Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ 5 ಎಕರೆ ಸಿ.ಎ.ನಿವೇಶನ

by KM Shivaraju August 29, 2024
written by KM Shivaraju August 29, 2024 0 comments 3 minutes read
0FacebookTwitterPinterestEmail
245

ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ : ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು :  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ.ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಇಂದಿಲ್ಲಿ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿಯೇ ವಿನಾ ರಾಹುಲ್ ಖರ್ಗೆ ಅವರಂತೆ ಉದ್ಯಮಶೀಲರಲ್ಲ. ಇಂಥವರು ನಮಗೆ ಪಾಠ ಮಾಡಲು ಬರುತ್ತಾರೆ’ ಎಂದು  ಆಕ್ರೋಶ ವ್ಯಕ್ತಪಡಿಸಿದರು.

`ರಾಹುಲ್ ಖರ್ಗೆ ಎರಡು ಬಾರಿ ಯುಪಿಎಸ್ಸಿ ಪರೀಕ್ಷೆ ಪಾಸು ಮಾಡಿದ್ದಾರೆ; ಎಂಜಿನಿಯರಿಂಗ್ ಪದವೀಧರರು. ಡಿಆರ್ ಡಿಓ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇಂಥ ಅರ್ಹರಿಗೆ ಸಿ.ಎ. ನಿವೇಶನ ಕೊಡದೆ ಬಿಜೆಪಿಯವರಂತೆ ನಿಯಮಗಳನ್ನು ಗಾಳಿಗೆ ತೂರಿ ಯಾರಿಗೆ ಬೇಕೋ ಅವರಿಗೆ ಕೊಡಬೇಕಾಗಿತ್ತೇನು?

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ನಾರಾಯಣಸ್ವಾಮಿ ಈಗ ತಮಗೆ ಮಂಜೂರಾಗಿರುವ ಕೈಗಾರಿಕಾ ನಿವೇಶನದ ಸಮರ್ಪಕ ಬಳಕೆಗೆ ಮತ್ತೊಮ್ಮೆ 6 ತಿಂಗಳ ಕಾಲಾವಕಾಶ ಪಡೆದುಕೊಂಡಿದ್ದಾರೆ. ಇಲ್ಲೂ ಅವರು ವಿಫಲರಾದರೆ, ನಿಯಮಗಳ ಪ್ರಕಾರ ಆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ದಲಿತರಾದ ನಾರಾಯಣಸ್ವಾಮಿ ಸ್ವತಃ ತಮ್ಮ ಸಮುದಾಯದ ಹಿರಿಯರೂ ಮುತ್ಸದ್ದಿಗಳೂ ಆದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಇದು ಬಿಜೆಪಿಯ ಕುತಂತ್ರ. ದಲಿತರು ಪರಸ್ಪರ ಹೊಡೆದಾಡುತ್ತಿದ್ದರೆ ಅವರಿಗೆ ಲಾಭವಿದೆ. ತಮಗೆ ನೀಡಿರುವ ಕೈಗಾರಿಕಾ ನಿವೇಶನದಲ್ಲಿ ನಾರಾಯಣಸ್ವಾಮಿ ಇಷ್ಟು ಹೊತ್ತಿಗೆ ಶೇ.51ರಷ್ಟು ಭೂಮಿಯ ಬಳಕೆ ಮಾಡಿಕೊಳ್ಳಬೇಕಾಗಿತ್ತು.

ಆದರೆ ಅವರು ಕೇವಲ ಶೇಕಡ 5ರಷ್ಟು ಭೂಮಿಯಲ್ಲಿ ಕಾಟಾಚಾರಕ್ಕೆ ಶೆಡ್ ಹಾಕಿ, `ಬಾಡಿಗೆಗೆ ಇದೆ’ ಎಂದು ಬೋರ್ಡ್ ನೇತು ಹಾಕಿದ್ದಾರೆ. ಇಂಥ ಲಜ್ಜೆಗೆಟ್ಟ ವ್ಯಕ್ತಿ ದೇಶದ ನೇತಾರರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾತನಾಡುವ ದುಸ್ಸಾಹಸ ಮಾಡುತ್ತಿದ್ದಾರೆ ಎಂದು ಅವರು ಹರಿಹಾಯ್ದರು.

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

ನಾರಾಯಣಸ್ವಾಮಿ 2006ರಲ್ಲಿ `ಬೃಂದಾವನ್ ಸಾಫ್ಟ್ವೇರ್’ ಎನ್ನುವ ಕಂಪನಿ ಶುರು ಮಾಡುವುದಾಗಿ ಭೂಮಿ ಪಡೆದುಕೊಂಡರು. ಆ ಮೇಲೆ ಅಲ್ಲಿ ಅದೇ ಹೆಸರಿನ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸುತ್ತೇನೆ ಎಂದರು.

ಬಳಿಕ ಗೋದಾಮು ಮಾಡುತ್ತೇನೆಂದರು. ಅವರು ಕಾಲಕಾಲಕ್ಕೆ ಬೇರೆಬೇರೆ ಉದ್ದೇಶಕ್ಕೆ ಬದಲಿಸಿಕೊಂಡರೇ ವಿನಾ ಏನನ್ನೂ ದಡ ಮುಟ್ಟಿಸಲಿಲ್ಲ. ಇದಾದ ಮೇಲೆ ಸರ್ಕಾರವು ನಿಯಮದಂತೆ 2016ರ ನ.11ರಂದು ಜಮೀನನ್ನು ವಾಪಸ್ ಪಡೆಯಲು ಆದೇಶಿಸಿತು. ಇದರ ವಿರುದ್ಧ ಹೈಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದ ಈ ವ್ಯಕ್ತಿ, ಈಗ ಪುಕ್ಕಟೆ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಅವರು ವಿವರಿಸಿದರು.

ನಾರಾಯಣಸ್ವಾಮಿ ರಾಜಕೀಯದಲ್ಲಿ ಮೇಲಕ್ಕೆ ಬರಲು ಖರ್ಗೆಯವರೇ ಕಾರಣರು. ಅವರು ರೈಲ್ವೆ ಸಚಿವರಾಗಿದ್ದಾಗ ಈ ವ್ಯಕ್ತಿಯನ್ನು ರೈಲ್ವೆ ಬಳಕೆದಾರರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿ, ರೈಲ್ವೆ ಭವನದಲ್ಲಿ ಕಚೇರಿ ಕೂಡ ಕೊಟ್ಟಿದ್ದರು. ಆದರೂ ನಾರಾಯಣಸ್ವಾಮಿ ಉಂಡ ಮನೆಗೆ ಎರಡು ಬಗೆಯುತ್ತಿದ್ದಾರೆ. ಹೀಗೆ ಮಾತನಾಡಿದರೆ ಬಿಜೆಪಿಯಲ್ಲಿ ಇನ್ನೂ ಮೇಲೇರಬಹುದು ಎನ್ನುವ ಭ್ರಮೆಯಲ್ಲಿ ಅವರಿರಬಹುದು ಎಂದು ಪಾಟೀಲ ಕುಟುಕಿದ್ದಾರೆ.

ಇವರು ಹೇಳುವ ಹಾಗೆ ಈ ನಿವೇಶಕ್ಕೆ 72 ಅರ್ಜಿ ಬಂದಿರಲಿಲ್ಲ. ಬಂದಿದ್ದು ಕೇವಲ 6 ಅರ್ಜಿ. ಅದರಲ್ಲಿ ಮೂರು ವಸತಿ ಉದ್ದೇಶದ್ದು. ಅಲ್ಲಿ ಈಗಾಗಲೇ ಅಂತಹ ಉದ್ದೇಶಕ್ಕೆ ಕೊಟ್ಟಿದ್ದರಿಂದ ಅವುಗಳನ್ನು ತಿರಸ್ಕರಿಸಲಾಗಿದೆ. ಉಳಿದಂತೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಅರ್ಜಿ ಬಂದಿದ್ದರೂ ಸಮಪರ್ಕ ದಾಖಲೆ ಸಲ್ಲಿಸಿರಲಿಲ್ಲ. ಇನ್ನು ಉಳಿದಿದ್ದು ರಾಹುಲ್ ಮಾತ್ರ. ಇವರು ಎಲ್ಲ ರೀತಿಯಲ್ಲೂ ಸಮರ್ಥರಿದ್ದು, ಸಾಮಾನ್ಯ ವರ್ಗದ ಕೋಟಾದಲ್ಲೂ ಅವರು ಅರ್ಹರಾಗಿದ್ದರು ಎಂದು ತಿರುಗೇಟು ನೀಡಿದರು.

ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

ಆರೆಸ್ಸೆಸ್ ಅಂಗವಾಗಿರುವ ರಾಷ್ಟ್ರೋತ್ಥಾನ ಪರಿಷತ್ತಿಗೆ ಹೈಟೆಕ್ ಡಿಫೆನ್ಸ್ ಪಾರ್ಕಿನಲ್ಲಿ ವಿವಿಧೋದ್ದೇಶ ವಾಣಿಜ್ಯ ಸಂಕೀರ್ಣಕ್ಕೆಂದು 2013ರಲ್ಲಿ 5 ಎಕರೆ ಕೊಡಲಾಗಿದೆ. ಇದುವರೆಗೂ ಅವರು ಅಲ್ಲಿ ಏನೂ ಮಾಡಿಲ್ಲ. ಕೋವಿಡ್ ನೆವ ಹೇಳಿಕೊಂಡು ಮತ್ತೆ ಮತ್ತೆ ಕಾಲಾವಕಾಶ ಕೇಳಿಕೊಂಡು ಬಂದಿದ್ದಾರೆ.

ಇತ್ತೀಚೆಗೆ 2023ರ ಡಿ.26ರಂದು ಪುನಃ ಎರಡು ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ. ಈ ಜಮೀನನ್ನು ವಾಪಸ್ ಪಡೆಯಬೇಕೋ ಬೇಡವೋ ಎನ್ನುವುದನ್ನು ಲೆಹರ್ ಸಿಂಗ್ ಮತ್ತು ನಾರಾಯಣಸ್ವಾಮಿ ಹೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮುರುಗೇಶ ನಿರಾಣಿ ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಬಾಗಲಕೋಟೆಯ ನವನಗರ ಕೈಗಾರಿಕಾ ಪ್ರದೇಶದಲ್ಲಿ 2012ರ ಮಾರ್ಚ್ 12ರಂದು ತಮಗೆ ತಾವೇ 25 ಎಕರೆ ಕೊಟ್ಟುಕೊಂಡು, ಅಲ್ಲಿ ತೇಜಸ್ ಇಂಟರ್ ನ್ಯಾಷನಲ್ ಸ್ಕೂಲ್ ಕಟ್ಟಿದ್ದಾರೆ. ಅದು ಆಗ್ರೋ ಟೆಕ್ ಪಾರ್ಕ್ ಗೆ ಮೀಸಲಾಗಿದ್ದ ಜಾಗ. ಆಮೇಲೆ ಪುನಃ ಕೈಗಾರಿಕಾ ಸಚಿವರಾದಾಗ ಕೂಡ 2022ರ ಡಿ.19ರಂದು ಅಲ್ಲೇ ಮತ್ತೆ 6.17 ಎಕರೆ ತೆಗೆದುಕೊಂಡು, ತಮಗೆ ತಾವೇ ಅಭಿನಂದನಾ ಪತ್ರ ಬರೆದುಕೊಂಡಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ಇವರೆಲ್ಲರ ಜಾತಕ ಬಯಲಾಗುತ್ತದೆ ಎಂದು ಅವರು ಅಂಕಿಅಂಶಗಳ ಸಹಿತ ವಿವರಿಸಿದರು.

ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ

ಚಾಣಕ್ಯ ವಿ.ವಿ.ಯದೂ ಇದೇ ಕತೆಯಾಗಿದೆ. 2025ರ ಜೂನ್ ಒಳಗೆ ಅವರು 116 ಎಕರೆಯಲ್ಲಿ ಕನಿಷ್ಠ ಶೇ.51ರಷ್ಟು ಜಾಗವನ್ನು ಬಳಕೆ ಮಾಡದಿದ್ದರೆ ಉಳಿದ ಜಾಗವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಚಾಣಕ್ಯ ವಿವಿ ಗೂ ಕೇವಲ 50 ಕೋಟಿಗೆ ಈ ಜಮೀನು ನೀಡಿದ್ದು, ಇದರಿಂದ ಕೆಐಎಡಿಬಿಗೆ 137 ಕೋಟಿ ರೂಪಾಯಿ ನಷ್ಟ ಆಗಿದೆ. ಇದರ ವಿರುದ್ಧ ಏಕೆ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿಲ್ಲ ಎಂದು ಸಚಿವರು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
5 acres  CA landas per ruleChalavadiIndustries Ministermb patilmlcNarayanaswamynot Satya HarishchandraSiddhartha Vihara Trust
0 FacebookTwitterPinterestEmail
KM Shivaraju

previous post
ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು
next post
ಕರ್ನಾಟಕಕ್ಕೆ 80,000 ಕೋಟಿ ರೂ. ಅನುದಾನ ಕಡಿಮೆ : ಸಿಎಂ ಸಿದ್ದರಾಮಯ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ