ಬೆಂಗಳೂರು:ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಲಾಗಿದೆ.
ತನಿಖೆಗೆ ಮುನಿರತ್ನ ಅವರ ಅವಶ್ಯಕತೆ ಇದೆ ಎಂಬ ಎಸ್‌ಐಟಿ ಕೋರಿಕೆಯನ್ನು ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶಿಸಿತು.
ಕಸ್ಟಡಿ ಮನವಿ ತಿರಸ್ಕೃತ
ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ತಮ್ಮ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ತಳ್ಳಿಹಾಕಿದ ನ್ಯಾಯಾಲಯ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿತು.
ಮನೆ ಊಟ ತರಿಸಿಕೊಳ್ಳುವ ಮನವಿಗೆ, ಕಾರಾಗೃಹ ಅಧಿಕಾರಿಗೆ ಮನವಿ ಮಾಡಿಕೊಳ್ಳಲಿ, ಸ್ಪಂದನೆ ಸಿಗದಿದ್ದರೆ ನಮ್ಮ ಮುಂದೆ ಬನ್ನಿ ಎಂದು ನ್ಯಾಯಾಧೀಶರು ಹೇಳಿದರು.
ಕ್ರಿಮಿನಲ್ ಪ್ರಕರಣ
ಅತ್ಯಾಚಾರ, ಲೈಂಗಿಕ ಕಿರುಕುಳ, ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಅವರ ಮೇಲಿನ ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅವರು, ಎಸ್‌ಐಟಿ ರಚನೆ ಮಾಡಿದ್ದರು.