Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಳೇ ಹುಬ್ಬಳ್ಳಿ ಪ್ರಕರಣ ವಾಪಸ್ ಗೆ ಸಮರ್ಥನೆ

by admin October 15, 2024
written by admin October 15, 2024 0 comments 1 minutes read
0FacebookTwitterPinterestEmail
162
ಬಿಜೆಪಿಯವರು ರಣಹದ್ದುಗಳಂತೆ ಕಾಯುತ್ತಿರುತ್ತಾರೆ : ರಾಮಲಿಂಗಾರೆಡ್ಡಿ ಆರೋಪ

ಬೆಂಗಳೂರು : ಬಿಜೆಪಿ ಅಧಿಕಾರದ ಅವಧಿಯಲ್ಲಿ ಕೋಮುದ್ವೇಷಕ್ಕೆ ಸೇರಿದ 182 ಪ್ರಕರಣ ಸೇರಿದಂತೆ 385 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನೆಲ-ಜಲ, ಕನ್ನಡ ಮತ್ತು ರೈತರ ವಿಷಯಗಳಿಗಾಗಿ ಹೋರಾಟ ನಡೆಸಿದವರ ವಿರುದ್ಧ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವುದು ಸಹಜ. ಅದೇ ರೀತಿ ನಮ್ಮ ಸರ್ಕಾರವು ಕಳೆದ ಸಂಪುಟ ಸಭೆಯಲ್ಲಿ ಕೆಲವು ಮೊಕದ್ದಮೆ ಹಿಂತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಇದರಲ್ಲಿ ಹಳೇ ಹುಬ್ಬಳ್ಳಿ ಪ್ರಕರಣವೂ ಒಂದು ಇದನ್ನೂ ಸಹ ನಾವು ವಾಪಸ್ ಪಡೆದಿದ್ದೇವೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ. ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಸದಸ್ಯರೇ ಇದರ ಲಾಭ ಪಡೆದಿದ್ದಾರೆ. 2018-20 ರ ಸಾಲಿನಲ್ಲಿ 127 ಕೇಸ್ ಗಳನ್ನು ಬಿಜೆಪಿ ಹಿಂದಕ್ಕೆ ಪಡೆದಿದೆ. ಇದರ ಫಲಾನುಭವಿಗಳು ಪಿಎಫ್ ಐ, ಎಸ್ ಡಿಪಿಐ ಅವರ ಮೇಲಿದ್ದ ಕೇಸ್ ಗಳನ್ನೂ ಹಿಂದಕ್ಕೆ ಪಡೆಯಲಾಗಿದೆ.

ನಾನು ಗೃಹ ಸಚಿವ ಆಗಿದ್ದಾಗ ನಡೆದ ಪರೇಸ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಏನೇನೋ ಮಾಡಿದರು. ನಂತರ ಎನ್ ಐಎ ತನಿಖಾ ತಂಡ ಆತನ ಸಾವನ್ನು ಆಕಸ್ಮಿಕ ಎಂದು ಹೇಳಿತು. ಬಿಜೆಪಿಯವರು ಹೆಣ ಬಿದ್ದರೆ ಸಾಕು ರಣಹದ್ದುಗಳಂತೆ ಕಾಯುತ್ತಿರುತ್ತಾರೆ. ಬಿಜೆಪಿಯವರ ಹೆಣದ ಮೇಲಿನ ರಾಜಕೀಯದ ಬಗ್ಗೆ ಪುಸ್ತಕವಿದ್ದು ಅದನ್ನು ಮತ್ತೊಮ್ಮೆ ಮುದ್ರಿಸಲಾಗುವುದು.

ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ಕಲಂ 321 ರ ಅಡಿ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದರೂ ವಾಪಸ್ ಪಡೆಯುವ ಅಧಿಕಾರ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗಿದೆ. ಗೃಹ ಇಲಾಖೆಗೆ ಕೇಸಿಗೆ ಸಂಬಂಧ ಪಟ್ಟವರು ವಾಪಸ್ ಪಡೆಯಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಅನೇಕ ಬಾರಿ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿರುತ್ತದೆ. ರೈತರ ಪರ, ಭಾಷೆ, ಜಲವಿವಾದ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟ ನಡೆಸಿರುತ್ತವೆ. ಬಿಜೆಪಿಯಲ್ಲಿ ಸುಳ್ಳು ಹೇಳುವವರನ್ನೇ ವಕ್ತಾರನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯವರ ಸುಳ್ಳುಗಳನ್ನೇ ಜನರು ನಂಬಬಾರದು ಎಂದು ಸತ್ಯವನ್ನು ತಿಳಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದರು.

.

.

.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
allegesbjpjustificationOld Hubli caseRamalingareddyreturnvultures
0 FacebookTwitterPinterestEmail
admin

previous post
ಕಾಂಗ್ರೆಸ್ ನಲ್ಲಿ ಗರಿಗೆದರಿದ ವಿದ್ಯಮಾನ
next post
ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಿಸಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ