Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ತವ್ಯ ಪ್ರಜ್ಞೆ ಇಲ್ಲದ ಸಚಿವ ಡಾ.ಪರಮೇಶ್ವರ್

by admin September 19, 2024
written by admin September 19, 2024 0 comments 2 minutes read
0FacebookTwitterPinterestEmail
348

ಬೆಂಗಳೂರು:ನಾಗಮಂಗಲದ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ತಮ್ಮ ವಿರುದ್ಧವೇ ಮೇಲೆ ಎಫ್‌ಐಆರ್ ದಾಖಲಿಸಿರುವುದು ಹೇಡಿತನದ ಪರಮಾವಧಿಯಾಗಿದ್ದು ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಆರ್.ಅಶೋಕ್ ಗುಡುಗಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೈಲಾಗದವನು ಮೈ ಪರಚಿಕೊಂಡ ಎಂಬಂತೆ, ಅಸಮರ್ಥ ಗೃಹ ಸಚಿವ ಡಾ.ಪರಮೇಶ್ವರ್, ನಾಗಮಂಗಲದ ಘಟನೆ ನಡೆದು ಒಂದು ವಾರ ಕಳೆದರೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಆಸ್ತಿ-ಪಾಸ್ತಿ ಕಳೆದುಕೊಂಡ, ಭಯಭೀತರಾಗಿರುವ ಸ್ಥಳೀಯರ ಅಳಲು, ದುಮ್ಮಾನ, ಆತಂಕ, ಆಕ್ರೋಶ ಕೇಳಿಲ್ಲ ಎಂದಿದ್ದಾರೆ.

ಏನು ಸಾಧಿಸಲು ಹೊರಟಿದ್ದೀರಿ

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರೆ ಸ್ಥಳೀಯರ ನೋವು, ಪರಿಸ್ಥಿತಿಯ ಗಂಭೀರತೆ ಅರ್ಥವಾಗುತ್ತಿತ್ತು, ಗೃಹ ಸಚಿವರಿಗೆ ಕರ್ತವ್ಯ ಪ್ರಜ್ಞೆಯೇ ಇಲ್ಲ, ನನ್ನ ಮೇಲೆ ಎಫ್‌ಐಆರ್ ಹಾಕಿ ಏನು ಸಾಧಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ತಾವು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಪತ್ರಕರ್ತರು ನೀಡಿದ ಹೇಳಿಕೆ ಹಾಗೂ ವ್ಯಕ್ತಪಡಿಸಿದ ಅನುಮಾನ ಕುರಿತು ನನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಷಯ ಹಾಕುವ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆಯೇ ಹೊರತು, ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ.

ನನ್ನ ಮೇಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ನನ್ನ ಪೋಸ್ಟ್‌ನಲ್ಲಿನ ಮಾಹಿತಿಯನ್ನು ಪೂರ್ಣವಾಗಿ ಓದಿದಂತಿಲ್ಲ ಅಥವಾ ಅವರಿಗೆ ಕನ್ನಡ ಸರಿಯಾಗಿ ಬರುತ್ತದೋ, ಇಲ್ಲವೋ ಅರ್ಥವಾಗುತ್ತಿಲ್ಲ.

ಮತಾಂಧರ ಪುಂಡಾಟಿಕೆ

ನಾನು ಪೋಸ್ಟ್ ಮಾಡಿರುವ ದೃಶ್ಯಾವಳಿಗಳು ಚಿಕ್ಕಮಗಳೂರಿನಲ್ಲಿ ಮತಾಂಧರು ಪ್ಯಾಲೆಸ್ತೇನ್ ಧ್ವಜ ಹಿಡಿದು ಮಾಡಿದ ಪುಂಡಾಟಿಕೆ, ದಾವಣಗೆರೆಯಲ್ಲಿ ಕೇಸರಿ ಧ್ವಜ ಹಾರಿಸಿದ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ಮಾಡಿರುವ ಘಟನೆಗಳಿಗೆ ಸಂಬಂಧಿಸಿದ್ದು, ಇದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದೇನೆ.

ಗಣೇಶೋತ್ಸವ ಗುರಿಯಾಗಿಟ್ಟುಕೊಂಡು ರಾಜ್ಯದ ಅನೇಕ ಕಡೆ ನಡೆದಿರುವ ಇಂತಹ ಪ್ರಚೋದನಕಾರಿ ಘಟನೆಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ಕೈವಾಡ ಇರಬಹುದು ಎಂದು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ನಾನು ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿರುವ ದೃಶ್ಯಗಳು, ಕಲ್ಲು ಎಸೆದಿರುವ ದೃಶ್ಯಗಳು, ವಾಹನ, ಅಂಗಡಿಗಳನ್ನ ಧ್ವಂಸ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ ಇದೊಂದು ’ಸಣ್ಣ’ ಘಟನೆ, ’ಆಕಸ್ಮಿಕ’ ಘಟನೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡಿದ ಗೃಹ ಸಚಿವ ಪರಮೇಶ್ವರ್ ಮೇಲೆ ಮೊದಲು ಎಫ್‌ಐಆರ್ ದಾಖಲಿಸಬೇಕು, ಸಚಿವರಿಗೆ ತಪ್ಪು ಮಾಹಿತಿ ನೀಡಿದ ಪೊಲೀಸರ ಮೇಲೆ ಎಫ್‌ಐಆರ್ ಹಾಕಬೇಕು.

ಜನೋತ್ಸವವಾಗಿ ಕರ್ನಾಟಕ ಸುವರ್ಣ ಸಂಭ್ರಮ
ನಾಲಾಯಕ್ ರಾಜ್ಯ ಸರ್ಕಾರ

ಕೋಮುಗಲಭೆಗಳನ್ನ ತಡೆಯಲಾಗದ ನಾಲಾಯಕ್ ರಾಜ್ಯ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್‌ಐಆರ್ ಹಾಕಿರುವುದು ಹೇಡಿತನದ ಲಕ್ಷಣ.

ನಮ್ಮ ದೇಶ, ಧರ್ಮದ ರಕ್ಷಣೆ, ಹಿಂದೂಗಳ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ಹಬ್ಬ, ಉತ್ಸವಗಳ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ, ತುರ್ತು ಪರಿಸ್ಥಿತಿ ಹಾಗೂ ರಾಮ ಜನ್ಮಭೂಮಿ ಹೋರಾಟ ಸಂದರ್ಭದಲ್ಲಿ ದೇಶಕ್ಕಾಗಿ, ಧರ್ಮಕ್ಕಾಗಿ ಜೈಲು ವಾಸ ಅನುಭವಿಸಿದವನು ನಾನು, ಇಂತಹ ಒಂದಲ್ಲ ನೂರು ಎಫ್‌ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ ಎಂದು ಅಶೋಕ್ ಸವಾಲು ಹಾಕಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.g.parameshwarfile fir on home ministernagamangala riotopposition leader r.ashok
0 FacebookTwitterPinterestEmail
admin

previous post
ಮಾದಕ ವಸ್ತು ದಂಧೆಕೋರರಿಗೆ ಜೀವಾವಧಿ ಶಿಕ್ಷೆ
next post
ಜನೋತ್ಸವವಾಗಿ ಕರ್ನಾಟಕ ಸುವರ್ಣ ಸಂಭ್ರಮ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ