26
ಬೆಂಗಳೂರು:ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗುವ ಹಾನಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕೃತಿಗೆ ಕಡಿವಾಣ ಹಾಕಲು, ಚಂಡಮಾರುತ ತಡೆಯಲು ಸಾಧ್ಯವಿಲ್ಲ ಎಂಬ ಸತ್ಯ ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬೇಕು ಎಂದರು.
ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಲಾಗುವುದು, ಎಷ್ಟೇ ಮಳೆ ಸುರಿದರೂ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದರು.