Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ-ಜೆಡಿಎಸ್ ಕಪಟ ಷಡ್ಯಂತ್ರಕ್ಕೆ ಹೆದರುವುದಿಲ್ಲ

by admin August 9, 2024
written by admin August 9, 2024 0 comments 2 minutes read
0FacebookTwitterPinterestEmail
266

ಮೈಸೂರು:ಬಿಜೆಪಿ-ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ, ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ, ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿದ್ದೇನೆ, ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎಂಬ ಕಾರಣಕ್ಕೆ ನನ್ನನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ ಎಂದರು.

ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ, ಈಗ ನನ್ನನ್ನೂ ಸಹಿಸುತ್ತಿಲ್ಲ, ಬಿಜೆಪಿ-ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ, ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ, ಇದನ್ನು ಅವರು ಸಹಿಸುತ್ತಿಲ್ಲ.

ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರ !
ಸುಳ್ಳು ಆರೋಪ

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು, ದಾಖಲೆಗಳು ಸ್ಪಷ್ಟವಾಗಿವೆ, ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ, 50 ಕೋಟಿ ರೂ.ಗಳನ್ನು ಎಸ್‌ಐಟಿ ರಿಕವರಿ ಮಾಡಿದೆ, 46 ಕೋಟಿ ರೂ. ಖಾಸಗಿ ಬ್ಯಾಂಕ್‌ನಲ್ಲಿದ್ದು ಫ್ರೀಜ್ ಮಾಡಲಾಗಿದೆ, ಪರಿಣಾಮಕಾರಿಯಾಗಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಆದರೂ, ಜಾರಿ ನಿರ್ದೇಶನಾಲಯ (ಇ.ಡಿ) ಸ್ವಯಂ ಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ರಾಜ್ಯ ಸರ್ಕಾರದ ವಿರುದ್ಧ ಏನೂ ದಾಖಲೆ ಸಂಗರಹಿಸಲು ಆಗಲಿಲ್ಲ, ಆದ್ದರಿಂದ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೊಪ್ಪು ಹಾಕಬೇಡಿ, ನಂಬಬೇಡಿ

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ, ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ, ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಜನತೆಗೆ ಕರೆ ನೀಡಿದರು.

ಯಡಿಯೂರಪ್ಪ ಅವರು ಇಳಿ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೊ ಕೇಸಲ್ಲಿ ಇದ್ದಾರೆ, ನಾಚಿಕೆ ಆಗಲ್ವಾ ಎಂದು ಮೂದಲಿಸಿದರು.

ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು, ಸುಪ್ರೀಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ, ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ, ಇವರಿಗೆ ನಾಚಿಕೆ ಆಗಲ್ವಾ ಎಂದರು.

ಮಾಜಿ ಶಾಸಕ ಪ್ರೀತಂಗೌಡಗೆ ಜೆ.ಪಿ.ನಡ್ಡ ಖಡಕ್ ಎಚ್ಚರಿಕೆ
ಜೈಲಿಗೆ ಹೋಗಬೇಕಾದವರು

ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು, ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು, ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ.

ನಾನು 15 ಬಜೆಟ್ ಮಂಡಿಸಿದವನು, ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು, ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ, ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ, ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ.

ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ, ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ, ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ.

ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ?
ಇದು ಪರಮ ದ್ರೋಹ

ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ, ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ, ಇದು ಪರಮ ದ್ರೋಹ ಅಲ್ಲವೇ.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ, ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ, ಎರಡು ಬಾರಿ ಮುಖ್ಯಮಂತ್ರಿ ಆದರೂ ಪ್ರಮಾಣವಚನಕ್ಕೂ ಬರಲಿಲ್ಲ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ, ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ, ನಾನು ರಾಜಕೀಯದಲ್ಲಿ ಇರುವವರೆಗೂ, ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahDCM DK Shivakumarmysuru rallynot afraid
0 FacebookTwitterPinterestEmail
admin

previous post
ಮಾಜಿ ಶಾಸಕ ಪ್ರೀತಂಗೌಡಗೆ ಜೆ.ಪಿ.ನಡ್ಡ ಖಡಕ್ ಎಚ್ಚರಿಕೆ
next post
ಗಂಡಸ್ತನದಿಂದ ರಾಜಕೀಯ ಮಾಡಬೇಕು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ