Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಯುಜಿಸಿಇಟಿ- ಯುಜಿನೀಟ್: ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

by KM Shivaraju September 22, 2024
written by KM Shivaraju September 22, 2024 0 comments 1 minutes read
0FacebookTwitterPinterestEmail
336

ಎಂಜಿನಿಯರಿಂಗ್ ಸೆ.23; ವೈದ್ಯಕೀಯ ಸೆ.24ರಿಂದ ಪ್ರವೇಶ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿಸಿಇಟಿ ಮತ್ತು ಯುಜಿನೀಟ್ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಭಾನುವಾರ (ಸೆ. 22) ತನ್ನ ವೆಬ್‌ಸೈಟಿನಲ್ಲಿ ಪ್ರಕಟಿಸಿದೆ. ಇದರೊಂದಿಗೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಎರಡನೇ ಹಂತದ ಪ್ರವೇಶ ಪ್ರಕ್ರಿಯೆ ಸೋಮವಾರದಿಂದ (ಸೆ.23) ಆರಂಭವಾಗಲಿದೆ.

ಸೀಟು ಹಂಚಿಕೆಯಾದ ಎಂಜಿನಿಯರಿಂಗ್ ಸೇರಿ ಇತರ ಕೋರ್ಸ್ ಗಳ (ವೈದ್ಯಕೀಯ ಕೋರ್ಸ್ ಹೊರತುಪಡಿಸಿ) ಅಭ್ಯರ್ಥಿಗಳು ಸೆ.23ರ ಬೆಳಿಗ್ಗೆ 11ರಿಂದ ಸೆ.25ರ ರಾತ್ರಿ 11:59ರವರೆಗೆ ಚಾಯ್ಸ್ ಆಯ್ಕೆ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರತಿ ಚಾಯ್ಸ್ ನ ಪರಿಣಾಮವನ್ನು ಗಮನಿಸಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಾಯ್ಸ್ 1 ಅಥವಾ ಚಾಯ್ಸ್ 2 ನಮೂದಿಸಿದ ಸಿಇಟಿ ಅಭ್ಯರ್ಥಿಗಳು ಮಾತ್ರ ಸೆ.23ರಿಂದ 26ರ ನಡುವಿನ ಬ್ಯಾಂಕ್ ಕೆಲಸದ ಅವಧಿಯಲ್ಲಿ ಶುಲ್ಕ ಪಾವತಿಸಬೇಕು ಎಂದು ಹೇಳಿದರು.

ಬಿ.ಡಿ.ಜತ್ತಿ ಪಾಲಿಗೆ ಸಿಕ್ಕ ಬುತ್ತಿಕಂಠಿ ಕೊರಳಿಗೆ ಬಿದ್ದ ಕಂಠೀಹಾರ

ಚಾಯ್ಸ್ 1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮಾತ್ರ ಸೆ.23ರಿಂದ 26ರವರೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಚಾಯ್ಸ್- 1 ಅಭ್ಯರ್ಥಿಗಳು ಆಯಾ ಕಾಲೇಜಿಗೆ ವರದಿ ಮಾಡಿಕೊಂಡು ಸೆ.26ಕ್ಕೆ ಮುನ್ನ ಪ್ರವೇಶ ಪಡೆಯಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಗಳಿಗೆ ಚಾಯ್ಸ್ ಇಲ್ಲ

ಈ ಮುಂಚೆಯೇ ತಿಳಿಸಿರುವಂತೆ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಯಾವುದೇ ಚಾಯ್ಸ್ ಲಭ್ಯವಿರುವುದಿಲ್ಲ. ಈ ಅಭ್ಯರ್ಥಿಗಳು ಸೆ.24ರಿಂದ 26ರವರೆಗೆ ಶುಲ್ಕ ಪಾವತಿಸಿ (ಇದುವರೆಗೆ ಪಾವತಿಸದಿದ್ದರೆ) ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದೊಳಗೆ ಆಯಾ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು. ಈ ಕೋರ್ಸುಗಳಿಗೆ ಹಿಂದಿನ ಸುತ್ತಿನಲ್ಲಿ ಪಾವತಿಸಿದ್ದ ಶುಲ್ಕವನ್ನು ಎರಡನೇ ಸುತ್ತಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವೈದ್ಯಕೀಯ ಸೀಟಿಗೆ ಪಾವತಿಸಿದ್ದ ಕಾಷನ್ ಡಿಪಾಸಿಟ್ ಅನ್ನು ಈ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದರೆ ಮಾತ್ರ ಹೊಂದಾಣಿಕೆ ಮಾಡಲಾಗುವುದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮರುಪಾವತಿಸಲಾಗುವುದು. ಆದರೆ, ಹಂಚಿಕೆಯಾದ ಬೇರೆ ಕೋರ್ಸುಗಳಿಗೆ ಇದನ್ನು ಹೊಂದಾಣಿಕೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯಗೆ ಅರ್ಕಾವತಿ ರೀ-ಡೂ ಉರುಳು !

ಹಂಚಿಕೆಯಾಗಿರುವ ವೈದ್ಯಕೀಯ ಸೀಟು ಬೇಡವೆನಿಸಿದಲ್ಲಿ ಸೆಪ್ಟಂಬರ್ 25ರ ಸಂಜೆ 5.30ರೊಳಗೆ ಕೆಇಎ ಕಚೇರಿಗೆ ಬಂದು ರದ್ದುಪಡಿಸಿಕೊಳ್ಳಬೇಕು. ಹೀಗೆ ರದ್ದುಪಡಿಸಿಕೊಂಡವರಿಗೆ ಆನ್ ಲೈನ್ ಮಾಪ್ ಅಪ್ ರೌಂಡ್ ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಪ್ರಸನ್ನ ಹೇಳಿದ್ದಾರೆ.

ಶುಲ್ಕ ಪಾವತಿಸಿದ ನಂತರ ಸೆ.24 ಮತ್ತು 25ರಂದು ಪ್ರಾಧಿಕಾರಕ್ಕೆ ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನಲ್ಲಿ ಮಾಹಿತಿಯನ್ನು ಓದಿ ತಿಳಿದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
admissionAllotmentannouncesengineeringfinal resultskeaMedical Sep.24Second roundSep.23startsUGCETUGNEET
0 FacebookTwitterPinterestEmail
KM Shivaraju

previous post
ಬಿ.ಡಿ.ಜತ್ತಿ ಪಾಲಿಗೆ ಸಿಕ್ಕ ಬುತ್ತಿಕಂಠಿ ಕೊರಳಿಗೆ ಬಿದ್ದ ಕಂಠೀಹಾರ
next post
ಕಾವೇರಿ ಆರತಿ ಹೆಸರಲ್ಲಿ ಸಚಿವರ ಮೋಜು-ಮಸ್ತಿ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ