Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಾಸಿಕ್ಯೂಷನ್ ಕುರಿತು ಬಿಜೆಪಿ ನಾಯಕರ ದ್ವಂದ್ವ ನೀತಿ

by admin August 19, 2024
written by admin August 19, 2024 0 comments 1 minutes read
0FacebookTwitterPinterestEmail
125

ಬೆಂಗಳೂರು:ರಾಜ್ಯಪಾಲ ಹಂಸರಾಜ ಭಾರದ್ವಾಜ 2011ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ರಾಚೇನಹಳ್ಳಿ ಡಿ-ನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಮುಖ್ಯಮಂತ್ರಿ ರಾಜೀನಾಮೆ ಏಕೆ ನೀಡಬೇಕು ಎಂಬುದಾಗಿ ಕೇಳಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು ನನ್ನ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, 2011ರ ಜನವರಿ 21ರಂದು, ಯಡಿಯೂರಪ್ಪ ವಿರುದ್ಧ ಅರ್ಜಿದಾರರು ನೀಡಿದ್ದ 1,600 ಪುಟಗಳ ದಾಖಲೆಗಳ ಸಾಕ್ಷ್ಯ ಪರಿಶೀಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು, ಆದರೂ, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದರು.

ಶಾಂತಿಯುತ ಪ್ರತಿಭಟನೆ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪರ ಮಾತನಾಡುತ್ತಿರುವ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಅವಹೇಳನ ಮಾಡಿದ್ದು ಮರೆತಂತಿದೆ, ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವುದನ್ನು ಪ್ರಶ್ನಿಸುತ್ತಿದ್ದಾರೆ, ಅಂದು ರಾಜ್ಯಪಾಲರ ನಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಮರೆತುಹೋಗಿದೆಯೇ ಎಂದಿದ್ದಾರೆ.

ಆರ್.ಅಶೋಕ್ ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ, ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶ ಪರಿಶೀಲಿಸಿ ಮಾತನಾಡಬೇಕು, ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ.

ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತ, ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ ಆಗಸ್ಟ್ ೪ರ 2011ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಂಬುದನ್ನು ಮರೆತಿದ್ದೀರಾ.

ಆಡಳಿತ-ಪ್ರತಿಪಕ್ಷಗಳ ಧರಣಿ, ಪ್ರತಿಭಟನೆ, ಮುತ್ತಿಗೆ ಯತ್ನ
ಹಳೆಯದನ್ನು ನೆನಪಿಸಿಕೊಳ್ಳಿ

ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂಬುದಾಗಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಢೀಕರಿಸಿರಲಿಲ್ಲವೇ, ಆಗ ಒಂದಲ್ಲ, ಎರಡಲ್ಲ ಹದಿನೈದು ಡಿ-ನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು, ಹೆಚ್ಚಿನ ಮಾಹಿತಿಗೆ ನ್ಯಾ.ಹೆಗ್ಡೆ ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿ ಓದಿಕೊಳ್ಳಿ ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BJP leaderscm siddaramaiah tweetdouble standard
0 FacebookTwitterPinterestEmail
admin

previous post
ಕಾಂಗ್ರೆಸ್ ಸರ್ಕಾರ ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ
next post
ಆಡಳಿತ-ಪ್ರತಿಪಕ್ಷಗಳ ಧರಣಿ, ಪ್ರತಿಭಟನೆ, ಮುತ್ತಿಗೆ ಯತ್ನ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ