Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಆಲೋಚಿಸಿಲ್ಲ

by KM Shivaraju October 10, 2024
written by KM Shivaraju October 10, 2024 0 comments 2 minutes read
0FacebookTwitterPinterestEmail
485

ಲೋಕಸಭೆ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ : ಹೆಚ್ ಡಿಕೆ

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟಿ ಹೇಳಿದರು.

ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ ಎಂದರು. ಬೆಂಗಳೂರು ಗ್ರಾಮಾಂತರ ಲೋಕಾಸಭಾ ಕ್ಷೇತ್ರದಿಂದ ಡಾ. ಸಿ.ಎನ್. ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು. ಅದಕ್ಕೂ ಮೊದಲು ನಾನು ಸಿ.ಪಿ.ಯೋಗೇಶ್ವರ್ ಅವರೇ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು ಎಂದು ಹೇಳಿದ್ದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಪದೇಪದೆ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಅಂದಿನ ಬೆಳವಣಿಗೆಗಳ ಮೇಲೆ ಬೆಳಕು ಚೆಲ್ಲಿದರು.

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್ ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್ ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ. ಈ ಮಾತನ್ನು ನಾನು ಯೋಗೇಶ್ವರ್ ಅವರಿಗೆ ಹೇಳಿದ್ದೇನೆ ಎಂಬುದಾಗಿ ಅವರು ಹೇಳಿದರು.

ಮೈತ್ರಿಗೆ ಮೂಲ ಕಾರಣರು ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆಯೇ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದಿದ್ದರು. ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ಅವರು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ, ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಒಂದೂವರೆ ವರ್ಷದಿಂದ ಎಸ್ ಐಟಿ ಭಜನೆ

ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.

ಇದೇ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಲ್ಲಿ ಇದ್ದಾಗ ಕೋವಿಡ್ ಖರೀದಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಇದ್ದರು. ಆಗ ಏನು ಮಾಡುತ್ತಿದ್ದರು. ಇವರು ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯಿತು. ಆಗಿನಿಂದ ಏನು ಮಾಡುತ್ತಿದ್ದರು? ತನಿಖೆ ಯಾಕೆ ಮಾಡಲಿಲ್ಲ? ಈಗ ಮೂಡಾ, ವಾಲ್ಮೀಕಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಅದಕ್ಕೆ ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರದಿಂದ ಎಸ್ ಐಟಿ ಭಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit Shahbengaluru ruralBJP CandidateC.P. YogeshwarcedingchannapatnaClarifiescongressconstituencycontestDr. C.N. ManjunathelectionhdkLok SabhaNDA candidatenikhil kumaraswamyNo Agreement
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪುಟದ ಬೆಂಬಲ
next post
ಕೋವಿಡ್ ಅಕ್ರಮ ಆರೋಪ ಎಸ್ಐಟಿ ತನಿಖೆಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ