Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಎತ್ತಿನಹೊಳೆ ನೀರು ತಲುಪುವುದು ಕನಸಿನ ಮಾತು !

by KM Shivaraju September 6, 2024
written by KM Shivaraju September 6, 2024 0 comments 2 minutes read
0FacebookTwitterPinterestEmail
1.1K

ಹಾಸನ:ಪಶ್ಚಿಮಘಟ್ಟದಿಂದ ಹಳೇ ಮೈಸೂರಿನ ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ಇಂದು ಚಾಲನೆ ದೊರೆತಿದ್ದರೂ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರಿಗೆ ನೀರು ತಲುಪುವುದು ಸದ್ಯಕ್ಕೆ ಕನಸಿನ ಮಾತು.

ಈ ಭಾಗದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹರಿಸುವ ಉದ್ದೇಶದಿಂದ ಕಳೆದ 10 ವರ್ಷಗಳ ಹಿಂದೆ ಶಂಕುಸ್ಥಾಪನೆ ನೆರವೇರಿಸಿ, ಇಂದು ಮೊದಲನೇ ಹಂತಕ್ಕೆ ಚಾಲನೆ ದೊರೆತರೂ ಮೂಲ ಉದ್ದೇಶ ಈಡೇರಿಲ್ಲ.

ಮುಂಗಾರಿನಲ್ಲಿ ಮಾತ್ರ ನೀರು

ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆ ಹೊಳೆ, ವಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳಿಗೆ ಅಡ್ಡಲಾಗಿ 8 ವಿಯರ್‌ಗಳನ್ನು ನಿರ್ಮಿಸಿ ಈ ಹಳ್ಳಗಳ ಪ್ರವಾಹದಿಂದ ದೊರೆಯಬಹುದಾದ 24.01 ಟಿಎಂಸಿ ನೀರನ್ನು ಮುಂಗಾರು ಅವಧಿಯಲ್ಲಿ ಪೂರ್ವಭಾವಿಯಾಗಿ ತಿರುಗಿಸಿ, ರಾಜ್ಯದ ಬರಪೀಡಿತ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ 527 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದ ಯೋಜನೆ ಇದಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಳ್ಳಿಗಳು ಮತ್ತು ಕೆರೆಗಳಿಗೆ ನೀರು ಪೂರೈಸುವುದು ಎತ್ತಿನಹೊಳೆ ಯೋಜನೆಯ ಗುರಿಯಾಗಿದೆ.

ಮೊದಲ ಹಂತದಲ್ಲಿ ನೀರನ್ನು ತಡೆದು ಸದ್ಯಕ್ಕೆ ಚಿತ್ರದುರ್ಗದ ವಾಣಿವಿಲಾಸ ಸಾಗರಕ್ಕೆ ಹರಿಸುವುದಕ್ಕೆ ಚಾಲನೆ ನೀಡಲಾಗಿದೆ.

ವಿದ್ಯುತ್ ಸಬ್ಸಿಡಿ ಮಿತಿ ರದ್ದು, ನೇಕಾರರಿಗೆ ಉಳಿತಾಯ
ಯೋಜನೆಗಳನ್ನೇ ರೂಪಿಸಿಲ್ಲ

ವಾಣಿವಿಲಾಸ ಸಾಗರದಿಂದ ಉಳಿದ ಜಿಲ್ಲೆಗಳಿಗೆ ನೀರು ಹರಿಸಲು ಯೋಜನೆಗಳನ್ನು ರೂಪಿಸಿಲ್ಲ, ಈಗ ಸದ್ಯಕ್ಕೆ ಚಿತ್ರದುರ್ಗ ಮತ್ತು ತುಮಕೂರಿನ ಕೆಲವು ತಾಲ್ಲೂಕುಗಳಿಗೆ ಮಾತ್ರ ಇದರ ಪ್ರಯೋಜನ ದೊರೆಯಲಿದೆ.

ದೊಡ್ಡಬಳ್ಳಾಪುರ ಸಮೀಪ ಅಣೆಕಟ್ಟೆ ನಿರ್ಮಿಸಿ ಎತ್ತಿನಹೊಳೆಯಿಂದ ನೀರನ್ನು ಇಲ್ಲಿಗೆ ಹರಿಸಿ ನಂತರ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರಿನ ಕೆಲವು ಭಾಗಗಳಿಗೆ ನೀರು ಹರಿಸುವ ಯೋಜನೆ ರೂಪಿಸಲಾಗಿತ್ತು.

ಮೂಲ ಉದ್ದೇಶದಂತೆ ಇನ್ನೂ ಅಣೆಕಟ್ಟೆಯೇ ನಿರ್ಮಾಣವಾಗಿಲ್ಲ, ನೀರು ಹರಿಸುವ ಕೊಳವೆಯನ್ನು ತಂದು ಬಿಡಲಾಗಿದೆ ಅಷ್ಟೇ, ಇದೇ ಮಾದರಿಯಲ್ಲಿ ಇನ್ನೂ ಮೂರು-ನಾಲ್ಕು ಅಣೆಕಟ್ಟೆಗಳನ್ನು ನಿರ್ಮಿಸಿ ಅದರ ಮೂಲಕ ಈ ಜಿಲ್ಲೆಗಗಳಿಗೆ ಕುಡಿಯುವ ನೀರು ಪೂರೈಸುವುದು ಮತ್ತು ಕೆರೆಗಳನ್ನು ತುಂಬಿಸಬೇಕಿದೆ.

ಭೂಸ್ವಾಧೀನವೂ ನಡೆದಿಲ್ಲ

ಆದರೆ, ಅಣೆಕಟ್ಟೆ ನಿರ್ಮಾಣಕ್ಕೆ ಕೆಲವೆಡೆ ಇನ್ನೂ ಭೂಸ್ವಾಧೀನ ಕಾರ್ಯವೂ ನಡೆದಿಲ್ಲ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನ ಕೆಲವು ಭಾಗದ ಕುಡಿಯುವ ನೀರಿನ ದಾಹ ನೀಗಿಸುವ ಉದ್ದೇಶದಿಂದ 10 ವರ್ಷಗಳ ಹಿಂದೆ ಯೋಜನೆ ರೂಪಿಸಲಾಗಿತ್ತು.

ಒಂದು ದಶಕದ ಹಿಂದೆಯೇ ಕಾಮಗಾರಿ ಆರಂಭಗೊಂಡರೂ ಪರ್ಯಾಯವಾಗಿ ನೀರು ಸಂಗ್ರಹಿಸುವ ಅಣೆಕಟ್ಟೆಗಳ ನಿರ್ಮಾಣಕ್ಕೆ ಇದುವರೆಗೂ ಚಾಲನೆ ನೀಡಿಲ್ಲ.

ಸದ್ಯಕ್ಕೆ ಏತ ಕಾಮಗಾರಿಗಳು ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಎತ್ತಿನಹೊಳೆಯಿಂದ 252.61 ಕಿಲೋ ಮೀಟರ್ ಕೊಳವೆಯಲ್ಲಿ ನೀರು ಹರಿಸಿ ಈ ಎಲ್ಲಾ ಜಿಲ್ಲೆಗಳಿಗೆ ತಲುಪಿಸಬೇಕು.

ಸತ್ಯವನ್ನು ಸುಳ್ಳು ಎನ್ನುವವರನ್ನು ನಂಬಬೇಡಿ
ಫೀಡರ್ ಕಾಮಗಾರಿ ಪ್ರಗತಿಯಲ್ಲಿ

ಆದರೆ ಇದುವರೆಗೂ 164.7 ಕಿಲೋ ಮೀಟರ್ ಕಾಲುವೆ ಕಾಮಗಾರಿ ಪೂರ್ಣಗೊಂಡಿದೆ, ಮಧುಗಿರಿ-ಪಾವಗಡ, ಟಿ.ಜಿ.ಹಳ್ಳಿ-ರಾಮನಗರ, ಗೌರಿಬಿದನೂರು ಫೀಡರ್ ಕಾಮಗಾರಿಗಳು ಪ್ರಗತಿಯಲ್ಲಿವೆ.

ಕೋಲಾರ, ಶ್ರೀನಿವಾಸಪುರ ಫೀಡರ್‌ಗಳ ಕಾಮಗಾರಿಯೇ ಆರಂಭಗೊಂಡಿಲ್ಲ, ಯಾವ ಉದ್ದೇಶದಿಂದ ಯೋಜನೆ ಕೈಗೆತ್ತಿಕೊಂಡರೋ ಆ ಯೋಜನೆ ಪೂರ್ಣಗೊಳ್ಳಲು ಇನ್ನೂ ಇಷ್ಟೇ ಸಮಯ ಮುಂದಕ್ಕೂ ಬೇಕಾಗಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no land acquisition yetno project ready yetyettinahole project day-dream
0 FacebookTwitterPinterestEmail
KM Shivaraju

previous post
ವಿದ್ಯುತ್ ಸಬ್ಸಿಡಿ ಮಿತಿ ರದ್ದು, ನೇಕಾರರಿಗೆ ಉಳಿತಾಯ
next post
ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ