Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಕಾರ ಸ್ಮರಣೆಯೇ ಇಲ್ಲದ ನಾಗರಿಕರು

by admin August 22, 2024
written by admin August 22, 2024 0 comments 3 minutes read
0FacebookTwitterPinterestEmail
524

ಯಾರು ಏನೇ ಅಂದರೂ ನೀರಿನ ದರ ಏರಿಕೆ ಶತಸಿದ್ಧ

ಬೆಂಗಳೂರು:ನಾಗರಿಕರಿಗೆ ಎಷ್ಟೇ ಅನುಕೂಲ ಮಾಡಿಕೊಟ್ಟರೂ ಉಪಕಾರ ಸ್ಮರಣೆಯೇ ಇಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಡಿಯುವ ನೀರಿದ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಜನ, ರಾಜಕಾರಣಿಗಳು, ಮಾಧ್ಯಮ, ಎಷ್ಟೇ ನಿಂದಿಸಲಿ, ನಾನು ನೀರಿನ ದರ ಏರಿಸಿಯೇ ಏರಿಸುತ್ತೇನೆ.

ನಾನು ಯಾರಿಗೂ ಕೇರ್ ಮಾಡುವುದಿಲ್ಲ, ನೀರಿನ ದುಡ್ಡು ಕಟ್ಟುವವರು ಕಟ್ಟುತ್ತಾರೆ, ಇನ್ನು ಕೆಲವರು ಉಚಿತವಾಗಿ ಬಳಕೆ ಮಾಡುತ್ತಾರೆ ಎಂದರು.

ಸಾರ್ವಜನಿಕರ ಮೇಲೆ ಕಿಡಿ

ಬೆಂಗಳೂರು ನಗರ ಮತ್ತು ಜಲಸಂಪನ್ಮೂಲ ಇಲಾಖೆ ಹೊಣೆ ಹೊತ್ತಿರುವ ಶಿವಕುಮಾರ್, ಲೋಕಸಭಾ ಚುನಾವಣೆ ಫಲಿತಾಂಶವನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾರ್ವಜನಿಕರ ಮೇಲೆ ಕಿಡಿಕಾರಿದ್ದಾರೆ.

ಪೆಟ್ರೋಲ್, ಡೀಸೆಲ್, ಹಾಲು ದರ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ನೀರಿನ ದರ ಏರಿಕೆಗೆ ಮುಂದಾಗಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಯೇ ಇಲ್ಲ, ಆದರೂ ಬಿಡ್ಲ್ಯೂಎಸ್‌ಎಸ್‌ಬಿ ಕಷ್ಟ ಪಟ್ಟು ನಿರ್ವಹಣೆ ಮಾಡುತ್ತಿದೆ, ಯಾರು ಎಷ್ಟೇ ಆಕ್ಷೇಪ ವ್ಯಕ್ತಪಡಿಸಿದರೂ ನಾನು, ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ.

ಕಂಪನಿ ಉಳಿಯುವುದಿಲ್ಲ

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರು ಒದಗಿಸಲೇಬೇಕು, ಇದಕ್ಕಾಗಿ ಸಾಲ ಮಾಡಿ, ಸಂಪರ್ಕಜಾಲ ಹೆಚ್ಚಿಸದೆ ಎಲ್ಲರಿಗೂ ನೀರು ಕೊಡಲು ಕಷ್ಟವಾಗುತ್ತದೆ, ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ.

ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ, ನೌಕರರಿಗೆ ಸಂಬಳ ನೀಡಲು ಆಗುತ್ತಿಲ್ಲ, ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ, ಎಷ್ಟು ಏರಿಕೆ ಮಾಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ, ಚರ್ಚೆ ಮಾಡಲಿ, ಧರಣಿ ಮಾಡಲಿ, ನಾನು ದರ ಹೆಚ್ಚಳಕ್ಕೆ ಬದ್ಧವಾಗಿದ್ದೇನೆ ಎಂದರು.

ಕಳೆದ 14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ದರ ಹೆಚ್ಚಳವಾಗಿದೆ, ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ.

ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ್ದಕ್ಕೆ ಮೂರೂವರೆ ರೂ.ಗೆ ವಿದ್ಯುತ್ ಸಿಗುತ್ತಿದೆ, ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು, ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ.

ನಾನು ಇರುವ ತನಕ ಸಾಧ್ಯವಿಲ್ಲ

ಬಿಡಬ್ಲ್ಯೂಎಸ್‌ಎಸ್‌ಬಿ ಹೊಣೆ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು, ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು, ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ, ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ, ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ.

ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವು, ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ, ಈಗ ನೀರಾವರಿ ಸಚಿವನಾಗಿದ್ದೇನೆ, ಜೆ.ಹೆಚ್.ಪಟೇಲ್ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎಂಬ ಪ್ರಸ್ತಾವನೆ ಬಂದಿತ್ತು, ನಂತರ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗಲೂ ಈ ಬಗ್ಗೆ ದೊಡ್ಡ ಚರ್ಚೆಯಾಯಿತು.

ಎಸ್.ಎಂ.ಕೃಷ್ಣ ಅವರು ನನ್ನನ್ನು ಹೊರದೇಶಕ್ಕೆ ಕಳುಹಿಸಿ ನೀರು ಸರಬರಾಜು ಖಾಸಗೀಕರಣದ ಬಗ್ಗೆ ಅಧ್ಯಯನ ಮಾಡುವಂತೆ ತಿಳಿಸಿದ್ದರು, ನಾನು ಫ್ರ್ಯಾನ್ಸ್ ಹಾಗೂ ಇತರ ದೇಶಗಳಿಗೆ ಹೋಗಿದ್ದೆ, ಅಲ್ಲಿ ಒಂದು ರೀತಿಯ ಪದ್ಧತಿ ಇದೆ, ನಮ್ಮಲ್ಲಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಎಂಜಿನಿಯರ್‌ಗಳು ಹೊರದೇಶದಲ್ಲಿರುವ ಎಂಜಿನಿಯರ್‌ಗಳಿಗಿಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ನೀಡಿದ್ದೆ.

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು
ಖಾಸಗೀಕರಣಕ್ಕೆ ವ್ಯಾಪಕ ಖಂಡನೆ

ನೀರಿನ ಪೈಪ್‌ಲೈನ್ ಬದಲಾಯಿಸಿ ಹೊಸ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿ ಶೇ.30ರಷ್ಟು ಹೆಚ್ಚು ವೆಚ್ಚ ಕೇಳುತ್ತಾರೆ, ಆ ವ್ಯವಸ್ಥೆ ನಮ್ಮ ರಾಜ್ಯಕ್ಕೆ ಅನುಕೂಲಕರವಾಗಿಲ್ಲ, ದೆಹಲಿ, ಮುಂಬೈಗೆ ಸೂಕ್ತವಾಗಿದೆ ಎಂದು ವರದಿ ನೀಡಿದೆ, ಖಾಸಗೀಕರಣದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾದ ಕಾರಣ ಪ್ರಸ್ತಾವನೆ ಕೈ ಬಿಡಲಾಯಿತು.

ನಾನು ಅಧಿಕಾರವಹಿಸಿಕೊಂಡ ತಕ್ಷಣ ೬ ಎಂಎಲ್‌ಡಿ ನೀರು ಸರಬರಾಜು ಹೆಚ್ಚಳ ಮಾಡಲಾಗಿದೆ, ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ, ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ, ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು, ಮೇಕೆದಾಟು ಯೋಜನೆ ಬಗ್ಗೆ ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದರು.

ಕೆಆರ್‌ಎಸ್‌ನಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರು ತರಬಹುದು ಎಂಬುದಾಗಿ ಕೆಲವರು ವರದಿ ಕೊಟ್ಟಿದ್ದಾರೆ, ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ, ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಾವೇರಿ 5ನೇ ಹಂತಕ್ಕೆ ಮತ್ತೆ ಚಾಲನೆ

ರಾಜಕಾರಣದಿಂದಾಗಿ ಎತ್ತಿನಹೊಳೆ ಯೋಜನೆ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ, ಇದನ್ನೂ ಒಂದು ಹಂತಕ್ಕೆ ತಲುಪಿಸಿದ್ದೇನೆ, ಕಾವೇರಿ 5ನೇ ಹಂತದ ಕಾಮಗಾರಿ ನಿಂತಿದ್ದು ಮತ್ತೆ ಚಾಲನೆ ನೀಡಲಾಗುವುದು ಎಂದರು.

ಕಾಲುವೆಗಳ ನೀರನ್ನು ಕೊನೆಯ ಹಂತದವರೆಗೆ ತಲುಪಿಸುವ ಉದ್ದೇಶದಿಂದ ಕಾಲುವೆಗಳ ಅಕ್ಕ ಪಕ್ಕ ಅರ್ಧ ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕೊಳವೆಬಾವಿ ಕೊರೆಯುವಂತಿಲ್ಲ ಹಾಗೂ ಪಂಪ್ ಮೂಲಕ ನೀರನ್ನು ಎತ್ತುವಂತಿಲ್ಲ ಎನ್ನುವ ಕಾನೂನು ತರಲಾಗಿದೆ.

ನಾನು, ಹಿರಿಯ ಅಧಿಕಾರಿಗಳು ಇಲಾಖೆಗೆ ಬರುತ್ತೇವೆ, ಹೋಗುತ್ತೇವೆ, ಆದರೆ ಇಲಾಖೆ ಎಂಜಿನಿಯರ್‌ಗಳು, ನೌಕರರು ಯಾವ ರೀತಿ ಶಾಶ್ವತ ಪರಿಹಾರ ಬೇಕು ಎನ್ನುವ ಬಗ್ಗೆ ವರದಿ ತಯಾರಿಸಿ ನೀಡಲಿ, ನೀವು ಇಲ್ಲದಿದ್ದರೆ ಬೆಂಗಳೂರಿಗೆ ಹೊಸ ರೂಪ ಬರಲು ಸಾಧ್ಯವಿಲ್ಲ, ಇಲಾಖೆಯವರು ಹಗಲು-ರಾತ್ರಿ ಒತ್ತಡದಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿಯಿದೆ.

ಅಂತರ್ಜಲ ಹೆಚ್ಚಳ ಮಾಡಲು ಕೆರೆ ಅಭಿವೃದ್ಧಿ ಸಮಿತಿ ಜೊತೆ ಕೆಲಸ ಮಾಡಬೇಕಿದೆ, ಕಳೆದ ವರ್ಷದ ಬರಗಾಲ ಸಮಯದಲ್ಲಿ ಬೆಂಗಳೂರಿನಲ್ಲಿ 7 ಸಾವಿರ ಕೊಳವೆಬಾವಿಗಳು ಬತ್ತಿ ಹೋಗಿದ್ದರೂ ಹೆಚ್ಚು ಶ್ರಮ ಹಾಕಿ ಕೆಲಸ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಂಡ ನೌಕರರಿಗೆ ಅಭಾರಿಯಾಗಿದ್ದೇನೆ, ನೀರುಗಂಟಿಯಿಂದ ಹಿಡಿದು ಪ್ರತಿಯೊಬ್ಬ ನೌಕರನಿಗೂ ಮನಪೂರ್ವಕ ಅಭಿನಂದನೆಗಳು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk shivakumarno gratitude in civilianswater price hike
0 FacebookTwitterPinterestEmail
admin

previous post
ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ಚಾಲೆಂಜ್
next post
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ