Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರ ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ

by KM Shivaraju August 18, 2024
written by KM Shivaraju August 18, 2024 0 comments 3 minutes read
0FacebookTwitterPinterestEmail
438

ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್ : ಹೆಚ್ ಡಿಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ

ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಅವರು ಹೇಳಿದರು.

ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದ್ದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು.

ರಾಜ್ಯದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿ ಇದೆ

ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ಕಾಂಗ್ರೆಸ್ ವರಸೆಯೇ ಬದಲಾಗಿದೆ. ಲೋಕಸಭೆಯಲ್ಲಿ ಪಕ್ಷದ ಸಂಸದರಿಗೆ ಕೈಗೆ ಸಂವಿಧಾನದ ಪ್ರತಿ ಕೊಟ್ಟು ಪ್ರಮಾಣ ಸ್ವೀಕಾರ ಮಾಡಿಸುವ ಕಾಂಗ್ರೆಸ್, ಕರ್ನಾಟಕದಲ್ಲಿ ಮಾತ್ರ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೆಟ್ಟದಾಗಿ, ಅವಹೇಳನಕಾರಿಯಾಗಿ ಪ್ರತಿಭಟನೆ ಮಾಡಿಸುತ್ತಿದೆ. ಸಚಿವರು, ಶಾಸಕರು ರಾಜ್ಯಪಾಲರ ಬಗ್ಗೆ ಬಹಳ ಅಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಬೇರೆ ಯಾವ ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿಯನ್ನು ನಾನು ನೋಡಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರದಿಂದ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕುಮಾರಸ್ವಾಮಿ ಮೇಲೆ ಏಕೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿಲ್ಲಾ ಎಂದು ಕೇಳುತ್ತಿದ್ದಾರೆ. 2006ರಲ್ಲಿ ನಾನು ಸಿಎಂ ಆದ ಎರಡೇ ತಿಂಗಳಿಗೆ ಗಣಿಗಾರಿಕೆ ಮಾಲೀಕರಿಂದ ಹಣ ಸಂಗ್ರಹ ಮಾಡಿದ್ದೇನೆ ಎಂದು ಆರೋಪ ಮಾಡಿದ್ದರು. ಅದರ ಬಗ್ಗೆ ಒಂದು ಸಿಡಿ ಮಾಡಲು ಸಿಡಿ ಶಿವು ಪ್ರಯತ್ನ ಮಾಡಿದ್ದರು. ವಿಧಾನಸಭೆ ಕಲಾಪಕ್ಕೆ ಬಂದು ಆಪರೇಷನ್ ಸಕ್ಸಸ್ ಎಂದು ಹೇಳಿದ್ದರು. ನನ್ನ ಬಗ್ಗೆ ವಿಧಾನಸಭೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಿತು. ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದೆ. ಸಿದ್ದರಾಮಯ್ಯ ಅವರಿಗೆ ಇದು ನೆನಪಿದೆಯಾ? ಎಂದು ಅವರು ಪ್ರಶ್ನಿಸಿದರು.

ನಿಮ್ಮ ಹಾಗೆ ನಮ್ಮ ಕಾರ್ಯಕರ್ತರಿಗೆ ಬೀದಿಯಲ್ಲಿ ಬೆಂಕಿ ಹಾಕಿ ಅನ್ನಲಿಲ್ಲ. ಜಂತಕಲ್ ಮೈನಿಂಗ್ ಪ್ರಕರಣವನ್ನು ಹೈಕೋರ್ಟ್ ನಲ್ಲಿ ವಜಾ ಮಾಡಲಾಗಿದೆ. ಸಾಯಿ ವೆಂಕಟೇಶ್ವರ ಹಗರಣದ್ದು ತನಿಖೆ ಮಾಡಿ ಎಂದರು. ಇವರು ಬೇಕಾದರೆ ಸುಪ್ರೀಂ ಕೋರ್ಟ್ ಗೆ ಹೋಗಬಹುದು. ಇವರಿಗೆ ಬೇಡ ಎಂದವರು ಯಾರು? ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ನನ್ನನ್ನು ಹೆದರಿಸೋಕೆ ಇದನ್ನೆಲ್ಲಾ ಮಾಡುತ್ತಿದ್ದೀರಿ.. ಅಲ್ಲವೇ? ಯಾಕೆ ಈ ಡ್ರಾಮಾಗಳು? ನಿಮ್ಮ ಗೊಡ್ಡು ಬೆದರಿಕೆಗೆ ನಾನು ಹೆದರುತ್ತೇನೆಯೇ? ಅದು ನಿಮ್ಮ ಭ್ರಮೆಯಷ್ಟೇ. ರಾಜ್ಯಪಾಲರ ವಿರುದ್ದ ರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕೀಳುಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ. ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಪಕ್ಷದಿಂದ ಇಂಥ ಹಿನ ಕೆಲಸಗಳು ನಡೆಯುತ್ತಿವೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಯಾರೋ ಒಬ್ಬರು ಸಿದ್ದರಾಮಯ್ಯನವರ ಜತೆ ಬಂಡೆಯಂತೆ ನಿಲ್ಲುವೆ ಎಂದು ಸೋಗು ಹಾಕುತ್ತಿದ್ದಾರೆ. ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಡೇಂಜರ್. ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಈ ಗತಿ ಬಂದಿದೆ. ವೈನಾಡು, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಿ ಭೂ ಕುಸಿತ ಉಂಟಾಯಿತಲ್ಲ, ಆ ಮಣ್ಣಿನ ಜತೆ ಬಂದು ಬಿದ್ದವಲ್ಲ ಬಂಡೆಗಳು, ಅವೇ ಜನರ ಜೀವ ಜೀವ ತೆಗೆದಿದ್ದು. ಸಿದ್ದರಾಮಯ್ಯ ಅವರಿಗೆ ಬಂಡೆಯಿಂದಲ್ಲೇ ಪತನ ಶುರುವಾಗಿದೆ ಎಂದು ಕೇಂದ್ರ ಸಚಿವರು ಮಾರ್ಮಿಕವಾಗಿ ಹೇಳಿದರು.

ನಮ್ಮ ಪಾದಯಾತ್ರೆಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಹಗರಣದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಏಕೈಕ ಉದ್ದೇಶಕ್ಕೆ ಈ ಪಾದಯಾತ್ರೆ ನಡೆಸಲಾಯಿತು. ಒಟ್ಟಿನಲ್ಲಿ ಜೆಡಿಎಸ್- ಬಿಜೆಪಿ ಸಂಘಟಿತ ಹೋರಾಟವನ್ನು ಜನರು ಗಮನಿಸಿದ್ದಾರೆ ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಅವರು ಹಟವಿಡಿದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಅವರ ಮೇಲೆ ಒತ್ತಡ ಹೇರಿ ರಾಜ್ಯಪಾಲರಿಂದ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ಅನುಮತಿ ಕೊಡಿಸಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ನಮಗೇನು ಬೇರೆ ಕೆಲಸ ಇಲ್ಲವೇ? ಅವರ ಪಕ್ಷದಲ್ಲಿನ ಪಿತೂರಿಗೆ ಸಿದ್ದರಾಮಯ್ಯ ಅವರು ಬಲಿಯಾಗುತ್ತಿದ್ದಾರೆ ಎಂದು ಅವರು ಸೂಚ್ಯವಾಗಿ ಹೇಳಿದರು.

ಕಾಡುಗೊಲ್ಲರ ಬಗ್ಗೆ ಚರ್ಚೆ ಮಾಡಲು ದೇವೇಗೌಡರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಹೋಗಿದ್ದರು. ನಾನೂ ಹೋಗಿದ್ದೆ. ಇದಕ್ಕೆ ರಾಜಕೀಯ ಬಣ್ಣ ಬಳಿಯುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ನಮ್ಮ ಮೇಲೆ ಕಾಂಗ್ರೆಸ್ ನವರು ವಿನಾಕಾರಣ ಕೆಂಡ ಕಾರುತ್ತಿದ್ದಾರೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ನನ್ನನ್ನು ಜೈಲಿಗೆ ಕಳಿಸಬೇಕು ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣಗಳು ಹೆಚ್ಚಾದಾಗ ಅವುಗಳನ್ನು ಮುಚ್ಚಿ ಹಾಕಲು ಎಸಿಬಿ ಅಂತ ರಚನೆ ಮಾಡಿಕೊಂಡು ರಕ್ಷಣೆ ಪಡೆದುಕೊಂಡಿರಿ. ಸಿದ್ದರಾಮಯ್ಯ ಬಗ್ಗೆ ಸಾಕಷ್ಟು ವಿಷಯ ಇದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಕೇಳಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅದು ನನಗೆ ಗೊತ್ತಿದೆ. ಕಾನೂನು ಅಂತ ಒಂದಿದೆ. ಯಾವ ಹಂತದಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
blackmailingCongress governmentdangerhdkrockscaringSiddaramaiah
0 FacebookTwitterPinterestEmail
KM Shivaraju

previous post
ಪ್ರಾಸಿಕ್ಯೂಷನ್ ಷಡ್ಯಂತ್ರ, ರಾಜೀನಾಮೆ ನೀಡುವುದಿಲ್ಲ
next post
ಪ್ರಾಸಿಕ್ಯೂಷನ್ ಕುರಿತು ಬಿಜೆಪಿ ನಾಯಕರ ದ್ವಂದ್ವ ನೀತಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ