Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಜನೋತ್ಸವವಾಗಿ ಕರ್ನಾಟಕ ಸುವರ್ಣ ಸಂಭ್ರಮ

by admin September 19, 2024
written by admin September 19, 2024 0 comments 2 minutes read
0FacebookTwitterPinterestEmail
522

ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು:ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದೆ, ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು ಮನವಿ ಮಾಡಲಾಗುವುದು, ಕನ್ನಡ ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಜನಪದ, ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ, ರಾಜ್ಯೋತ್ಸವ ಪ್ರಶಸ್ತಿ ಪ್ರದಾನವನ್ನೂ ಇದೇ ಸಂದರ್ಭದಲ್ಲಿ ಮಾಡಲಾಗುವುದು ಎಂದರು.

ಯುವಸಮೂಹಕ್ಕೆ ಕನ್ನಡ ಚರಿತ್ರೆ

ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಸಮಾರೋಪ ಕುರಿತ ಪೂರ್ವಭಾವಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿ, ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಯುವಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30ರವರೆಗೆ ಅವಕಾಶವಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಲಾಗಿದೆ.

ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದೆ, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.

ಸ್ಮಾರಕ ನಿರ್ಮಾಣ

ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆ ಕಾಮಗಾರಿ ಪ್ರಗತಿಯಲ್ಲಿದೆ, ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ನಡೆಯುತ್ತಿದೆ, ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ, ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ.

ಸಾಧಕ 50 ಮಹಿಳೆಯರ ಕುರಿತ 100 ಪುಟಗಳ 50 ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮುದ್ರಿಸಲಿದೆ, ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ದೇವಿ ಕಂಚಿನ ಪ್ರತಿಮೆ ಸ್ಥಾಪನೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣ ಮಾಡಲು ಸಿದ್ಧತೆ ನಡೆದಿದೆ.

ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು, ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿನಲ್ಲಿ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುತ್ತಿದೆ.

ಕರ್ತವ್ಯ ಪ್ರಜ್ಞೆ ಇಲ್ಲದ ಸಚಿವ ಡಾ.ಪರಮೇಶ್ವರ್
ಬಹುಸಂಸ್ಕೃತಿ 100 ಪುಸ್ತಕ

ಕರ್ನಾಟಕದ ಬಹುಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡಲಾಗುವುದು.

ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ, ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ.

ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್ ಮತ್ತಿತರ ಕಡೆಗಳಲ್ಲಿ ಪ್ರಚುರ ಪಡಿಸಲಾಗುವುದು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮಾತನಾಡಿ, ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ಧಿಗೆ ತಜ್ಞರ ಸಮಿತಿ ರಚಿಸುವಂತೆ ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
100 books on kannada culture and heritage69 to get rajyotsava awardcm siddaramaiahkarnataka suvarna sambhrama
0 FacebookTwitterPinterestEmail
admin

previous post
ಕರ್ತವ್ಯ ಪ್ರಜ್ಞೆ ಇಲ್ಲದ ಸಚಿವ ಡಾ.ಪರಮೇಶ್ವರ್
next post
ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ