Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದರ್ಶನ್ ನ್ಯಾಯಾಂಗಬಂಧನ ಸೆ.12ರವರೆಗೆ ವಿಸ್ತರಣೆ

by admin September 9, 2024
written by admin September 9, 2024 0 comments 1 minutes read
0FacebookTwitterPinterestEmail
520

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ಚಿತ್ರನಟ ದರ್ಶನ್ ಅವರ ನ್ಯಾಯಾಂಗಬಂಧನ ಅವಧಿಯನ್ನು ಸೆಪ್ಟೆಂಬರ್ 12 ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅವಧಿ ಇಂದು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲಾ 17 ಆರೋಪಿಗಳನ್ನು ಬಂಧಿಸಿಟ್ಟಿರುವ ಕಾರಾಗೃಹಗಳಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಎಲ್ಲಾ ಆರೋಪಿಗಳ ಬಂಧನ ವಿಸ್ತರಣೆ

ನಟ ದರ್ಶನ್ ಅಲ್ಲದೆ, ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನೂ ಸೆಪ್ಟೆಂಬರ್ 12 ರವರೆಗೆ ವಿಸ್ತರಿಸಿ, 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತು.

ನಟ ದರ್ಶನ್ ಬಳ್ಳಾರಿ ಜೈಲಿನಿಂದ, ಪವಿತ್ರಾಗೌಡ ಪರಪ್ಪನ ಅಗ್ರಹಾರ ಕಾರಾಗೃಹದಿಂದ, ಮೈಸೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರುಗಿ, ವಿಜಯಪುರ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಅವರು ಬಂಧನದಲ್ಲಿರುವ ಆಯಾ ಕಾರಾಗೃಹಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಎಲ್ಲ ಆರೋಪಿಗಳ ಹಾಜರಾತಿ ನಂತರ, ಆರೋಪಿಗಳ ಪರ ವಕೀಲರಿಗೆ ವೈಯಕ್ತಿಕವಾಗಿ ದೋಷಾರೋಪ ಪಟ್ಟಿ ಪ್ರತಿಗಳನ್ನು ನೀಡಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದರು.

ದೋಷಾರೋಪ ಪಟ್ಟಿ ಪ್ರತಿ

ಇದಕ್ಕೆ ನ್ಯಾಯಾಧೀಶರು ಸಮ್ಮತಿಸಿದಾಗ, ಮೊಕದ್ದಮೆಯ ಆರೋಪಿಗಳನ್ನು ಬೇರೆ ಬೇರೆಯಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಇಡಲಾಗಿದೆ, ಆರೋಪಿಗಳ ಕೈಗೇ ದೋಷಾರೋಪ ಪಟ್ಟಿ ನೀಡುವುದರಿಂದ ಜಾಮೀನು ಪ್ರಕ್ರಿಯೆ ತಡವಾಗಲಿದೆ, ಎಲ್ಲಾ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದು, ಅವರ ಒಪ್ಪಿಗೆ ಮೇರೆಗೆ ಚಾರ್ಜ್‌ಶೀಟ್ ಪ್ರತಿಗಳನ್ನು ಅವರ ಪರ ವಕೀಲರಿಗೇ ನೀಡುವಂತೆ ಮನವಿ ಮಾಡಲಾಯಿತು.

ಈ ಹಂತದಲ್ಲಿ ಪ್ರಕರಣದ ಆರೋಪಿಗಳಾದ ಪುಟ್ಟಸ್ವಾಮಿ, ನಂದೀಶ್, ರಾಘವೇಂದ್ರ, ಜಗದೀಶ್, ಪವನ್, ಅನುಕುಮಾರ್, ಧನರಾಜ್, ರವಿಶಂಕರ್, ವಿನಯ್, ಪ್ರದೂಷ್, ನಾಗರಾಜು, ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಪರ ವಕೀಲರ ಬಗ್ಗೆ ನ್ಯಾಯಾಧೀಶರು ವಿವರ ಪಡೆದರು.

ನ್ಯಾಯಾಲಯದಲ್ಲಿ ಹಾಜರಿದ್ದ ಎಸ್‌ಪಿಪಿ ಪ್ರಸನ್ನಕುಮಾರ್, ಪ್ರಕರಣಕ್ಕೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳಾದ ಹಾರ್ಡ್‌ಡಿಸ್ಕ್, ಪೆನ್‌ಡ್ರೈವ್ ಸೇರಿದಂತೆ ಒಟ್ಟು 60 ಡಿಜಿಟಲ್ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತಿರುವುದಾಗಿ ತಿಳಿಸಿದಾಗ, ತನಿಖಾಧಿಕಾರಿ ಎಸಿಪಿ ಚಂದನ್ ಪೆನ್ ಡ್ರೈವ್, ಸಿಡಿ, ಡಿವಿಡಿ, ಹಾರ್ಡ್ ಡಿಸ್ಕ್ ಕಂ ಪೆನ್ ಡ್ರೈವ್ ಸೇರಿದಂತೆ ಒಟ್ಟು 60 ಡಿಜಿಟಲ್ ಸಾಕ್ಷ್ಯಗಳನ್ನು ಕೋರ್ಟ್‌ಗೆ ಸಲ್ಲಿಸಿದರು.

ಎರಡು ದಿನಗಳಲ್ಲಿ ಪ್ರತಿ

ಆರೋಪಿಗಳಿಗೆ ನೀಡಬೇಕಿರುವ ದೋಷಾರೋಪ ಪಟ್ಟಿ ಪ್ರತಿಗಳನ್ನು ಎರಡು ದಿನಗಳಲ್ಲಿ ನೀಡುವುದಾಗಿ ನ್ಯಾಯಾಲಯಕ್ಕೆ ತಿಳಿಸಲಾಯಿತು.

ಪೇಪರ್ ದೋಷಾರೋಪ ಪಟ್ಟಿ ಪ್ರತಿಗಳನ್ನು ಇಂದೇ ನೀಡಿ, ಡಿಜಿಟಲ್ ಸಾಕ್ಷ್ಯಗಳ ಪ್ರತಿಯನ್ನು ಎರಡು ವಾರಗಳಲ್ಲಿ ನೀಡುವಂತೆ ನ್ಯಾಯಾಧೀಶರು ಸೂಚಿಸಿ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಈ ತಿಂಗಳ 12ರವರೆಗೆ ವಿಸ್ತರಿಸಿ ಆದೇಶ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actor darshan and othersjudicial custody extendedrenuka swamy murder casetill september 12th
0 FacebookTwitterPinterestEmail
admin

previous post
ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?
next post
ಉಪನಗರ ರೈಲು ಯೋಜನೆ ಕಾರಿಡಾರ್‌-2 & 4: 2026ಕ್ಕೆ ಪೂರ್ಣ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ