Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

by KM Shivaraju August 27, 2024
written by KM Shivaraju August 27, 2024 0 comments 2 minutes read
0FacebookTwitterPinterestEmail
248

ಹೆಚ್ ಡಿಕೆ, ನಿರಾಣಿ, ರೆಡ್ಡಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಆಗ್ರಹಿ ನಡಿಗೆ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿ ಆಗಸ್ಟ್ 31 ರಂದು ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್ ನಡೆಸಲಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಂದು ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿಯಿಂದ ನಡಿಗೆಯಲ್ಲಿ ರಾಜಭವನಕ್ಕೆ ತೆರಳಿ ಒತ್ತಾಯ ಮಾಡುತ್ತೇವೆ ಎಂದರು.

ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬೆಳಗ್ಗೆ 10ರಿಂದ 10.30 ಗಂಟೆಯ ನಡುವೆ ಪಕ್ಷದ ಎಲ್ಲಾ ಜನಪ್ರತಿನಿಧಿಗಳು ಒಟ್ಟಿಗೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ಭೇಟಿಗೆ ಸಮಯಾವಕಾಶ ಕೋರಿ ಇಂದೇ ಪತ್ರ ಬರೆಯುವುದಾಗಿ ತಿಳಿಸಿದರು.

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?

ನಮ್ಮ ಪರೇಡ್‌ನಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುವುದಿಲ್ಲ, ಕೇವಲ 250 ಮೀಟರ್ ನಡಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ಕುಮಾರಸ್ವಾಮಿ ಸೇರಿದಂತೆ ನಾಲ್ವರ ಬಗ್ಗೆ ವಿವಿಧ ಸಂಸ್ಥೆಗಳು ತನಿಖೆ ನಡೆಸಿ ಎಫ್‌ಐಆರ್ ದಾಖಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ಅನುಮತಿ ಕೋರಿ ಪತ್ರ ಬರೆದಿವೆ.

ರಾಜ್ಯ ಸಚಿವ ಸಂಪುಟ ಕೂಡಾ ಇದೇ ವಿಷಯದಲ್ಲಿ ನಿರ್ಣಯ ಕೈಗೊಂಡು ರಾಜಭವನಕ್ಕೆ ಸರ್ಕಾರದ ವತಿಯಿಂದಲೇ ಪತ್ರ ಬರೆದಿದ್ದರೂ ಇದುವರೆಗೂ ಯಾವುದೇ ಉತ್ತರವಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಿ ಎಂದು ನಾವು ಮನವಿ ಮತ್ತು ಒತ್ತಾಯ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ಮಾತನಾಡಿದ ಶಿವಕುಮಾರ್, ಕೇಂದ್ರದಲ್ಲಿ ಮಂತ್ರಿಯಾಗಿರುವ ಇವರಿಗೆ ಕಾನೂನಿನ ಅರಿವಿಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದ್ದಾರೆ. ಸಾಯಿ ಮಿನರಲ್ಸ್‌ಗೆ ತಾವು ಅನುಮತಿ ನೀಡಿಲ್ಲ. ನನ್ನ ಸಹಿ ಫೋರ್ಜರಿ ಎಂಬುದಾಗಿ ಹೇಳುತ್ತಾರೆ.

ಅವರ ಸಹಿ ಫೋರ್ಜರಿ ಆಗಿದ್ದರೆ, ಮುಖ್ಯಮಂತ್ರಿಗೋ ಇಲ್ಲವೇ ಒಬ್ಬ ಪೋಲಿಸ್ ಪೇದೆಗೋ ದೂರು ನೀಡಲಿ. ಈ ಬಗ್ಗೆ ಸರ್ಕಾರ ತನಿಖೆ ನಡೆಸಿ ಯಾರ‍್ಯಾರು ಶಾಮೀಲಾಗಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತದೆ. ಯಾಕಪ್ಪಾ ಕುಮಾರಸ್ವಾಮಿ, ನಿನ್ನ ಸಹಿ ಫೋರ್ಜರಿ ಆಗಿದ್ದರೆ ಇದುವರೆಗೂ ಏಕೆ ದೂರು ನೀಡಿಲ್ಲ. ಎಲ್ಲಾ ಕಾನೂನು ನಿನ್ನ ಜೇಬಿನಲ್ಲೇ ಇದೆ ಎನ್ನುವ ನಿನಗೆ ಅಷ್ಟೂ ಪರಿಜ್ಞಾನವಿಲ್ಲವೇ ಎಂದು ವ್ಯಂಗ್ಯವಾಡಿದರು.

ನಟ ದರ್ಶನ್ ಜೈಲ್ ಶಿಫ್ಟ್ ಸರ್ಕಾರಕ್ಕೆ ಸಂಬಂಧಿಸಿಲ್ಲ

ಸಾಯಿ ಮಿನರಲ್ಸ್‌ಗೆ ಗಣಿಗಾರಿಕೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿರುವುದಾಗಿ ನ್ಯಾಯಾಲಯಕ್ಕೆ ನೀನೆ ಪ್ರಮಾಣಪತ್ರ ಸಲ್ಲಿಸಿರುವುದಾಗಿ ಒಂದೆಡೆ ಹೇಳುತ್ತಿಯಾ; ಮತ್ತೊಂದೆಡೆ, ನಾನು ಶಿಫಾರಸ್ಸೇ ಮಾಡಿಲ್ಲ, ಸಹಿಯೇ ಮಾಡಿಲ್ಲ ಎನ್ನತ್ತೀಯಾ ಎಂದು ಶಿವಕುಮಾರ್ ದಾಖಲೆಗಳನ್ನು ಪ್ರದರ್ಶಿಸಿದರು.

ನಾನು, ಈ ಹಿಂದೆ ನಿಮ್ಮ ಆಸ್ತಿ-ಪಾಸ್ತಿಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಇದುವರೆಗೂ ಉತ್ತರಿಸಿಲ್ಲ. ಆದರೆ, ನಮ್ಮ ಬಗ್ಗೆ ಮಾತ್ರ ಎಲ್ಲಾ ಕೆದಕುತ್ತಾ ಕೂರುತ್ತೀಯಾ ಎಂದು ಕಿಡಿಕಾರಿದರು.

ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ಸೇರಿದಂತೆ ವಿವಿಧ ಸಂಸ್ಥೆಗಳು ತನಿಖೆ ನಡೆಸಿ ವರದಿ ಸಲ್ಲಿಸಿವೆ. ರಾಜ್ಯಪಾಲರು ತಕ್ಷಣವೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು. ಇದನ್ನು ಒತ್ತಾಯಿಸಲು ನಾವು ನಡಿಗೆ ಹಮ್ಮಿಕೊಂಡಿದ್ದೇವೆ ಎಂದರು.

ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಿರುವುದು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಅವರ ಸಂಸ್ಥೆಗೆ ಭೂಮಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗಳಿಗೆ, ಈ ಕುರಿತು ಈಗ ತಮ್ಮ ಬಳಿ ದಾಖಲೆಗಳಿಲ್ಲ, ಮುಂದೆ ಉತ್ತರ ನೀಡುವುದಾಗಿ ನುಣಚಿಕೊಂಡರು.

ಸಿದ್ದರಾಮಯ್ಯಗೆ ಮುಡಾ ನಿವೇಶನ ಬಿಜೆಪಿ ನೀಡಿಲ್ಲ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
August 31Congress MLAsformer ministersGovernor's permissionHdjanardhana reddykumaraswamyMurugesh NiraniparadeprosecuteRaj BhavanSasikala Jollaseekingunion minister
0 FacebookTwitterPinterestEmail
KM Shivaraju

previous post
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?
next post
ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ