ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಬೃಹತ್ ಪ್ರತಿಭಟನೆ ನಡೆಸಿತು.
ಮುಡಾ ನಿವೇಶನಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಲೇಬೇಕು ರಾಜೀನಾಮೆ ನೀಡಬೇಕು, ಬೆಲೆ ಏರಿಕೆ, ತೆರಿಗೆ ಏರಿಕೆ ಖಂಡನೀಯ ಎಂಬ ಘೋಷಣೆಗಳನ್ನು ಕೂಗಲಾಯಿತು.
ಅತ್ಯಂತ ಭ್ರಷ್ಟ ಸರ್ಕಾರ
ಬಿಜೆಪಿ ಪ್ರಮುಖರು ಮಾತನಾಡಿ, ಹಲವು ಹಗರಣಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು, ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು ಎಂದು ಟೀಕಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್, ಪಕ್ಷದ ಸಂಸದರು, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.