Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಾಗಮಂಗಲ ಗಲಭೆ ಕಾಂಗ್ರೆಸ್‌ನ ವ್ಯವಸ್ಥಿತ ಪಿತೂರಿ !

by admin September 13, 2024
written by admin September 13, 2024 0 comments 2 minutes read
0FacebookTwitterPinterestEmail
241

ಬೆಂಗಳೂರು:ನಾಗಮಂಗಲ(ಮಂಡ್ಯ)ದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಕಾಂಗ್ರೆಸ್ ಪ್ರಾಯೋಜಿತ, ಪೂರ್ವ ನಿಯೋಜಿತ ವ್ಯವಸ್ಥಿತ ಪಿತೂರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯವಸ್ಥಿತವಾಗಿ ಗಲಭೆಗಳ ಸೃಷ್ಟಿ ಕಾಂಗ್ರೆಸ್‌ಗೆ ಕರತಲಾಮಲಕ ವಿಷಯ ಎಂದು ಗುರುತರ ಆರೋಪ ಮಾಡಿದರು.

ಅಧಿಕಾರದಿಂದ ಕೆಳಗಿಳಿಸಲು ಗಲಭೆ

ಆ ಪಕ್ಷ ಹಿಂದಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದೆ, 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಯಿತು, ಅವಳಿ ಪಟ್ಟಣಗಳು ಹೊತ್ತಿ ಉರಿದವು, ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ.

ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಾಕಲಾಯಿತು, ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ, ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ, ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿ ಮಾಡಲಾಗಿದೆಯೋ ಗೊತ್ತಿಲ್ಲ ಎಂದರು.

ಇಂಥ ಗಲಾಟೆಗಳನ್ನು ಮಾಡಿಸುವುದರಲ್ಲಿ ಕಾಂಗ್ರೆಸ್ ಎಕ್ಸ್‌ಪರ್ಟ್, ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆ ಬಗ್ಗೆ ಅನುಮಾನವಿದೆ, ಚನ್ನಪಟ್ಟಣದಲ್ಲಿ ವಿಧಾನಸಭಾ ಉಪಚುನಾವಣೆ ಬರುತ್ತಿದೆ, ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ, ಒಂದು ಸಮುದಾಯದ ಓಲೈಕೆಗಾಗಿ ಇಂತಹ ಸಂಚು ರೂಪಿಸಿರಬಹುದು, ಇಡೀ ಘಟನೆ ಅವಲೋಕಿಸಿದರೆ ಕೃತ್ಯದ ಹಿಂದೆ ಕಾಂಗ್ರೆಸ್ ಇರಬಹುದೆಂಬ ಶಂಕೆ ವ್ಯಕ್ತವಾಗುತ್ತದೆ.

ಪೊಲೀಸರ ಕರ್ತವ್ಯ ಲೋಪ

ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪ ಕಾರಣ, ಪೊಲೀಸರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಆಗ್ರಹಪಡಿಸಿದರು.

ಗಲಭೆಯ ಎಫ್‌ಐಆರ್ ಪ್ರತಿ ಪ್ರದರ್ಶಿಸಿ ಮಾತನಾಡಿದ ಸಚಿವರು, ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ, ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದರು.

ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ, ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳುಹಿಸಲಾಗಿದೆ, ಅಲ್ಲದೆ, ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲಿ ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದು, ಈ ಇಬ್ಬರು ಅಧಿಕಾರಿಗಳು ಎಲ್ಲಿದ್ದರು, ಮೀಸಲು ಪಡೆ ಬೇರೆಡೆಗೆ ಕಳುಹಿಸಿದ್ದು ಏಕೆ ಎಂದು ಪ್ರಶ್ನಿಸಿದರು.

ಬಾಂಬ್‌ಗಳು ಹೇಗೆ ಸಿಕ್ಕವು

ಮೆರವಣಿಗೆ ಹೊರಟವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ, ದುಷ್ಕರ್ಮಿಗಳ ಕೈಗೆ ಕೇವಲ ಹತ್ತು ನಿಮಿಷದಲ್ಲಿ ಭಾರೀ ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್‌ಗಳು, ಪೆಟ್ರೋಲ್ ಬಾಂಬ್‌ಗಳು ಹೇಗೆ ಸಿಕ್ಕವು, ಅವು ಎಲ್ಲಿಂದ ಬಂದವು, ಇವನ್ನೆಲ್ಲಾ ತಕ್ಷಣ ಸಂಗ್ರಹಿಸಲು ಸಾಧ್ಯವೇ.

ಇಡೀ ಗಲಭೆ ವೃತ್ತಾಂತ ಅವಲೋಕಿಸಿದರೆ, ಇದರ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ, ಇಡೀ ಗಲಭೆಯನ್ನು ಸಣ್ಣ, ಆಕಸ್ಮಿಕ ಘಟನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ, ಇಷ್ಟೊಂದು ದೊಡ್ಡ ಗಲಭೆ ಯೋಜಿತವಾಗಿ ಆಗಿದೆ, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ, ಆದರೂ ಸಣ್ಣ, ಆಕಸ್ಮಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರೆದು ಕರೆಯಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ಸರಿ ಮಾಡಿಕೊಳ್ಳಬೇಕು, ಹಳೆ ಮೈಸೂರು ಭಾಗದಲ್ಲಿ ಎರಡೂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ, ರಾಜಕೀಯಕ್ಕಾಗಿ ಜನರ ಬದುಕು ಛಿದ್ರ ಮಾಡಬೇಡಿ.

ಸೆ.25ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ
ಕಣ್ಣೊರೆಸುವ ತಂತ್ರ

ನಾಗಮಂಗಲಕ್ಕೆ ಬರುವುದಾಗಿ ಗುರುವಾರವೇ ಹೇಳಿದ್ದೆ, ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು, ಅದಕ್ಕಾಗಿಯೇ ಇನ್ಸ್‌ಪೆಕ್ಟರ್ ಅಶೋಕ್ ಅವರನ್ನು ಸಸ್ಪೆಂಡ್ ಮಾಡಿದ್ದಾರೆ, ಇದು ಕಣ್ಣೊರೆಸುವ ತಂತ್ರ.

ಮಸೀದಿ ಬಳಿ 10 ನಿಮಿಷ ಡಾನ್ಸ್ ಮಾಡಲು ಬಿಟ್ಟವರು ಯಾರು, ಆಗ ಪೊಲೀಸರು ಏನು ಮಾಡುತಿದ್ದರು, ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು, ಮೆರವಣಿಗೆ ವೇಳೆ ಇನ್ಸ್‌ಪೆಕ್ಟರ್, ಡಿವೈಎಸ್ಪಿ ಯಾರೂ ಇರಲಿಲ್ಲ, ಆದರೆ ಎಫ್‌ಐಆರ್‌ನಲ್ಲಿ ಅವರುಗಳು ಇದ್ದರು ಎಂದು ಬರೆಯಲಾಗಿದೆ, ಇದು ಯಾವ ಜಾದು ಎಂದು ಪ್ರಶ್ನಿಸಿದರು.

ದೂರು ನೀಡಿರುವ ಅಧಿಕಾರಿ ರವಿ ಅವರಿಗೆ ರಾತ್ರಿ 1.30ರ ವೇಳೆಗೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಹೆಸರುಗಳು ಹೇಗೆ ಗೊತತಾಯಿತು, ಪೆಟ್ಟು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಈ ಅಧಿಕಾರಿಗೆ ಅಷ್ಟು ಜನರ ಹೆಸರುಗಳು ಹೇಗೆ ನೆನಪಾಯಿತು, ಅವರಿಗೆ ಎಷ್ಟು ನೆನಪಿನ ಶಕ್ತಿ ಇದೆ, ಅವರೇನು ತ್ರಿಕಾಲಜ್ಞಾನಿಯೇ ಎಂದು ಅಚ್ಚರಿ ವ್ಯಕ್ತಪಡಿಸಿದರು.

ಪ್ರತಿಯೊಂದು ವಿಷಯದಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ಇಲ್ಲಿ ಅಮಾಯಕ ಜನರ ಬದುಕು ಬೀದಿಗೆ ಬಂದಿದೆ, ಗಲಭೆ ಸಂದರ್ಭದಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದರು ಎಂದು ಎಫ್‌ಐಆರ್‌ನಲ್ಲಿ ಬರೆಯಲಾಗಿದೆ, ಪೊಲೀಸರಿಗೆ ಭದ್ರತೆ ನೀಡಲಾಗದಂತಹ ದರಿದ್ರ ಸರ್ಕಾರ ರಾಜ್ಯದಲ್ಲಿದೆ, ಆಗಿರುವ ಲೋಪ ಒಪ್ಪಿಕೊಳ್ಳದೆ, ಸಮುದಾಯಗಳ ನಡುವೆ ಕಂದಕ ತೊಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres sponsoredhd kumara swamy allegationsnagamangala riot
0 FacebookTwitterPinterestEmail
admin

previous post
ಸೆ.25ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ
next post
ಪೋಲಿಸ್ ಎಡಿಜಿಪಿಗಳ ವರ್ಗಾವರ್ಗಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ