Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

by KM Shivaraju August 11, 2024
written by KM Shivaraju August 11, 2024 0 comments 2 minutes read
0FacebookTwitterPinterestEmail
190

ತುಂಗಭದ್ರಾ ಜಲಾಶಯ : ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು “ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ” ಎಂದು ಹೇಳಿದರು.

“ಶನಿವಾರ ರಾತ್ರಿ ಜಲಾಶಯದ 10 ಗೇಟ್ ಗಳನ್ನು ತೆರೆಯಲಾಗಿತ್ತು. ಏಕಾಏಕಿ ಜಲಾಶಯದ 19 ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ” ಎಂದರು.

“ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19 ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ” ಎಂದು ಅವರು ಹೇಳಿದರು.

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

“ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ಸ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ” ಎಂದು ಅವರು ತಿಳಿಸಿದರು.

“ಅಣೆಕಟ್ಟಿನ ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿಎಂಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ” ಎಂದರು.

“ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ.ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು. ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.

ಬಾಗಿನ ಅರ್ಪಣೆ ಮುಂದೂಡಿಕೆ

“ಆ.13 ರಂದು ಅಣೆಕಟ್ಟು ತುಂಬಿದ ಹಿನ್ನೆಲೆಯಲ್ಲಿ ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಈಗ ಅದನ್ನು ಮುಂದೂಡಲಾಗಿದೆ. ಮೊದಲು ಅಣೆಕಟ್ಟಿನ ಸುರಕ್ಷತೆ ನಮಗೆ ಮುಖ್ಯವಾಗಿದೆ ” ಎಂದು ಅವರು ಹೇಳಿದರು.

ದುರಸ್ತಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆ ಕೇಳಿದಾಗ ” ನಮ್ಮ ಅಧಿಕಾರಿಗಳು ಪ್ರತಿಕ್ಷಣವೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಆದ ಕ್ಷಣದಿಂದ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಯಾರ ನಿರ್ಲಕ್ಷತೆಯಿಂದಲೂ ಈ ಅವಘಡ ನಡೆದಿಲ್ಲ. ಆಕಸ್ಮಿಕವಾಗಿ ಈ ಘಟನೆ ನಡೆದಿದೆ” ಎಂದು ಹೇಳಿದರು.

ಇತರೆ ಜಲಾಶಯಗಳನ್ನು ಪರಿಶೀಲಿಸಲಾಗುತ್ತದೆಯೇ ಎಂದು ಕೇಳಿದಾಗ “ಬೇರೆ ಜಲಾಶಯಗಳಲ್ಲಿ ರೋಪ್ ಹಾಗೂ ಚೈನ್ ಎರಡು ವ್ಯವಸ್ಥೆ ಮಾಡಲಾಗಿರುತ್ತದೆ. ಈ ಜಲಾಶಯವನ್ನು ವಿನ್ಯಾಸ ಮಾಡುವಾಗ ಚೈನ್ ವ್ಯವಸ್ಥೆ ಮಾಡಿದ್ದಾರೆ. ಮೊದಲು ಇಲ್ಲಿನ ಸಮಸ್ಯೆ ಪರಿಹರಿಸಿ ಆನಂತರ ಇತರೆಡೆ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
crest gateDeputy Chief Ministerdk shivakumarExpressing sadnesshigh-level technical teamIrrigation MinisterTungabhadra damunfortunate damage
0 FacebookTwitterPinterestEmail
KM Shivaraju

previous post
ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ ಮೆಂಟ್ ಕೊಡುತ್ತಾರೋ ನೋಡೋಣ
next post
ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲಿನೆಗೆ ತಜ್ಞರ ಸಮಿತಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ