Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರವಿಶ್ಲೇಷಣೆ

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

by KM Shivaraju August 28, 2024
written by KM Shivaraju August 28, 2024 0 comments 2 minutes read
0FacebookTwitterPinterestEmail
166

ಕಾಂಗ್ರೆಸ್‌ ಪಕ್ಷ ವಹಿಸುವ ಜವಾಬ್ದಾರಿ ಪ್ರಾಮಾಣಿಕವಾಗಿ ಮಾಡುವೆ

ಬೆಂಗಳೂರು: ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ವೇಳೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ನನ್ನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದ್ದು ನಿಜ. ನೀವೆಲ್ಲ ನೋಡಿದ್ದೀರಿ. ಪಕ್ಷ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪಕ್ಷದ ವಿಚಾರದಲ್ಲಿ ಅವರು ನನಗೆ ಏನು ಹೇಳಬೇಕೆಂಬುದನ್ನು ಹೇಳಿದ್ದಾರೆ. ಅದನ್ನು ಬಿಟ್ಟು ಬೇರೆ ಏನು ಮಾತನಾಡಿಲ್ಲ. ನಾನು ಪಕ್ಷದಲ್ಲಿ ಹಿರಿಯ ಇರಬಹುದು. ಆ ಪ್ರಶ್ನೆ ಮೂಡಿಲ್ಲ. ಅದರ ಬಗ್ಗೆ ನಾನು ಉತ್ತರವನ್ನು ನೀಡುವುದಿಲ್ಲ‌ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ‌. ಸಿಎಂ ಅವರ ಸಹಿ ಸೇರಿದಂತೆ ಯಾವುದೇ ರೀತಿಯ ದಾಖಲೆಗಳಿಲ್ಲ. ರಿಜಿಸ್ಟ್ರೇಷನ್ ನಲ್ಲಿಯೂ ಸಹ ಅವರ ಹೆಸರು ಉಲ್ಲೇಖವಾಗಿಲ್ಲ. ಇದೆಲ್ಲವನ್ನು ನ್ಯಾಯಾಲಯ ಗಮನಿಸಿಯೇ ತೀರ್ಮಾನ ಕೊಡುತ್ತದೆ ಎಂಬ ನಿರೀಕ್ಷೆ ಮಾಡಿದ್ದೇವೆ ಎಂದು ಹೇಳಿದರು.

ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಮುಖ್ಯಮಂತ್ರಿ ಜೊತೆ ಇರುತ್ತೇವೆ. ಆ.29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ ಚರ್ಚೆ ಆಗಲಿದೆ ಎಂದರು.

ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಐಎಡಿಬಿ ನಿವೇಶನ ಅಕ್ರಮವಾಗಿ ಪಡೆದಿದ್ದಾರೆಯೇ? ಇಲ್ಲವೇ ಎಂಬುದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ.

ಅವರು ಕಾನೂನು ಬಾಹಿರವಾಗಿ ಪಡೆದಿದ್ದಾರೆ ಎಂಬುದಾದರೆ ರಾಜ್ಯಪಾಲರು ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳಲಿ.‌ ಖರ್ಗೆ ಅವರು ತಮ್ಮ ಪ್ರಭಾವ ಬಳಸಿ, ಟ್ರಸ್ಟ್‌ಗೆ ನಿವೇಶನ ಪಡೆದಿಲ್ಲ ಎಂದರು‌.

ಅರ್ಜಿ ಸಲ್ಲಿಸಿ ಇಂಥ ಪ್ರಾಜೆಕ್ಟ್ ಮಾಡುತ್ತಿದ್ದೇವೆ ಅಂತ ಹೇಳಿದಾಗ ಜಾಗ ಕೊಟ್ಟಿದ್ದಾರೆ.‌ ನೀವು ಕೂಡ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸಿದರೆ ನಿಮಗೂ ಕೊಡುತ್ತಾರೆ. ಅಲ್ಲಿ ಕಡಿಮೆ ಬೆಲೆಗೆ ಕೊಡೋಕೆ ಸಾಧ್ಯ ಇಲ್ಲ. ಅಲ್ಲಿನ ಮಾರುಕಟ್ಟೆ ದರ ಏನಿರುತ್ತದೆಯೋ ಅದರ ಪ್ರಕಾರ ನೀಡಿರುತ್ತಾರೆ.

ಖರ್ಗೆ ಕುಟುಂಬದವರ ಏನಾದರೂ ಪ್ರಭಾವ ಇದ್ದರೆ, ಅದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ. ಕಾನೂನು ಬಾಹಿರವಾಗಿ ಕೊಟ್ಟಿದ್ದಾರಾ ಅನ್ನೋದನ್ನು ರಾಜ್ಯಪಾಲರು ಪರಿಶೀಲನೆ ಮಾಡಿ ನಿರ್ಧಾರ ಮಾಡಲಿ ಎಂದು ಅವರು ಹೇಳಿದರು.

ಬಿಜೆಪಿ ಆಡಳಿತ‌ ನಡೆಸುತ್ತಿರುವ ಸರ್ಕಾರಗಳು, ಕೇಂದ್ರ ಸರ್ಕಾರದ ಮೇಲೆಯೂ ಭ್ರಷ್ಟಚಾರದ ಆರೋಪಗಳಿಲ್ಲವೇ? ನಮ್ಮ ಸರ್ಕಾರದ ಮೇಲೆ ನಿರಾಧಾರ ಆರೋಪ ಬಂದಿದೆ. ಆರೋಪಗಳನ್ನು ನಿರಾಧಾರ ಎಂಬುದನ್ನು ನಾವು ಸಾಬೀತುಪಡಿಸುತ್ತೇವೆ ಎಂದು ಹೇಳಿದರು.

ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

ಮೈತ್ರಿ ಪಕ್ಷಗಳ ಪ್ರಾಸಿಕ್ಯೂಷನ್ ಗೆ ಒತ್ತಾಯಿಸಿ ರಾಜಭವನ ಚಲೋ ವಿಚಾರದ ಕುರಿತು ಮಾತನಾಡಿ, ರಾಜ್ಯಪಾಲರ ನಡೆಯ ಬಗ್ಗೆ ಒಂದಷ್ಟು ಚರ್ಚೆ ಮಾಡಿ ತೀರ್ಮಾನಗಳನ್ನು ಮಾಡಿದ್ದೇವೆ. ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿದ್ದಾರೆ. ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಮಾಡುತ್ತೇವೆ ಎಂದರು.

ಇದರ ಜೊತೆಯಲ್ಲೇ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ. ಅಷ್ಟರೊಳಗೆ ಕೋರ್ಟ್‌ನಲ್ಲಿ ಏನೆಲ್ಲ ತೀರ್ಮಾನ ಆಗುತ್ತದೆ ಎಂಬುದನ್ನು ನೋಡಬೇಕಿದೆ. ಆನಂತರ ರಾಷ್ಟ್ರಪತಿಯವರನ್ನು ಭೇಟಿ ಮಾಡುವ ಬಗ್ಗೆ  ಚಿಂತನೆ ನಡೆಸಲಾಗಿದೆ. ಆ.31ರಂದು ರಾಜಭವನ ಚಲೋ ಮಾಡುತ್ತೇವೆ ಎಂದು ಹೇಳಿದರು.

ಶಾಸಕರು ಬಂದು ಹೇಳಿದರೆ ನಾವು ಕೇಳುತ್ತಿದ್ದೆವು ಅನ್ನಬಹುದು. ಹಾಗಾಗಿ ಆ ಪ್ರಯತ್ನವನ್ನು ಕೂಡ ನಾವು ಮಾಡುತ್ತಿದ್ದೇವೆ. ಬಿಜೆಪಿಯವರು ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾದರೆ, ನಾವು ರಾಷ್ಟ್ರಮಟ್ಟದಲ್ಲೇ ಮಾಡಬೇಕಲ್ಲವೇ? ನಮ್ಮ ಪಕ್ಷ ಇಂಡಿಪೆಂಡೆಂಟ್ ಆಗಿ ಮಾಡುತ್ತೇವಾ ಅಥವಾ ಇಂಡಿಯಾ ಒಕ್ಕೂಟ ಸೇರಿ ಮಾಡುವುದೇ? ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresshonestlyparameshwarRahul GandhiresponsibilitySeparate conversation
0 FacebookTwitterPinterestEmail
KM Shivaraju

previous post
ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ