Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಪಾಲರನ್ನು ದಲಿತ ಗುರಾಣಿಯಾಗಿ ಬಿಜೆಪಿ ಬಳಕೆ

by admin August 22, 2024
written by admin August 22, 2024 0 comments 1 minutes read
0FacebookTwitterPinterestEmail
152

ಸ್ವಾಭಿಮಾನಿ ಸಮುದಾಯಕ್ಕೆ ಅವಮಾನ-ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದ ಘನತೆವೆತ್ತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ತಪ್ಪು ನಡೆಯ ಕುರಿತ ಕಾಂಗ್ರೆಸ್ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಹಿಂದೂಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿದ್ದ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ.

ದಲಿತ ಸಮುದಾಯಕ್ಕೆ ಸೇರಿರುವ ಥಾವರ್‌ಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮ್ಮಲ್ಲಿ ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿ ಇರಬೇಕಾಗಿದ್ದ ಅವರನ್ನು ಇಲ್ಲಿಗೆ ತಂದು “ಪಂಜರದ ಗಿಣಿ”ಯನ್ನಾಗಿ ಏಕೆ ಮಾಡಿದ್ದೀರಿ.

“ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ” ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಏಕೆ ಮೊಟಕುಗೊಳಿಸಿದಿರಿ.

ಕೇಂದ್ರ ಸಚಿವ ಸ್ಥಾನದಿಂದ ವಂಚಿತ

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ.

ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣ ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ, ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ ಎಂದಿದ್ದಾರೆ.

ಉಪಕಾರ ಸ್ಮರಣೆಯೇ ಇಲ್ಲದ ನಾಗರಿಕರು
ಬಿಜೆಪಿಯ “ಸಂಘಿ ಮನಸ್ಸು”

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿದ ಬಂಗಾರು ಲಕ್ಷ್ಮಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು, ಆದರೆ ಬಿಜೆಪಿಯೊಳಗಿನ “ಸಂಘಿ ಮನಸ್ಸು” ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

ದಲಿತ ಸಮುದಾಯದಕ್ಕೆ ಸೇರಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ.

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿ ವಿರೋಧಿಸುತ್ತಿರುವ, ಅಂತರಂಗದಲ್ಲಿ ಜಾತಿ ತಾರತಮ್ಯ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆ ಸೋಗು ಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ.

ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ, ಕೆಟ್ಟ ಕೆಲಸ ಮಾಡುವಂತೆ ಥಾವರ್‌ಚಂದ್ ಗೆಹ್ಲೋಟ್ ಅವರ ಮೇಲೆ ರಾಜಕೀಯ ಒತ್ತಡ ಹೇರದೆ, ಅವರು ಸಂವಿಧಾನದತ್ತ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಿ, ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಮೂದಲಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp cheating dalit communitycm siddaramaiah blamesmisuse of governor
0 FacebookTwitterPinterestEmail
admin

previous post
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು
next post
ಎಚ್.ಡಿ.ಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ತನಿಖೆ ಆದೇಶಕ್ಕೆ ಆಗ್ರಹ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ