Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲಿ ತೀರ್ಮಾನ

by admin October 7, 2024
written by admin October 7, 2024 0 comments 2 minutes read
0FacebookTwitterPinterestEmail
323

ಬೆಂಗಳೂರು:ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಜಾತಿ ಸಮೀಕ್ಷಾ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ.

ಕಾಂತರಾಜ್ ಹಾಗೂ ಜಯಪ್ರಕಾಶ್ ಹೆಗಡೆ ನೀಡಿರುವ ವರದಿ ಅನುಷ್ಠಾನಗೊಳಿಸಬೇಕೆಂದು ಹಿಂದುಳಿದ ವರ್ಗಕ್ಕೆ ಸೇರಿದ ಸಚಿವರು, ಶಾಸಕರು, ಮುಖಂಡರ ಜೊತೆ ವಿಧಾನಸೌಧದಲ್ಲಿ ಸುದೀರ್ಘ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು.

ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ
ಹಿಂದುಳಿದ ವರ್ಗಕ್ಕೆ ಸೀಮಿತವಲ್ಲ

ಕಾಂತರಾಜ್ ವರದಿ ಕೇವಲ ಹಿಂದುಳಿದ ವರ್ಗಕ್ಕೆ ಸೀಮಿತವಲ್ಲ, ಕರ್ನಾಟಕದ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ವಿಷಯಕ್ಕೆ ಸಂಬಂಧಿಸಿದಂತೆ ಸಿದ್ಧಗೊಂಡ ವರದಿ ಎಂದು ಸಮರ್ಥಿಸಿಕೊಂಡರು.

ವರದಿ ಅನುಷ್ಠಾನಕ್ಕೆ ಸರ್ಕಾರದ ಮೇಲೆ ಭಾರೀ ಒತ್ತಡ ಇದೆ, ಇಂದಿನ ಸಭೆಯಲ್ಲೂ ಹಿಂದುಳಿದ ವರ್ಗಕ್ಕೆ ಸೇರಿದ ಮುಖಂಡರೂ ಒತ್ತಡ ಮಾಡಿದ್ದಾರೆ, ನಾನು ಈ ಬಗ್ಗೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಿಲ್ಲ.

ಮುಂದಿನ ಸಂಪುಟ ಸಭೆ, ಅಂದರೆ, ಅಕ್ಟೋಬರ್ 18ರಂದು ನಡೆಯುವ ಮಂತ್ರಿಮಂಡಲ ಸಭೆಯಲ್ಲಿ ಜಯಪ್ರಕಾಶ್ ಹೆಗಡೆ ನೀಡಿರುವ ವರದಿ ಮಂಡಿಸಿ ಚರ್ಚೆ ಮಾಡುವುದಾಗಿ ತಿಳಿಸಿದರು.

ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕ ಸಿದ್ಧತೆ
ಸಮೀಕ್ಷೆಗೆ ಬಹಳ ಸಮಯ

ಇಡೀ ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ, ಹಿಂದಿನ ಕಾಂಗ್ರೆಸ್ ಸರ್ಕಾರದ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ.

ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ, ನಾನು ಇಲ್ಲಿಯವರೆಗೂ ವರದಿ ಪರಿಶೀಲಿಸಿಲ್ಲ, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಪೂರ್ಣಗೊಂಡಿರಲಿಲ್ಲ.

ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು, ಆದರೆ, ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ, ನಂತರ ಬಿಜೆಪಿ ಸರ್ಕಾರ ಬಂದರೂ ವರದಿ ಸ್ವೀಕರಿಸಲಿಲ್ಲ ಎಂದರು.

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ
ವರದಿ ಸಲ್ಲಿಕೆಗೆ 3 ತಿಂಗಳ ಅವಕಾಶ

ನಂತರ ಕಾಂತರಾಜು ಅವರ ಅಧ್ಯಕ್ಷ ಅವಧಿ ಪೂರ್ಣಗೊಂಡ ನಂತರ, ಜಯಪ್ರಕಾಶ್ ಹೆಗಡೆ ಆಯೋಗದ ಅಧ್ಯಕ್ಷರಾದರು, ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು, ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ.

ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ, ಈ ಹಿನ್ನೆಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಸ್ವೀಕರಿಸಲಾಗಿದ್ದು, ಈ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ.

ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ, ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
7 crore peoplecabinet meeting october 18th meetingcaste censuscm siddaramaiah
0 FacebookTwitterPinterestEmail
admin

previous post
ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕ ಸಿದ್ಧತೆ
next post
ಹರಿಯಾಣ: ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಎಫೆಕ್ಟ್

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ