Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಜಯಮುತ್ತು !

by KM Shivaraju September 5, 2024
written by KM Shivaraju September 5, 2024 0 comments 1 minutes read
0FacebookTwitterPinterestEmail
342

ಬೆಂಗಳೂರು:ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನ ಹಿರಿಯ ಕಾರ್ಯಕರ್ತ ಜಯಮುತ್ತು ಕಣಕ್ಕಿಳಿಯುವುದು ಬಹುತೇಕ ಖಚಿತ.

ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ನಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಕಸರತ್ತು ನಡೆಸಿರುವ ಬೆನ್ನಲ್ಲೇ ಚನ್ನಪಟ್ಟಣ ಕ್ಷೇತ್ರವನ್ನು ತನ್ನ ಮಿತ್ರ ಪಕ್ಷವಾದ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ಸಿ.ಪಿ.ಯೋಗೇಶ್ವರ್‌ಗೆ ನಿರಾಸೆ

ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಮೂಲಕ ಉಪಚುನಾವಣೆಯಲ್ಲಿ ಕಣಕ್ಕಿಳಿಯಲು ಭಾರೀ ಹರಸಾಹಸ ಮಾಡಿದ್ದ ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಭಾರೀ ನಿರಾಸೆಯಾಗಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಯೋಗೇಶ್ವರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮೂಲಕ ಭಾರೀ ಕಸರತ್ತು ನಡೆಸಿದ್ದರು.

ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ, ಸಾರಾಸಗಟಾಗಿ ನಿರಾಕರಿಸಿದ್ದು ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ಸಹಾ ಜೆಡಿಎಸ್ ಬೆಂಬಲಕ್ಕೆ ನಿಂತಿದ್ದರಿಂದ ಯೋಗೇಶ್ವರ್ ಅವರಿಗೆ ಟಿಕೆಟ್ ಇಲ್ಲ ಎಂಬುದು ಖಚಿತಗೊಂಡಿದೆ.

ಬಿಜೆಪಿ ವರಿಷ್ಠರ ಕಿವಿಮಾತು

ದೆಹಲಿಯ ಬಿಜೆಪಿ ವರಿಷ್ಠರು ಕೂಡಾ ಜೆಡಿಎಸ್ ಕ್ಷೇತ್ರವನ್ನು ನಾವು ಪಡೆಯಲು ಸಾಧ್ಯವಿಲ್ಲ, ಮೈತ್ರಿ ಮತ್ತಷ್ಟು ಗಟ್ಟಿಯಾಗಿ ಮುಂದುವರೆಯಬೇಕು, ನಿಮಗೆ ವಿಧಾನ ಪರಿಷತ್ ಸದಸ್ಯತ್ವ ಇನ್ನೂ ಎರಡು ವರ್ಷ ಇರುವುದರಿಂದ ಕಣಕ್ಕಿಳಿಯುವುದು ಬೇಡ ಎಂದು ಕಿವಿಮಾತು ಹೇಳಿದ್ದರು.

ಇದರ ನಡುವೆ ಕುಮಾರಸ್ವಾಮಿ ತಮ್ಮ ಕುಟುಂಬದವರನ್ನು ಉಪಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ಆಸಕ್ತಿ ತೋರದೆ ಜಯಮುತ್ತು ಅವರಿಗೆ ಅಭ್ಯರ್ಥಿಯಾಗಲು ಸಿದ್ಧರಾಗಿ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡಿ ಎಂದು ತಿಳಿಸಿದ್ದಾರಂತೆ.

ಇದರ ಬೆನ್ನಲ್ಲೇ ಜಯಮುತ್ತು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಾಳೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ.

ಸಿದ್ದರಾಮಯ್ಯಗೆ ಇ.ಡಿ. ನೋಟಿಸ್ ಫೇಕ್‌ನ್ಯೂಸ್
ನಿಲುವು ಬದಲು ಸಾಧ್ಯತೆ

ಒಂದು ವೇಳೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಹೋದರ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದರೆ ಜೆಡಿಎಸ್ ಕೊನೆ ಗಳಿಗೆಯಲ್ಲಿ ತನ್ನ ನಿಲುವು ಬದಲಿಸಿ, ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಇ.ತುಕಾರಾಂ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸತ್‌ಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana assembly by-electioncp yogeshwarhd kumara swamyjds jayamuttuNDA candidate
0 FacebookTwitterPinterestEmail
KM Shivaraju

previous post
ಪವಿತ್ರಾಗೌಡ ಎ1, ನಟ ದರ್ಶನ್ ಎ2
next post
ಸಿದ್ದರಾಮಯ್ಯಗೆ ಇ.ಡಿ. ನೋಟಿಸ್ ಫೇಕ್‌ನ್ಯೂಸ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ