Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

5 ವರ್ಷ ನಮ್ಮದೇ ಆಡಳಿತ: ಸಿದ್ದರಾಮಯ್ಯ ಸ್ಪಷ್ಟನೆ

by admin October 3, 2024
written by admin October 3, 2024 0 comments 1 minutes read
0FacebookTwitterPinterestEmail
249

ಮೈಸೂರು:ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡರು.

ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದಸರಾ ಮಹೋತ್ಸವಕ್ಕೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ವಿದ್ಯುಕ್ತ ಚಾಲನೆ ನೀಡಿ, ಮೌಲ್ಯಯುತ ಭಾಷಣ ಮಾಡಿದ್ದು, ಚುನಾಯಿತ ಸರ್ಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿರುವುದು ಔಚಿತ್ಯಪೂರ್ಣ ಎಂದರು.

ಚುನಾವಣೆ ವೇಳೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ್ದೆವು, ಅದರಂತೆ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಜಾರಿಗೊಳಿಸಿದ್ದೇವೆ ಎಂದರು.

5 ಗ್ಯಾರಂಟಿಗಳಿಂದ ಆರ್ಥಿಕ ಶಕ್ತಿ

ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂ. ಆರ್ಥಿಕ ನೆರವು ದೊರೆಯುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂ. ಪಡೆಯುತ್ತಿದ್ದಾರೆ, ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ, ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ.

ಈ ವರ್ಷ ಉತ್ತಮ ಮಳೆಯಾಗಿದ್ದು, ರಾಜ್ಯದ ರೈತರು ಸಂತೋಷದಿಂದ ಇದ್ದಾರೆ, ಮುಂಗಾರು ಬಿತ್ತನೆ ರಾಜ್ಯದಲ್ಲಿ ಶೇ.99 ಆಗಿದೆ, ಇನ್ನೂ ಹೆಚ್ಚು ಮಳೆಯಾಗಲಿ, ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥಿಸುತ್ತೇನೆ, ಮಳೆ-ಬೆಳೆ ಆದರೆ ಮಾತ್ರ ಜನರು ಸುಖ-ಶಾಂತಿಯಿಂದ ಬದುಕಲು ಸಾಧ್ಯ.

ದಸರಾ ಅದ್ದೂರಿ ಆಚರಣೆ

ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಗುವುದು, ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬ ಆಗಬಾರದು, ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

ರಾಜ್ಯದ ಜನತೆ ನಮಗೆ 5 ವರ್ಷ ಆಡಳಿತಕ್ಕೆ ಅವಕಾಶ ಕೊಟ್ಟಿದ್ದಾರೆ, ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ, ಐದು ವರ್ಷ ನಾವು ಆಡಳಿತ ಮಾಡಿಯೇ ಮಾಡುತ್ತೇವೆ.

ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ, ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ, ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ.

ಯಾವುದೇ ತಪ್ಪು ಮಾಡಿಲ್ಲ

ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ, ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ.

ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ, ಮಹಾತ್ಮ ಗಾಂಧಿ ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು, ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ.

ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು, ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶ ನೀಡಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmysuru dasara inaugurationwe rule for five years
0 FacebookTwitterPinterestEmail
admin

previous post
ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು
next post
ಕಾಂಗ್ರೆಸ್ ಸಚಿವರು ನ್ಯಾಯಾಲಯಕ್ಕಿಂತ ದೊಡ್ಡವರೇ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ