120
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪಿ ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ವಿಶೇಷ ಸೌಲಭ್ಯ ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.