Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾನೂನು ತಜ್ಞರೊಂದಿಗೆ ರಾಜ್ಯಪಾಲರ ಸಮಾಲೋಚನೆ

by KM Shivaraju August 6, 2024
written by KM Shivaraju August 6, 2024 0 comments 1 minutes read
0FacebookTwitterPinterestEmail
379

ದೂರುದಾರ ಟಿ.ಜೆ.ಅಬ್ರಹಾಂರಿಂದ ರಾಜ್ಯಪಾಲರಿಗೆ ಹೆಚ್ಚಿನ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮುಡಾದಿಂದ ಪಡೆದ ಬಿಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ದೂರುದಾರ ಟಿ.ಜೆ.ಅಬ್ರಹಾಂ ಅವರಿಂದ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ಇಂದು ಮತ್ತಷ್ಟು ಮಾಹಿತಿ ಪಡೆದಿದ್ದಾರೆ.

ಅಬ್ರಹಾಂ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲರು, ಸುಮಾರು 90 ನಿಮಿಷಗಳ ಕಾಲ ಮುಡಾ ಹಗರಣ ಹಾಗೂ ಅಬ್ರಹಾಂ ವಿರುದ್ಧ ಮುಖ್ಯಮಂತ್ರಿ ಮತ್ತು ಸರ್ಕಾರ ಮಾಡಿರುವ ದೂರಿನ ಬಗ್ಗೆಯೂ ವಿವರಣೆ ಪಡೆದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ರಹಾಂ ನೀಡಿದ ಮತ್ತಷ್ಟು ದಾಖಲೆ ಹಾಗೂ ಆತ ಮುಡಾಗೆ ನೀಡಿರುವ ಅರ್ಜಿ ಮತ್ತು ಲೋಕಾಯುಕ್ತರಿಗೆ ನೀಡಿರುವ ದೂರಿಗೆ ಸಂಬಂಧಿಸಿದಂತೆಯೂ ಮಾಹಿತಿ ಪಡೆದುಕೊಂಡರು.

ಅಬ್ರಹಾಂ ದೂರಿನ ಮೇಲೆ ಸರ್ಕಾರಕ್ಕೆ ನೀಡಿದ್ದ ನೋಟಿಸ್‌ಗೆ ಬಂದಿರುವ ಎರಡು ಪತ್ರಗಳಲ್ಲಿ ತಮಗೆ ಎದುರಾದ ಸಂಶಯಗಳ ಬಗ್ಗೆ ರಾಜ್ಯಪಾಲರು ವಿವರಣೆ ಪಡೆದರೆನ್ನಲಾಗಿದೆ.

ಈ ಸಂದರ್ಭದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದು, ಅವರ ನಡುವೆ ನಡೆದ ಕಲಾಪದ ಪೂರ್ಣ ವಿವರ ಲಭ್ಯವಾಗಿಲ್ಲ.

ರಾಜ್ಯಪಾಲರನ್ನು ಭೇಟಿ ಮಾಡಿ ರಾಜಭವನದಿಂದ ಹೊರಬಂದ ಅಬ್ರಹಾಂ, ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆಂಬ ವಿಶ್ವಾಸವಿದೆ.

ಭೇಟಿ ಸಂದರ್ಭದಲ್ಲಿ ನಾನು ಸಾಕಷ್ಟು ವಿವರಣೆ ನೀಡಿದ್ದೇನೆ, ಅದಕ್ಕೆ ರಾಜ್ಯಪಾಲರಿಂದ ನ್ಯಾಯ ದೊರೆಯಲಿದೆ.

ನನ್ನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೇಳುತ್ತಾರೆ ಎಂದರೆ, ಅವರಿಗೆ ಇದನ್ನು ಮುಂದುವರೆಸಲು ಆಸಕ್ತಿ ಇದೆ ಎಂದಲ್ಲವೆ.

ನನ್ನ ವಿರುದ್ಧ ಮುಖ್ಯಮಂತ್ರಿ ಹಾಗೂ ಸಂಪುಟ ಕೆಲವು ಆರೋಪಗಳನ್ನು ಮಾಡಿದೆ, ಅದಕ್ಕೆ ಸಂಬಂಧಿಸಿದಂತೆಯೂ ನಾನು ಸ್ಪಷ್ಟನೆ ನೀಡಿದ್ದೇನೆ.

ನನ್ನ ವಿರುದ್ಧ ರಾಜ್ಯದ ಯಾವುದೇ ಭಾಗದಲ್ಲಿ ಯಾವುದೇ ದೂರು ಇಲ್ಲ, ನಾನು ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ಪ್ರಕರಣ ದಾಖಲಾಗಿದ್ದರೆ ಅದನ್ನು ಹುಡುಕಿಕೊಡಲಿ ಎಂದರು.

ಇದಕ್ಕೂ ಮುನ್ನ ಮುಡಾ ಬಿಡಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂದಿರುವ ಆರೋಪಕ್ಕೆ ರಾಜ್ಯಪಾಲರು ಎರಡನೇ ದಿನವಾದ ಇಂದೂ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಕರ್ನಾಟಕದ ಅಡ್ವೋಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರೊಬ್ಬರನ್ನು ರಾಜಭವನಕ್ಕೆ ಕರೆಸಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿರುವ ಉತ್ತರಗಳ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಮ್ಮುಖದಲ್ಲೇ ಕೆಲವು ಮಾಹಿತಿ ಪಡೆದುಕೊಂಡರು.

ಇದಾದ ನಂತರ ರಾಜ್ಯಪಾಲರಿಗೆ ಪ್ರಕರಣ ಸಂಬಂಧ ಎದುರಾದ ಸಂಶಯಗಳ ಬಗ್ಗೆಯೂ ಕಾನೂನು ತಜ್ಞರೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿದರು.

ರಾಜಭವನ ನೀಡಿದ ನೋಟಿಸ್‌ಗೆ ಸರ್ಕಾರ ಪ್ರತ್ಯೇಕವಾಗಿ ಮೂರು ಸಮಜಾಯಿಷಿ ನೀಡಿದೆ, ಅದರಲ್ಲಿ ಮುಖ್ಯಮಂತ್ರಿ ಅವರು, ಸ್ವಯಂ ಪ್ರೇರಿತವಾಗಿ 60 ಪುಟಗಳ ಉತ್ತರ ಹಾಗೂ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನ ಹಾಗೂ ಮನವಿ ಕುರಿತು ಇಡೀ ದಿನ ಪರಿಶೀಲನೆ ಮತ್ತು ಚರ್ಚೆಯೇ ನಡೆಯಿತು.

ತದ ನಂತರ ಪ್ರಮುಖ ದೂರುದಾರ, ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರನ್ನು ಸಂಪರ್ಕಿಸಿದ ರಾಜಭವನ, ಮಧ್ಯಾನ್ಹ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುವಂತೆ ಸೂಚಿಸಿತು.
ರಾಜಭವನಕ್ಕೆ ಆಗಮಿಸಿದ ಅಬ್ರಹಾಂ ಅವರಿಂದ, ರಾಜ್ಯಪಾಲರು ಮತ್ತು ಕಾನೂನು ತಜ್ಞರು ತಮ್ಮಲ್ಲಿ ಮೂಡಿದ್ದ ಸಂಶಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಣೆ ಪಡೆದುಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AllotmentChief MinistercomplainantgovernorinformationMudaSiddaramaiah's familyThawarchand Gelhottj abraham
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ವಿರುದ್ಧ ಈಗ ಡಿ-ನೋಟಿಫೈ ದೂರು
next post
ರಾಜ್ಯಪಾಲರು ನಮ್ಮ ಉತ್ತರ ಒಪ್ಪಿಕೊಳ್ಳುವ ವಿಶ್ವಾಸವಿದೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ