Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ?

by KM Shivaraju August 19, 2024
written by KM Shivaraju August 19, 2024 0 comments 3 minutes read
0FacebookTwitterPinterestEmail
367

10 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು.

ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳ ಹುನ್ನಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು.

“ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ” ಎಂದರು.

“ಸರ್ಕಾರ ನೀಡಿರುವ ಸಲಹೆಗಳನ್ನೂ ಓದದ ರಾಜ್ಯಪಾಲರು ಟಿ.ಜೆ.ಅಬ್ರಹಾಂ ಎನ್ನುವ ವ್ಯಕ್ತಿ ಬೆಳಗ್ಗೆ ಅರ್ಜಿ ಕೊಟ್ಟರೆ, ಸಾಯಂಕಾಲದ ವೇಳೆಗೆ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರೇ ನಿಮ್ಮದು ಸಾಂವಿಧಾನಿಕ ಹುದ್ದೆ, ನಿಮ್ಮ ಮೇಲೆ ಈಗಲೂ ಗೌರವವಿದೆ. ನಿಮಗೆ ಸಾಕಷ್ಟು ಸಮಯವಿದ್ದು ವಿಚಾರಣೆಗೆ ನೀಡಿರುವ ಅನುಮತಿ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದರು.

ರಾಜ್ಯಪಾಲರ ಹುದ್ದೆ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್

“ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿರುವ ಅನುಮತಿ ವಿರುದ್ದ ನ್ಯಾಯಲಯದಲ್ಲಿ ನಮ್ಮ ಪರವಾಗಿ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇವೆ. ಹಿಂಬಾಗಿಲ ಮೂಲಕ ಬಿಜೆಪಿ, ಜೆಡಿಎಸ್ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿವೆ. ಸಂವಿಧಾನದ ಮೂಲಕ ರಾಜ್ಯಪಾಲರ ಕುರ್ಚಿಯನ್ನು ಸೃಷ್ಟಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ನಮ್ಮ ಪಕ್ಷ ಕೊಟ್ಟಿರುವ ಸಂವಿಧಾನದ ಹಕ್ಕನ್ನು ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅವಕಾಶ ನೀಡಿರುವುದು ಹಾಸ್ಯಾಸ್ಪದ” ಎಂದರು.

“ಪ್ರತಿಪಕ್ಷಗಳಿಗೆ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಮೇಲೆ ಅಸೂಯೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗದ ನಾಯಕನೊಬ್ಬ ಗ್ಯಾರಂಟಿಗಳನ್ನು ನೀಡಿ ಜನರ ಹೃದಯ ಗೆದ್ದಿದ್ದಾರೆ ಎಂಬುದನ್ನು ಪ್ರತಿಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಧಿಕಾರ ಸಿಗಲಿಲ್ಲ ಎಂದು ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

“ಪ್ರತಿಪಕ್ಷದವರಿಗೆ ಹೊಟ್ಟೆಯುರಿ ಬಂದರೆ ನಮ್ಮ ಬಳಿ ಇರುವ ವೈದ್ಯರಿಂದ ಔಷಧಿ ಕಳಿಸಿಕೊಡೋಣ. ಹೊಟ್ಟೆಯುರಿಗೆ ಔಷಧವಿದೆ. ಆದರೆ ಅಸೂಯೆಗೆ ಮದ್ದಿಲ್ಲ. ನಾವು ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಪ್ರಮೇಯವಿಲ್ಲ” ಎಂದರು.

“ಜನ ಬಹುಮತ ನೀಡಿರುವ ಕಾರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಪ್ರಮಾಣ ವಚನ ಬೋಧನೆ ಮಾಡಿದರು. ಏಕೆ ಈಗ ಒಳಸಂಚು ಮಾಡುತ್ತಿದ್ದೀರಿ. ನಿಮಗೆ ಸಂವಿಧಾನವನ್ನು ಕಾಪಾಡುವ ಜವಾಬ್ದಾರಿ ನೀಡಲಾಗಿದೆ. ಆದರೆ ನೀವು ಏಕೆ ಇದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ? ಸಂವಿಧಾನವನ್ನು ಕಾಪಾಡಬೇಕೆ ಹೊರತು, ಆ ಕುರ್ಚಿಗೆ ಕಳಂಕ ತರಬಾರದು ಎಂದು ನಿಮಗೆ ಸಲಹೆಯನ್ನು ನೀಡುತ್ತಿದ್ದೇವೆ” ಎಂದು ಹೇಳಿದರು.

“ನಮ್ಮ ಮುಖ್ಯಮಂತ್ರಿಗಳ ಮೇಲೆ ಅಗಾಧವಾದ ಆರೋಪಗಳು ಬಂದಿವೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಆ ಆರೋಪಗಳ ಮೇಲೆ ನೀವು ತನಿಖೆ ನಡೆಸಿದ್ದೀರಾ? ಇದರ ಬಗ್ಗೆ ಯಾವುದಾದರೂ ತನಿಖಾ ಸಂಸ್ಥೆಗಳು ವರದಿ ನೀಡಿದ್ದಾವೆಯೇ? ಅಧಿಕಾರಿಗಳು, ಲೋಕಾಯುಕ್ತರು ಇಬ್ಬರಲ್ಲಿ ಯಾರು ನಿಮಗೆ ವರದಿ ನೀಡಿದ್ದಾರೆ” ಎಂದು ಖಾರವಾಗಿ ಪ್ರಶ್ನಿಸಿದರು.

“ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಎಂದು ಬ್ರಿಟಿಷರು 200 ವರ್ಷಗಳ ಕಾಲ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಈ ದೇಶದ ಜನರಿಗೆ ಸಂವಿಧಾನ, ಪ್ರಜಾಪ್ರಭುತ್ವ ಸೇರಿದಂತೆ ಎಲ್ಲಾ ಹಕ್ಕುಗಳನ್ನು ನೀಡಿದ್ದು ಕಾಂಗ್ರೆಸ್. ನಮ್ಮ ಸರ್ಕಾರದ ಯೋಜನೆಗಳನ್ನು ನೋಡಿ ಬಿಜೆಪಿಯವರು ಅನೇಕ ಕಡೆ ಕರ್ನಾಟಕ ಮಾಡೆಲ್ ಎಂದು ಜಾರಿಗೆ ತರುತ್ತಿದ್ದಾರೆ. ಇದು ಆ ಪಕ್ಷಕ್ಕೆ ಹೊಟ್ಟೆಯುರಿಯಾಗಿದೆ” ಎಂದರು.

“ನನ್ನ ಅಧ್ಯಕ್ಷತೆ ಹಾಗೂ ಸಿದ್ದರಾಮಯ್ಯ ಅವರ ಮುಖಂಡತ್ವಕ್ಕೆ 136 ಸ್ಥಾನವನ್ನು ನೀಡಿ, ಉತ್ತಮ ಆಡಳಿತ ನೀಡಿ ಎಂದು ಜನ ಅವಕಾಶಕೊಟ್ಟಿದ್ದಾರೆ. ಸರ್ಕಾರವನ್ನು ಅಲುಗಾಡಿಸುವವರ ವಿರುದ್ಧದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಎಲ್ಲರ ಜೊತೆ ಚರ್ಚೆ ಮಾಡಿ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯ ಅವರ ಜೊತೆ ನಿಂತು ಅವರ ಪರವಾಗಿ ಇರುತ್ತೇವೆ” ಎಂದರು.

ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಸಾಧ್ಯವಿಲ್ಲ

“ಬಿಜೆಪಿಯ ಹುನ್ನಾರಗಳನ್ನು ಜನರಿಗೆ ತಿಳಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಲಾಗುವುದು. ಬಿಜೆಪಿಯವರು ಅಧಿಕಾರಕ್ಕೆ ಏಕೆ ಬರಲಿಲ್ಲ. ನೀವು ಈ ಹಿಂದೆ 17 ಜನರನ್ನು ಕರೆದುಕೊಂಡು ಹೋಗಿ ಆಪರೇಷನ್ ಕಮಲ ಮಾಡಿ ಜನತಾದಳ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿದವರು. ಈ ಬಾರಿಯೂ ಸ್ವಲ್ಪ ಪ್ರಯತ್ನ ಪಟ್ಟರು. ಆದರೆ ಅವರ ಆಟ ನಡೆಯಲಿಲ್ಲ. ಮುಂದಕ್ಕೂ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಶಾಸಕನನ್ನು ಖರೀದಿ ಮಾಡಲು ಸಾಧ್ಯವಿಲ್ಲ” ಎಂದು ಸವಾಲು ಹಾಕಿದರು.

“ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ಅವರು ಎಲ್ಲಾದರೂ ಪ್ರಭಾವ ಬೀರಿದ್ದಾರೆಯೇ. ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಅಣ್ಣ ಅರಿಶಿನ, ಕುಂಕುಮಕ್ಕೆ ಎಂದು ಜಮೀನು ದಾನ ಕೊಟ್ಟಿದ್ದರು. ಇದನ್ನು ಮುಡಾ ಆಕ್ರಮಿಸಿಕೊಂಡ ಕಾರಣಕ್ಕೆ ಪರಿಹಾರ ನೀಡಿ ಎಂದು ಮನವಿ ಮಾಡಿದ್ದರು. ಸಿಎಂ ಅವರ ಪತ್ನಿ ಇಂತಲ್ಲೇ ಸೈಟ್ ಬೇಕು ಎಂದು ಎಲ್ಲಿಯೂ ಮನವಿ ಮಾಡಿಲ್ಲ. ಸಿದ್ದರಾಮಯ್ಯ ಅವರು ಎಲ್ಲಿಯೂ ಪ್ರಭಾವ ಬೀರಿಲ್ಲ. ಇದು ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಈಗ ಅವರೇ ಆರೋಪ ಮಾಡುತ್ತಿರುವುದು ಎಷ್ಟು ಸರಿ?” ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Deputy Chief MinisterDKH D KumaraswamyKarnataka GovernorLokayuktapermissionprosecutequestionedShivakumarunion minister
0 FacebookTwitterPinterestEmail
KM Shivaraju

previous post
ದೊಡ್ಡಗೌಡರ ವಿರುದ್ಧ ಅಪಪ್ರಚಾರ ನಿಲ್ಲಿಸದಿದ್ದರೆ ಹೋರಾಟ
next post
ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿಕೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ