇದಕ್ಕೆ ಉತ್ತರ ಕೊಡಪ್ಪಾ.? ಎಂದು ಕೇಳಿದರು.

ಕನಕಪುರದ ಎಷ್ಟು ದಲಿತ ಕುಟುಂಬಗಳ ಹಾಳು ಮಾಡಿದ್ದೀರಿ ನೀವು. ಆ ಜನ ಕಣ್ಣಲ್ಲಿ ನೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಕುಮಾರಸ್ವಾಮಿ ರೈತನ ಮಗ ಅಲ್ಲ ಎಂದಿದ್ದಾರೆ ಅವರು. ಫ್ಯಾಂಟ್ ತೆಗೆದು ಪಂಚೆ ಹಾಕಿದ್ರೆ ರೈತ ಅಲ್ಲ ಎಂದು ಹೇಳಿದ್ದಾರೆ. ಬನ್ನಿ, ಬಿಡದಿಗೆ ಬಂದು ನೋಡಿ. 20 ಟನ್ ಕೊಬ್ಬರಿ ಬೆಳೆದಿದ್ದೇನೆ. ತೆಂಗು, ಬಾಳೆ, ಅಡಕೆಯಲ್ಲಿ 50 ಲಕ್ಷ ರೂಪಾಯಿ ರೈತನಾಗಿ ಸಂಪಾದನೆ ಮಾಡಿದ್ದೇನೆ. ನಿಮ್ಮಿಂದ ಇದು ಸಾಧ್ಯವೇ? ಎಂದು ಸಚಿವರು ಟಾಂಗ್ ಕೊಟ್ಟರು.

ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಮತ್ತು ದೇವೇಗೌಡರು ಏನು ಮಾಡಿದ್ದಾರೆ ಎಂದು ಕೇಳುತ್ತಿದ್ದಾರೆ. ದೇವೇಗೌಡರ ಕಾಲದಲ್ಲಿ ಇಗ್ಗಲೂರು ಜಲಾಶಯ ಕಟ್ಟಲು ಹೋದರು. ಕೆಲವರು ಆಗಲ್ಲ ಎಂದು ಹೇಳಿದರು. ಆದರೆ, ದೇವೇಗೌಡರು ಪಟ್ಟು ಹಿಡಿದು ಆ ಯೋಜನೆಯನ್ನು ಕಾರ್ಯಗತ ಮಾಡಿದರು. ಇವತ್ತು ಈ ನೆಲಕ್ಕೆ ಆ ಜಲಾಶಯ ಜೀವನಾಡಿ ಆಗಿದೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.

ಚನ್ನಪಟ್ಟಣದಲ್ಲಿ ಕೆರೆಗಳನ್ನು ತುಂಬಿಸುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ನಾನು, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದಾಗ ಕೆರೆಗಳನ್ನು ತುಂಬಿಸಲಾಯಿತು. ಯೋಗೇಶ್ವರ್ ಕೂಡ ಮಂತ್ರಿಯಾಗಿ ಕೆಲಸ ಮಾಡಿದರು. ಕಾಂಗ್ರೆಸ್ ನವರು ಏನೂ ಮಾಡಿಲ್ಲ ಎಂದು ಅವರು ಕಿಡಿಕಾರಿದರು.

ರಾಜ್ಯದಲ್ಲಿ ನಿಮ್ಮ ಆಡಳಿತ, ನಿರ್ವಹಣೆ ಕೆಟ್ಟದಾಗಿದೆ. ಗ್ಯಾರಂಟಿ ಎಂದು ಕೊಟ್ಟಿದ್ದೀರಿ. ಯಾರಿಗೆ ಲಾಭವಾಗಿದೆ ಅದರಿಂದ, ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ‌? ರೈತರ ಟಿಸಿ ದರ ಎಷ್ಟಾಗಿದೆ? ಸರಣಿ ಹಗರಣಗಳ ರೀತಿಯಲ್ಲಿ ಸರಣಿ ಬೆಲೆ ಏರಿಕೆ ಮಾಡಿದ್ದೀರಿ. ರೈತರಿಗೆ ಆದಾಯ ಇಲ್ಲ. ರೈತರಿಗೆ ಏನು ಕೊಟ್ಟಿದ್ದೀರಿ? ಬರೀ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಬಗ್ಗೆ ಇವರು ಚರ್ಚೆ ಮಾಡುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದರೋಡೆ ಮಾಡಿದ್ದಾರೆ. ಹಣ ದೋಚಿರೋ ಸಿದ್ದರಾಮಯ್ಯ, ಡಿಕೆಶಿ ಇಲ್ಲಿ ಬಂದು ದಲಿತರ ಬಗ್ಗೆ ಚರ್ಚೆ ಮಾಡ್ತೀರಾ? ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದರು.

ಗಿಫ್ಟ್ ಕೂಪನ್ ಹಂಚಿ 136 ಸೀಟು

ನಾವು 136 ಸೀಟು ಗೆದ್ದು ಅಧಿಕಾರಕ್ಕೆ ಬಂದಿದೇವೆ ಎಂದು ಕಾಂಗ್ರೆಸ್ ನಾಯಕರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೂಪನ್ ಹಂಚಿ ರಾಜಕಾರಣ ಮಾಡಿದೆ. ಲುಲು ಮಾಲ್ ಕೂಪನ್ ಕೊಟ್ಟವ್ರೆ. ಮೂರು ಸಾವಿರ, ಐದು ಸಾವಿರ ಕೂಪನ್ ಕೊಟ್ಟಿದ್ದರು. ಅದನ್ನು ತೆಗೆದುಕೊಂಡು ಹೋಗಿ ಲುಲು ಮಾಲ್ ನಲ್ಲಿ ಕೊಟ್ಟರೆ ಅದರಲ್ಲಿ ದುಡ್ಡೇ ಇಲ್ಲ. ಜನರಿಗೆ ಕಾಂಗ್ರೆಸ್ ನವರು ಮೋಸ ಮಾಡಿದ್ದು ಹೀಗೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcmdksgunpointHdkumaraswamySadashiva Nagarseized landunion ministerwidows
0 FacebookTwitterPinterestEmail
KM Shivaraju

previous post
ರಾಜ್ಯಪಾಲರ ವಿರುದ್ಧವೂ ಕಾಂಗ್ರೆಸ್ ಹೋರಾಟ
next post
ಮುಡಾ-ವಾಲ್ಮೀಕಿ: ಸಿದ್ದರಾಮಯ್ಯ ನಂಬರ್-1 ಆರೋಪಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ