Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಕೇಸ್ !

by admin August 20, 2024
written by admin August 20, 2024 0 comments 2 minutes read
0FacebookTwitterPinterestEmail
431

ಥಾವರ್‌ಚಂದ್ ಗೆಹ್ಲೋಟ್ ಕುರಿತ ಅವಮಾನಕರ ಹೇಳಿಕೆ

ಬೆಂಗಳೂರು:ಪರಿಶಿಷ್ಟ ಜಾತಿಗೆ ಸೇರಿದ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಪೋಲಿಸ್ ಮಹಾನಿರ್ದೇಶಕರಿಗೆ ರಾಜ್ಯ ಬಿಜೆಪಿ ಇಂದಿಲ್ಲಿ ಒತ್ತಾಯಿಸಿದೆ.

ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ್, ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಾಲಿ ಶಾಸಕರು, ಮಾಜಿ ಸಚಿವರುಗಳ ನಿಯೋಗ ಪೋಲಿಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಂವಿಧಾನಕ್ಕೆ ಅವಮಾನ

ಕಾಂಗ್ರೆಸ್ ನಾಯಕರು ರಾಜ್ಯಪಾಲರ ಕುರಿತು ನೀಡುತ್ತಿರುವ ಹೇಳಿಕೆಗಳು ಸಂವಿಧಾನಕ್ಕೆ ಮತ್ತು ಪರಿಶಿಷ್ಟ ಜನಾಂಗಕ್ಕೆ ಮಾಡಿದ ಅವಮಾನ, ಅಲ್ಲದೆ, ಈ ರೀತಿಯ ಹೇಳಿಕೆಗಳು ಅತ್ಯಂತ ಸೂಕ್ಷ್ಮವಾಗಿದ್ದು ಸಮಾಜವನ್ನು ಪ್ರಚೋಧಿಸುವುದಾಗಿವೆ.

ಸಂವಿಧಾನದ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡಿರುವ ಸಚಿವರಾದ ಜಮೀರ್ ಅಹಮದ್ ಖಾನ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಶಾಸಕರಾದ ನಂಜೇಗೌಡ, ಐವಾನ್ ಡಿಸೋಜ ಹಾಗೂ ಇನ್ನೂ ಅನೇಕ ನಾಯಕರ ವಿರುದ್ಧ ಜಾತಿ ನಿಂದನೆ ಹಾಗೂ ಗೂಂಡಾ ಕಾಯಿದೆಯಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ.

ತನಿಖೆ ಎದುರಿಸಿ

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಜೋಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆ ಎದುರಿಸಿ ಆರೋಪಮುಕ್ತರಾಗಿ ಹೊರಬರಬೇಕು, ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಮೇಲೆ ಆರೋಪ ಬಂದಾಗ ಅವರನ್ನು ಅಪರಾಧಿ ಎನ್ನುವುದಿಲ್ಲ, ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಸಿದ್ದರಾಮಯ್ಯ ಮೇಲಿದೆ, ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು.

ಅದನ್ನು ಬಿಟ್ಟು ಸಂವಿಧಾನಿಕ ಹುದ್ದೆಯಲ್ಲಿರುವ, ರಾಷ್ಟ್ರಪತಿಗಳ ಪ್ರತಿನಿಧಿ ಎನಿಸಿದ ರಾಜ್ಯಪಾಲರನ್ನು ಅವಮಾನಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಸಂಸ್ಕೃತಿ ಎಂಬುದು ಇದೆಯೇ ಎಂದರು.

ರಾಜೀವ್ ಗಾಂಧಿ, ಅರಸು ಸಾಮಾಜಿಕ ಕ್ರಾಂತಿ ಹರಿಕಾರರು
ಸಾಮಾಜಿಕ ನ್ಯಾಯ ತಿಳಿಯದವರು

ಸಾಮಾಜಿಕ ನ್ಯಾಯದ ಗಂಧವೇ ತಿಳಿಯದವರು ಕಾಂಗ್ರೆಸ್ಸಿಗರು, ಚಪ್ಪಲಿಯಿಂದ ರಾಜ್ಯಪಾಲರ ಫೋಟೊಗೆ ಹೊಡೆದುದಲ್ಲದೆ ಅವರ ಭಾವಚಿತ್ರ ಸುಟ್ಟಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದಲಿತ ವ್ಯಕ್ತಿ ರಾಜ್ಯಪಾಲರ ಹುದ್ದೆಯಲ್ಲಿ ಇರುವುದು ನಿಮ್ಮ ಗಮನದಲ್ಲಿಲ್ಲವೇ ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಸಂಸ್ಕೃತಿ ಇರಲು ಸಾಧ್ಯವೇ ಎಂದರು.

ರಾಮಕೃಷ್ಣ ಹೆಗಡೆ ಅವರ ಮೇಲೆ ಟೆಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು, ಕಾಂಗ್ರೆಸ್ಸಿನವರೇ ಆದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರೈಲ್ವೆ ಸಚಿವರಾಗಿದ್ದಾಗ ರೈಲು ಅವಘಡ ನಡೆದಿದ್ದು, ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಿದ್ದರು.

ರಾಜಭವನಕ್ಕೆ ನುಗ್ಗುವ ಬೆದರಿಕೆ

ಶಾಸಕ ಐವಾನ್ ಡಿಸೋಜ ಅವರು ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ, ರಾಜಭವನಕ್ಕೆ ನುಗ್ಗಿ ತೊಂದರೆ ಮಾಡುತ್ತೇವೆ ಎಂದಿದ್ದಾರೆ, ಇದರಿಂದ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ನನಗೆ ಬರುತ್ತಿದೆ.

ಐವಾನ್ ಡಿಸೋಜ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟಬೇಕು, ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಬೇಕು ಎಂದು ಗೋವಿಂದ ಕಾರಜೋಳ ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 2 ಪ್ರಮುಖ ಹಗರಣಗಳಲ್ಲಿ ಸಿಲುಕಿದ್ದಾರೆ, ಮುಡಾದಲ್ಲಿ ಅನಧಿಕೃತ, ಕಾನೂನುಬಾಹಿರವಾಗಿ ಅವರ ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿರುವುದು, ರಾಜ್ಯದ ಪರಿಶಿಷ್ಟ ಜಾತಿ, ಜನಾಂಗಗಳಿಗೆ ಸೇರಿದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗಲುದರೋಡೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.

ಮುಡಾ ಹಗರಣದಲ್ಲಿ ಆರ್‌ಟಿಐ ಕಾರ್ಯಕರ್ತ ಅಬ್ರಹಾಂ, ಹಗರಣಗಳ ಲೂಟಿಯ ವಿವರ ಪಡೆದು ಕೇಸು ದಾಖಲಿಸಿದ್ದಾರೆ, ಯುಪಿಎ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಳಿಸಿದ್ದಾಗಿ ಕಾಂಗ್ರೆಸ್‌ನವರು ಡಂಗೂರ ಸಾರುತ್ತ ಓಡಾಡಿದರು, ಈಗ ಅವರೇ ತಂದ ಕಾಯ್ದೆಯನ್ನು ಅವರೇ ಗೌರವಿಸುತ್ತಿಲ್ಲ ಎಂದು ಆಕ್ಷೇಪಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres leaderscriticised governordefamation casegovernor thavar chand gehlot
0 FacebookTwitterPinterestEmail
admin

previous post
ರಾಜೀವ್ ಗಾಂಧಿ, ಅರಸು ಸಾಮಾಜಿಕ ಕ್ರಾಂತಿ ಹರಿಕಾರರು
next post
ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆಗೆ ಕೋರಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ