Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭ್ರಷ್ಟ ಐಪಿಎಸ್ ಅಧಿಕಾರಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು!

by admin September 28, 2024
written by admin September 28, 2024 0 comments 3 minutes read
0FacebookTwitterPinterestEmail
232

ಬೆಂಗಳೂರು:ಸರಣಿ ಅಪರಾಧಗಳನ್ನು ಎಸಗಿರುವ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬರು ರಾಜ್ಯಪಾಲರ ಕಚೇರಿ ಸಿಬ್ಬಂದಿಯನ್ನೇ ತನಿಖೆಗೆ ಒಳಪಡಿಸಲು ಅನುಮತಿ ಕೋರಿದ್ದು, ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗುರುತರ ಆರೋಪ ಮಾಡಿದ್ದಾರೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಭ್ರಷ್ಟ ಅಧಿಕಾರಿಯಾಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಸರಣಿ ದಾಖಲೆಗಳ ಸಮೇತ ಆರೋಪ ಮಾಡಿದರು.

ತನಿಖೆ ಪಾರದರ್ಶಕವಾಗಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ, ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ, ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ, ಈ ಅಧಿಕಾರಿ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದರು.

ನನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿಗೌಪ್ಯ ಪತ್ರವೊಂದು ಸೋರಿಕೆಯಾಗಿತ್ತು, ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಆ ಪತ್ರ ಲಭ್ಯವಾಗಿತ್ತು, ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆಯಾಗಿದೆ. ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರ ಕಾರ್ಯಾಲಯದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ಈ ಅಧಿಕಾರಿ ತೋರಿಸಿದ್ದಾರೆ, ಈ ಅಧಿಕಾರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಆಮಿಷ

ಮೊದಲೇ ಸರಣಿ ಅಪರಾಧಗಳನ್ನು ಮಾಡಿ ಸಿಕ್ಕಿ ಹಾಕಿಕೊಂಡಿರುವ ಐಜಿಪಿ ಚಂದ್ರಶೇಖರ್ ಅವರಿಗೆ ರಾಜ್ಯ ಸರ್ಕಾರ ಆಮಿಷಗಳನ್ನು ಒಡ್ಡಿ, ಇಂತಹ ಕಾನೂನುಬಾಹಿರ ಕೃತ್ಯ ಮಾಡಿಸುತ್ತಿದೆ.

ಅವರಿಗೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಹುದ್ದೆಯ ಆಮಿಷ ಒಡ್ಡಲಾಗಿದೆ, ಈ ಸರ್ಕಾರ ಒಬ್ಬರಿಗೆ ಇಂತಹ ಆಮಿಷ ಒಡ್ಡಿಲ್ಲ, ಬಿ.ಕೆ.ಸಿಂಗ್, ಎಂ.ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಕಮಿಷನರ್ ಮಾಡುತ್ತೇವೆ ಎಂದು ಟೋಪಿ ಹಾಕಿದೆ, ಇಂಥ ಸರ್ಕಾರದಲ್ಲಿ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತವೆ ಎನ್ನುವ ನಂಬಿಕೆ ಇಲ್ಲ ಎಂದರು.

ಪತ್ರ ಸೋರಿಕೆ ಬಗ್ಗೆ ರಾಜ್ಯಪಾಲರ ಸಿಬ್ಬಂದಿ ವಿಚಾರಣೆಗೆ ಚಂದ್ರಶೇಖರ್ ಪತ್ರ ಬರೆದು ಉದ್ಧಟತನ ತೋರಿಸಿದ್ದಾರೆ, ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇನೆ ಎಂದು ಚಂದ್ರಶೇಖರ್ ಕೇಳುತ್ತಾರೆಂದರೆ, ಈತನಲ್ಲಿ ಎಷ್ಟು ಉದ್ಧಟತನ ಇದೆ, ರಾಜ್ಯಪಾಲರ ಕಚೇರಿ ಸರ್ಚ್ ಮಾಡುವ ಸೂಪರ್‌ಕಾಪ್ ಯಾರಿರಬಹುದೆಂದು ಕೆದಕಿದಾಗ ತಮಗೆ ಈ ವ್ಯಕ್ತಿಯ ಹಿನ್ನೆಲೆ ಗೊತ್ತಾಯಿತು ಎಂದು ಚಂದ್ರಶೇಖರ್ ಹಿನ್ನೆಲೆಯನ್ನು ಬಿಡಿಸಿಟ್ಟರು.

ಬೆಂಗಳೂರಲ್ಲಿ ಕಾಂಗ್ರೆಸ್ ವರಿಷ್ಠರ ರಹಸ್ಯ ಸಭೆ
ನಿಯೋಜನೆ ಮೇಲೆ ಬಂದ ಅಧಿಕಾರಿ

ಈ ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಕೇಡರ್‌ನ ಐಪಿಎಸ್ ಅಧಿಕಾರಿ, 1998ರಲ್ಲಿ ಹಿಮಾಚಲ ಪ್ರದೇಶ ಕೇಡರ್‌ನಿಂದ ಆಗಿ ಆಯ್ಕೆಯಾಗಿದ್ದವರು, ಐದು ವರ್ಷಗಳ ಅವಧಿಗೆ ನಿಯೋಜನೆ ಮೇಲೆ ಕರ್ನಾಟಕಕ್ಕೆ ಬಂದರು, ಈ ಅಧಿಕಾರಿ ಹಿಮಾಚಲ ಪ್ರದೇಶದಲ್ಲಿ ಹವಾಮಾನ ಸರಿಯಾಗಿಲ್ಲ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿ ಕರ್ನಾಟಕದಲ್ಲೇ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಮಾಹಿತಿ ನೀಡಿದರು.

ನಿಯೋಜನೆ ಮೇಲೆ ಬಂದ ಈ ವ್ಯಕ್ತಿ ನಂತರ ಕರ್ನಾಟಕ ಕೇಡರ್ ಅಧಿಕಾರಿ ಆಗಲು ಏನೆಲ್ಲಾ ಅಕ್ರಮ ಎಸಗಿದರು, ಯಾರು ನೆರವು ಪಡೆದುಕೊಂಡರು ಎನ್ನುವುದನ್ನು ನಾನು ಇಲ್ಲಿ ಹೇಳುವಂತಿಲ್ಲ, ಅದು ಬಹಳ ಸೂಕ್ಷ್ಮ ವಿಚಾರ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಐಜಿಪಿ ಚಂದ್ರಶೇಖರ್ ವಿರುದ್ಧ ಹಲವಾರು ದೂರುಗಳು ದಾಖಲಾಗಿ, ಆರೋಪ ಪಟ್ಟಿಗಳು ಸಲ್ಲಿಕೆಯಾಗಿವೆ, ಈ ವ್ಯಕ್ತಿ ಸರಣಿ ಅಪರಾಧಗಳನ್ನು ಎಸಗಿರುವ ಅಧಿಕಾರಿ, ತಮ್ಮ ಅಧೀನದಲ್ಲಿದ್ದ ಅಧಿಕಾರಿಯಿಂದ ಭೂಮಿ ವ್ಯವಹಾರಕ್ಕೆ ಸಂಬಂಧಿಸಿದಂತೆ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು, ಈ ಬಗ್ಗೆ ಇನ್ಸ್‌ಪೆಕ್ಟರ್ ಒಬ್ಬರು ದೂರು ನೀಡಿದ್ದ ದಾಖಲೆಯನ್ನು ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವರು ಓದಿ ಹೇಳಿದರು.

ಪತ್ನಿ ಹೆಸರಿನಲ್ಲಿ 38 ಅಂತಸ್ತಿನ ಕಟ್ಟಡ

ಈ ಅಧಿಕಾರಿ ಚಂದ್ರಶೇಖರ್ ತಮ್ಮ ಪತ್ನಿ ಹೆಸರಿನಲ್ಲಿ 38 ಅಂತಸ್ತಿನ ವಾಣಿಜ್ಯ ಕಟ್ಟಡ ನಿರ್ಮಿಸುತ್ತಿದ್ದಾರೆ, ರಾಜಕಾಲುವೆ ಮೇಲೆ ಈ ಕಟ್ಟಡ ನಿರ್ಮಾಣವಾಗುತ್ತಿದೆ, ಅಲ್ಲದೆ, ಕೆರೆಯನ್ನೂ ಒತ್ತುವರಿ ಮಾಡಲಾಗಿದೆ, ಈ ಬಗ್ಗೆ ತನಿಖೆ ನಡೆಯಬೇಕು.

ಇಂಥ ಅಧಿಕಾರಿಗಳನ್ನು ಇಟ್ಟುಕೊಂಡರೆ ರಾಜ್ಯ ಹೇಗೆ ಉದ್ಧಾರ ಆಗುತ್ತದೆ, ಕಾನೂನುಬಾಹಿರವಾಗಿ ತನ್ನ ಕೈಕೆಳಗಿನ ಅಧಿಕಾರಿಗಳನ್ನು ಬಳಸಿ, ಬಿಲ್ಡರುಗಳನ್ನು ಹೆದರಿಸಿ ಈ ಚಂದ್ರಶೇಖರ್ ಎಷ್ಟು ಕೋಟಿ ಹಣ ವಸೂಲಿ ಮಾಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು.

ಇವರು ಒಂದು ಖಾಸಗಿ ತಂಡ ಇಟ್ಟುಕೊಂಡು ಈ ದಂಧೆ ನಡೆಸುತ್ತಿದ್ದಾರೆ, ಈತನ ಬಗ್ಗೆ ದಾಖಲೆ ಸಮೇತ ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಹೆದರಿಸಿ, ಬೆದರಿಸಿ ಹಣ ವಸೂಲಿ

ನನ್ನ ಬಳಿ ಈತನ ವ್ಯವಹಾರಗಳ ಬಗ್ಗೆ ದಾಖಲೆಗಳು ಇವೆ, ವಿಜಯ್ ತಾತಾ ಎಂಬ ವ್ಯಕ್ತಿ ರಾಜ್ಯದಲ್ಲಿ ಒಂದು ಮಾಧ್ಯಮ ಸಂಸ್ಥೆ ನಡೆಸುತ್ತಿದ್ದ, ಈತನದೂ ಸುಲಿಗೆ ದಂಧೆ, ಈತನ ವಿರುದ್ಧ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಆರೋಪ ಪಟ್ಟಿಗಳು ದಾಖಲಾಗಿವೆ, ಇಂಥವನ ಜತೆ ಸೇರಿಕೊಂಡು ಐಜಿಪಿ ಚಂದ್ರಶೇಖರ್ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಗೆ ಬಿದ್ದು ಲೂಟಿ ಮಾಡುತ್ತಿದ್ದಾರೆ, ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕನಿಷ್ಠ 6 ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ, ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು.

ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಆ ಪ್ರಕರಣಗಳ ಕಥೆ ಏನಾಗಿದೆ, ಅವುಗಳ ತನಿಖೆ ಎಲ್ಲಿವರೆಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ.

ಇವರು ಕ್ಲೀನ್, ಸ್ವಚ್ಛ ಆಗಿದ್ದರೆ, ಇಷ್ಟು ಪ್ರಕರಣಗಳು ಇವರ ಮೇಲೆ ಏಕೆ ದಾಖಲಾಗುತ್ತಿದ್ದವು, ತಮ್ಮ ವಿರುದ್ಧದ ಪ್ರಕರಣಗಳನ್ನು ಮುಚ್ಚಿಹಾಕಲು ಸಿದ್ದರಾಮಯ್ಯ, ಈ ಹಿಂದೆ ಲೋಕಾಯುಕ್ತ ಮುಗಿಸಿ ಎಸಿಬಿ ರಚನೆ ಮಾಡಿಕೊಂಡಿದ್ದರು ಎಂದು ಕುಮಾರಸ್ವಾಮಿ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
corrupt ips officerhd kumara swamystate govt. support
0 FacebookTwitterPinterestEmail
admin

previous post
ಸಿದ್ದರಾಮಯ್ಯ ವಿರುದ್ಧ ವಂಚನೆ, ಫೋರ್ಜರಿ ಕೇಸ್
next post
ಬೆಂಗಳೂರಲ್ಲಿ ಕಾಂಗ್ರೆಸ್ ವರಿಷ್ಠರ ರಹಸ್ಯ ಸಭೆ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ