Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಪ್ರಭಾವಿ ಸಚಿವರಿಂದ ಎನ್ ಡಿಎ ನಾಯಕರ ಭೇಟಿ

by KM Shivaraju September 3, 2024
written by KM Shivaraju September 3, 2024 0 comments 1 minutes read
0FacebookTwitterPinterestEmail
474

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಧ್ಯವರ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇರುವಾಗಲೇ ಸಂಪುಟದ ಪ್ರಭಾವೀ ಸಚಿವರೊಬ್ಬರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ತಲ್ಲಣ ಉಂಟು ಮಾಡಿದೆ.

ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡುತ್ತಿದ್ದಂತೆ ಈ ಸಚಿವರು ಕಳೆದ 15 ದಿನದಲ್ಲಿ ಎರಡು ಬಾರಿ ದೆಹಲಿಗೆ ತೆರಳಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದಾರೆ.

ಸಚಿವರು ದೆಹಲಿಯ ಬಿಜೆಪಿ ನಾಯಕರ ಭೇಟಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಕಾನೂನಿನ ಇಕ್ಕಳಕ್ಕೆ ಸಿಲುಕಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಕ್ಕಿಳಿದರೆ ತಾವು ಮತ್ತೊಬ್ಬ ನಾಯಕನ ಅಡಿಯಲ್ಲಿ ಕಾರ್ಯನಿರ್ವಹಿಸಲು, ಇಲ್ಲವೇ, ಕಾಂಗ್ರೆಸ್‌ನಲ್ಲಿ ಉಳಿಯುವ ಆಸಕ್ತಿ ಇವರಿಗಿಲ್ಲ.

ಮೇಕೆದಾಟು ಯೋಜನೆ ತಮಿಳುನಾಡಿಗೆ ಉಪಯುಕ್ತ

ಅದರಲ್ಲೂ ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪರ್ಯಾಯ ನಾಯಕನನ್ನಾಗಿ ಆಯ್ಕೆ ಮಾಡಿದಲ್ಲಿ, ಅಂತಹ ಸರ್ಕಾರದಲ್ಲಿ ಮಂತ್ರಿಯೂ ಆಗುವುದಿಲ್ಲ ಎಂಬುದನ್ನು ಈಗಾಗಲೇ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಇದೇ ನಿಲುವನ್ನು ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರು ಹಾಗೂ ಶಾಸಕರೂ ಹೊಂದಿರುವುದಲ್ಲದೆ, ಈ ಸಚಿವರ ಬೆನ್ನಿಗೆ ನಿಂತಿದ್ದಾರೆ.

ಸಿದ್ದರಾಮಯ್ಯ ಅಧಿಕಾರದಲ್ಲಿ ಇರುವವರೆಗೂ ಅವರ ಜೊತೆ ಇರುತ್ತೇವೆ. ಅವರು ಅಧಿಕಾರದಿಂದ ಕೆಳಗಿಳಿದರೆ ನಾವು ಮತ್ತೊಬ್ಬರ ಅಡಿಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ನಲ್ಲಿ ತಮಗೆ ಮುಖ್ಯಮಂತ್ರಿ ಅವಕಾಶ ದೊರೆಯುವುದು ಕಷ್ಟ ಎಂಬುದನ್ನು ಅರಿತಿರುವ ಈ ಸಚಿವರು, ಬಿಜೆಪಿ ಜೊತೆ ಕೈಜೋಡಿಸಿ ಶಿವಕುಮಾರ್ ಅವರಿಗೆ ಸಿಗುವ ಅಧಿಕಾರ ತಪ್ಪಿಸುವ ಕೆಲಸ ಇದಾಗಿದೆ ಎನ್ನಲಾಗಿದೆ.

ಕಳೆದ ಮೂರ‍್ನಾಲ್ಕು ದಿನಗಳಿಂದ ನ್ಯಾಯಾಲಯದಲ್ಲಿ ಪ್ರಕರಣದ ವಾದ-ಪ್ರತಿವಾದ ನಡೆಯುತ್ತಿದ್ದ ಬೆನ್ನಲ್ಲೇ ನಿನ್ನೆ ದೆಹಲಿಗೆ ತೆರಳಿದ ಸಚಿವರು, ಇಡೀ ದಿನ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ರಾತ್ರಿ ಹಿಂತಿರುಗಿದ್ದಾರೆ.

ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್

ಕಾಂಗ್ರೆಸ್ ನಾಯಕರಿಗೂ ಈ ಸಚಿವರ ನಡೆ ಬಗ್ಗೆ ಸ್ಪಷ್ಟ ಮಾಹಿತಿ ಇದೆ, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕೆಲವು ಹಿರಿಯ ಸಚಿವರು ಪ್ರಯತ್ನ ನಡೆಸಿದ್ದಾರಾದರೂ, ತಮ್ಮ ನಿಲುವಿನಿಂದ ಹಿಂದೆ ಸರಿದಿಲ್ಲ.
ಗೋವಾ ಮುಖ್ಯಮಂತ್ರಿ ಸಾವಂತ್, ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರೊಂದಿಗೆ ನಡೆಸುತ್ತಿರುವ ಚರ್ಚೆಯನ್ನು ಬಹಳ ಗೌಪ್ಯವಾಗಿ ಇಡಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರ: ಕೋರ್ಟ್ ತೀಮಾರ್ನದಂತೆ ಕ್ರಮ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterGoainfluential ministersmediatorNDA leadersPramod Sawantvisited
0 FacebookTwitterPinterestEmail
KM Shivaraju

previous post
ಮೇಕೆದಾಟು ಯೋಜನೆ ತಮಿಳುನಾಡಿಗೆ ಉಪಯುಕ್ತ
next post
ಪವಿತ್ರಾಗೌಡ ಎ1, ನಟ ದರ್ಶನ್ ಎ2

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ