Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತಪ್ಪು ಮರೆಮಾಚಲು ಸಿದ್ದರಾಮಯ್ಯ ಜಾತಿಗಣತಿ ನಾಟಕ

by admin October 7, 2024
written by admin October 7, 2024 0 comments 2 minutes read
0FacebookTwitterPinterestEmail
293

ಬೆಂಗಳೂರು:ಅಧಿಕಾರಾವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಮುಚ್ಚಿಹಾಕಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಕ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಆರೋಪಿಸಿದ್ದಾರೆ.

ಮುಡಾ ಹಗರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯ ವೈಭವೀಕರಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ, ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಈ ವಿಚಾರವನ್ನು ಮುಂದಕ್ಕೆ ತರಲಾಗಿದೆ ಎಂದು ಆರೋಪಿಸಿದರು.

10 ವರ್ಷ ಹಳೆ ವರದಿ

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ, ಈಗ ಆ ವರದಿಗೆ 10 ವರ್ಷ ಆಗಿ ಹೋಗಿದೆ, 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ, ಹಳೆಯ ಜಾತಿಗಣತಿ ವರದಿ ಇಷ್ಟು ದಿನ ಏಕೆ ಬಿಡುಗಡೆ ಮಾಡಿರಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ, ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಏಕೆ ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಈಗ ಮುಡಾ ಹಗರಣದ ಹಿನ್ನೆಲೆಯಲ್ಲಿ ಜನರ ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮುಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ, 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ.

ಮುಡಾ ಹಗರಣ ಮರೆಮಾಚಲು ಜಾತಿಗಣತಿ ವಿಷಯ ಮುನ್ನೆಲೆಗೆ ತಂದಿದ್ದಾರೆ, ಇಷ್ಟು ದಿನ ಇಲ್ಲದೇ ಇರೋದು ಈಗ ಏಕೆ ಮುನ್ನಲೆಗೆ ತರಲು ಹೊರಟಿದ್ದಾರೆ.

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ
ರಾಜಕೀಯ ಮಾಡುತ್ತಿದ್ದಾರೆ

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು, ನನ್ನ ಬಗ್ಗೆ ಮಾತನಾಡುತ್ತಿದ್ದಾರೆ, ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು, ಇನ್ನೂ ಏಕೆ ಇಟ್ಟುಕೊಂಡು ಕೂತಿದ್ದಾರೆ, ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ, ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ.

ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು, ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ, ಹರಿಪ್ರಸಾದ್ ಅವರು ಈ ರೀತಿ ಹೇಳುವುದರಲ್ಲಿ ಏನಿದೆ, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಬಹುದಲ್ಲವೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು, ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ, ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ, ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ದೂರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censuscm siddaramaiahcongreshd kumara swamyhigh dramajds
0 FacebookTwitterPinterestEmail
admin

previous post
ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ
next post
ರಾಜೀನಾಮೆ ನೀಡಲು ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ