Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ವಿದ್ಯುತ್ ಸಬ್ಸಿಡಿ ಮಿತಿ ರದ್ದು, ನೇಕಾರರಿಗೆ ಉಳಿತಾಯ

by admin September 6, 2024
written by admin September 6, 2024 0 comments 2 minutes read
0FacebookTwitterPinterestEmail
160

ಬೆಂಗಳೂರು:ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ ಎಂದರು.

ಏಕಕಾಲಕ್ಕೆ ನಾಲ್ಕು ಬೆಳೆ ಖರೀದಿ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು ಇದರಿಂದ ಏಕಕಾಲಕ್ಕೆ ನಾಲ್ಕು ಬೆಳೆಗಳ ಖರೀದಿಗೆ ಸಹಕಾರಿಯಾಗಿದೆ, ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಸಂಸ್ಥೆಗಳನ್ನು ನೇಮಕ ಮಾಡಿದೆ, ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಿದೆ.

ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ ಕ್ವಿಂಟಾಲ್‌ಗೆ 4,892 ರೂ. ಹಾಗೂ ಉದ್ದಿನ ಕಾಳಿಗೆ ಕ್ವಿಂಟಾಲ್‌ಗೆ 7,400 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ, ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಾಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಾಲ್ ಉದ್ದಿನಕಾಳು ಖರೀದಿ ಮಾಡಲಾಗುವುದು.

ಸತ್ಯವನ್ನು ಸುಳ್ಳು ಎನ್ನುವವರನ್ನು ನಂಬಬೇಡಿ
4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್

2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು.

ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 8,682 ರೂ. ಹಾಗೂ ಸೂರ್ಯಕಾಂತಿಗೆ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದೆ.

ಹೆಸರುಕಾಳು ಖರೀದಿಗೆ 172 ಖರೀದಿ ಕೇಂದ್ರ ಗುರುತಿಸಲಾಗಿದೆ, 1982 ರೈತರು ನೋಂದಣಿ ಮಾಡಿಸಿಕೊಂಡಿದ್ದು, ಸೂರ್ಯಕಾಂತಿ ಖರೀದಿಗೆ 19 ಖರೀದಿ ಕೇಂದ್ರ ಗುರುತಿಸಲಾಗಿದೆ, 461 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಮಿಲ್ಲಿಂಗ್ ಕೊಬ್ಬರಿ ಖರೀದಿ

ಕೊಬ್ಬರಿ ಖರೀದಿಯಲ್ಲೂ ಈ ಬಾರಿ ಪ್ರಮುಖ ಪಾತ್ರ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗಿದೆ.

ಎಪಿಎಂಸಿ ಯಾರ್ಡ್‌ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 14ರಿಂದ 15 ಶೀಥಲಗೃಹಗಳನ್ನು ನಿರ್ಮಾಣ ಮಾಡಲಾಗುವುದು, ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿಭಾಗಾವಾರು ವಿಜಿಲೆನ್ಸ್ ಸೆಲ್‌ಗಳನ್ನು ರಚಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ವಿಜಿಲೆನ್ಸ್ ರಚನೆ ಪರಿಣಾಮ ಎಪಿಎಂಸಿ ಆದಾಯ ಹೆಚ್ಚಾಗಿದೆ, ಈ ವರ್ಷ 380 ರೂ.ನಿಂದ 400 ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿದೆ, ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ 133.15 ಕೋಟಿ ರೂ. ಆದಾಯ ಸಂಗ್ರಹವಾಗಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 77.42 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು ಎಂದರು.

40,000 ರೂ. ಉಳಿತಾಯ

ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದ್ದು, ಇದರಿಂದ ಪ್ರತಿ ನೇಕಾರರಿಗೆ ವಾರ್ಷಿಕ ಕನಿಷ್ಟ 40,000 ರೂ. ಉಳಿತಾಯವಾಗಲಿದೆ.

10.1 ಎಚ್‌ಪಿರಿಂದ 20 ವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್‌ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್‌ಗೆ 1.25 ರೂ. ಮಾತ್ರ ಪಾವತಿಸಬೇಕು, ಇದರಿಂದ 4000 ಘಟಕಗಳಿಗೆ ಅನುಕೂಲವಾಗಲಿದೆ.

ಇದುವರೆಗೆ ಮಾಸಿಕ 500 ಯೂನಿಟ್‌ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು, ಹೆಚ್ಚುವರಿ ಬಳಕೆಯ ವಿದ್ಯುತ್‌ಗೆ ನೇಕಾರರು ವಿದ್ಯುತ್ ಕಂಪನಿಗಳು ನಿಗದಿಪಡಿಸಿರುವ ದರದಲ್ಲಿ ಶುಲ್ಕ ಪಾವತಿಸಬೇಕಿತ್ತು, ಸರ್ಕಾರ ಸಬ್ಸಿಡಿ ಮಿತಿ ರದ್ದುಪಡಿಸಿದ ಪರಿಣಾಮ ಮಾಸಿಕ ಎಷ್ಟು ವಿದ್ಯುತ್ ಬಳಕೆ ಮಾಡಿದರೂ ಯೂನಿಟ್‌ಗೆ 1.25 ರೂ. ದರ ಮಾತ್ರ ವಿಧಿಸಲಾಗುವುದು ಎಂದು ವಿವರಿಸಿದರು.

10 ಎಚ್‌ಪಿವರೆಗೆ ಶೂನ್ಯದರ

ಚುನಾವಣೆ ಸಮಯದಲ್ಲಿ ಕೊಟ್ಟ ಮಾತಿನಂತೆ 10 ಎಚ್‌ಪಿವರೆಗಿನ ಎಲ್ಲ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಶೂನ್ಯದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.

ನೇಕಾರರ ಬೇಡಿಕೆಗೆ ಸ್ಪಂದಿಸಿ 500 ಯೂನಿಟ್ ಮಿತಿ ರದ್ದುಪಡಿಸಲಾಗಿದೆ, ಇದರಿಂದ ಸರ್ಕಾರಕ್ಕೆ ವಾರ್ಷಿಕ 17 ಕೋಟಿ ರೂ. ಹೊರೆಯಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
coconetelectric subsidyminister shivananda patilpowerloom
0 FacebookTwitterPinterestEmail
admin

previous post
ಸತ್ಯವನ್ನು ಸುಳ್ಳು ಎನ್ನುವವರನ್ನು ನಂಬಬೇಡಿ
next post
ಎತ್ತಿನಹೊಳೆ ನೀರು ತಲುಪುವುದು ಕನಸಿನ ಮಾತು !

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ