Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ

by admin October 7, 2024
written by admin October 7, 2024 0 comments 2 minutes read
0FacebookTwitterPinterestEmail
192

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದ್ದು, ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅನೇಕ ನಾಯಕರು ಹಾಗೂ ಸಚಿವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತಿದ್ದಾರೆ.

ಭಂಡತನ ಶೋಭೆ ತರುವುದಿಲ್ಲ

ಮುಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೂಲಕ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು, ಭಂಡತನ ಅವರಿಗೆ ಶೋಭೆ ತರುವುದಿಲ್ಲ.

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಭಿವೃದ್ಧಿ ಕಾರ್ಯಗಳು ಆರಂಭವೇ ಆಗಿಲ್ಲ, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ, ಜನ ಸರ್ಕಾರದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏನೋ ಪ್ಲಾನ್‌ನೊಂದಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಹೋಗಿದ್ದರು, ಅದೇನು ಪ್ಲಾನ್ ಎಂಬುದು ಗೊತ್ತಾಗಿಲ್ಲ.

ಸರ್ಕಾರದ ಪತನ ಆರೋಪ

ವಿಜಯೇಂದ್ರ ಮುಖ್ಯಮಂತ್ರಿ ಕನಸು ಕಾಣುತ್ತಿದ್ದು, ಕಾಂಗ್ರೆಸ್ ಸರ್ಕಾರದ ಪತನಕ್ಕೆ ಷಡ್ಯಂತ್ರ ನಡೆಸುತ್ತಿದ್ದಾರೆಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಕನಸು ಕಾಣುವ ಸಂದರ್ಭ ಬಂದರೆ ಹೇಳುವೆ, ಸದ್ಯಕ್ಕೆ ಬೇಡ ಎಂದು ನಗುತ್ತಾ ತಿಳಿಸಿದರು.

ಒಳಮೀಸಲಾತಿ ಕುರಿತು ಸಿದ್ದರಾಮಯ್ಯ ಅವರಲ್ಲಿ ಎಲ್ಲೋ ಒಂದು ಕಡೆ ಪ್ರಾಮಾಣಿಕತೆಯ ಕೊರತೆ ಎದ್ದು ಕಾಣುತ್ತಿದೆ, ಮುಖ್ಯಮಂತ್ರಿ ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇದ್ದಿದ್ದರೆ, ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಸೇರಿದ್ದ ವರದಿಯನ್ನು ಅನುಷ್ಠಾನ ಮಾಡಬೇಕಿತ್ತು.

ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿರುವ ಕ್ಷಣದಲ್ಲಿ ಜಾತಿ ಗಣತಿ ವರದಿ ಅನುಷ್ಠಾನದ ಜ್ಞಾನೋದಯ ಆಗಿದೆ, ಸಂಪುಟ ಸಭೆ ಮುಂದೆ ತಂದು ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ
ಪ್ರತಿಕ್ರಿಯೆಗಳನ್ನು ಗಮನಿಸಬೇಕು

ಜಾತಿ ಗಣತಿ ವರದಿ ಅನುಷ್ಠಾನ ಕುರಿತು ಡಿ.ಕೆ.ಶಿವಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಏನು ಪ್ರತಿಕ್ರಿಯೆ ನೀಡಿದ್ದಾರೆ ಎಂಬುದನ್ನು ಗಮನಿಸಬೇಕು.

ರಾಜಕೀಯದ ಹೊರತಾಗಿ ನಡೆದುಕೊಳ್ಳಬೇಕಿದೆ, ರಾಜ್ಯದ ಎಲ್ಲ ವರ್ಗ, ಸಮುದಾಯಗಳಿಗೆ ನ್ಯಾಯ ಕೊಡಬೇಕು, ಹಿಂದುಳಿದ ವರ್ಗಗಳು, ಶೋಷಿತ ಸಮುದಾಯಗಳಿಗೂ ನ್ಯಾಯ ಸಿಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

ಒಬ್ಬರಿಗೆ ನ್ಯಾಯ ಮತ್ತೊಬ್ಬರಿಗೆ ಅನ್ಯಾಯ ಆಗಬಾರದು, ನ್ಯಾಯಯುತವಾಗಿ ನಡೆದುಕೊಳ್ಳಬೇಕು, ಜಾತಿ ಗಣತಿ ಅವೈಜ್ಞಾನಿಕವಾಗಿದೆ ಎಂಬುದು ಎಲ್ಲರ ಅಭಿಪ್ರಾಯ, ಮುಖ್ಯಮಂತ್ರಿ ಭಾವನಾತ್ಮಕ ರಾಜಕಾರಣ ಮಾಡುತ್ತಿರುವ ಭಾವನೆ ಎಲ್ಲರಲ್ಲೂ ಇದೆ ಎಂದರು.

ಒಂದು ಜಿಲ್ಲೆ 2 ಟೋಲ್

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ರಾಜಕಾರಣ ಮಾತನಾಡಿಲ್ಲ, ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ 2 ಟೋಲ್‌ಗಳಿವೆ, ಶಿಕಾರಿಪುರ ತಾಲ್ಲೂಕಿನ ಟೋಲ್‌ನಿಂದ ರೈತರು, ಬಡವರಿಗೆ ಅನಾನುಕೂಲವಾಗಿದೆ, ಮೂರು ಜಿಲ್ಲೆಗಳ ಜನರು ಈ ಹೆದ್ದಾರಿ ಬಳಸುತ್ತಿದ್ದಾರೆ, ಒಂದು ಜಿಲ್ಲೆಯಲ್ಲಿ ಇರುವ ಎರಡು ಟೋಲ್‌ಗಳಲ್ಲಿ ಒಂದನ್ನು ವರ್ಗಾಯಿಸಿ ರೈತರು ಹಾಗೂ ಬಡವರಿಗೆ ಪ್ರಯೋಜನ ದೊರಕಿಸಿಕೊಡಲು ಮನವಿ ಮಾಡಿದ್ದು, ಶೀಘ್ರ ಅಧಿಕಾರಿಗಳ ಸಭೆ ಕರೆಯುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ರಾಜ್ಯಾಧ್ಯಕ್ಷನಾಗಿ ಪಕ್ಷ ಮುನ್ನಡೆಸುವುದರ ಜೊತೆಗೆ ನನ್ನ ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಬೇಕಿದೆ, ಇದು ನನ್ನ ಕರ್ತವ್ಯ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
anytime resignationbjpby vijayendracm siddramaiahcongres
0 FacebookTwitterPinterestEmail
admin

previous post
ಶಾಸಕ ಮುನಿರತ್ನ ನ್ಯಾಯಾಂಗ ಬಂಧನ ಅ.19ರವರೆಗೆ
next post
ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ