50
ಬೆಂಗಳೂರು:ಪರಿಶಿಷ್ಟ ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ ಹಾಗೂ ಕೊಲೆ ಬೆದರಿಕೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ತೀರ್ಪು ನೀಡಲಿದೆ.
ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಿದ ಸಂತೋಷ್ ಗಜಾನನ ಭಟ್, ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದರು.
ಸರ್ಕಾರಿ ವಕೀಲರ ವಾದ
ಜಾತಿ ನಿಂದನೆ, ಲಂಚ ಹಾಗೂ ಕೊಲೆ ಬೆದರಿಕೆ ಆರೋಪ ಹೊತ್ತಿರುವ ಮುನಿರತ್ನ ಅವರಿಗೆ ಜಾಮೀನು ನೀಡಬಾರದೆಂದು ಸರ್ಕಾರಿ ವಕೀಲರು ಪ್ರಬಲ ವಾದ ಮಂಡಿಸಿದರು.
ಮುನಿರತ್ನ ಪರ ಹೈಕೋರ್ಟ್‌ನ ಹಿರಿಯ ವಕೀಲ ಅಶೋಕ್ ಹಾರ‍್ನಳ್ಳಿ ವಾದ ಮಂಡಿಸಿ, ನಮ್ಮ ಕಕ್ಷಿದಾರರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ, ಇದು ರಾಜಕೀಯ ಕುತಂತ್ರ ನ್ಯಾಯಾಂಗ ಬಂಧನದಲ್ಲಿರುವ ಇವರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದರು.