Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಸುಳ್ಳುಗಳಿಗೆ ತಲೆಕೊಟ್ಟು ಮೋಸ ಹೋಗಬೇಡಿ

by admin October 17, 2024
written by admin October 17, 2024 0 comments 1 minutes read
0FacebookTwitterPinterestEmail
182

ಬೆಂಗಳೂರು:ಬಿಜೆಪಿ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಸರಿಯಾದ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.

ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಐದು ಮಂದಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಯಾವುದೇ ರಾಜ್ಯದಲ್ಲಾಗಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿಲ್ಲ, ಬಾಯಿ ಮಾತಲ್ಲಿ ಸಮಾನತೆ ಬರಲ್ಲ, ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದೆ ಸಮಾನತೆ ಬರುವುದಿಲ್ಲ ಎಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ.

ಪಾಠ ಕಲಿಸಬೇಕು

ನಮ್ಮ ಸರ್ಕಾರ ಎಲ್ಲಾ ಧರ್ಮ, ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಬಿಜೆಪಿಯವರು ವಿರೋಧಿಸಿದರು, ಗ್ಯಾರಂಟಿ ಫಲಾನುಭವಿಗಳು ಬಿಜೆಪಿಗೆ ಸರಿಯಾಗಿ ಪಾಠ ಕಲಿಸಬೇಕು.

ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು, ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ, ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ, ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು.

ನಾನು ಹೇಳುತ್ತಿದ್ದೇನೆ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ, ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ, ಸತ್ಯವನ್ನು ಧೈರ್ಯವಾಗಿ ಬಹಿರಂಗವಾಗಿ ಮಾತಾಡುವುದನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು, ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಹಸ್ತಕ್ಷೇಪ ಮಾಡಬೇಡಿ
ಪ್ರತೀ ಹೋಬಳಿಗೆ ವಸತಿ ಶಾಲೆ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಮೂಲಕ ಪರಿಶಿಷ್ಟ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಆಯವ್ಯಯದಲ್ಲಿ ಹಣ ಮೀಸಲಿಟ್ಟ ಮೊದಲ ಸರ್ಕಾರ ನಮ್ಮದು, ತಳಹಂತದ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಆರಂಭಿಸಿದ್ದು ನಾನು, ಪ್ರತೀ ಹೋಬಳಿಗೆ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ.

ಪರಿಶಿಷ್ಟ ಜಾತಿಯ ಎಲ್ಲಾ ವಸತಿ ಶಾಲೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು.

ವಾಲ್ಮೀಕಿ ರಾಮಾಯಣ

ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು, ದರೋಡೆ ಮಾಡಿಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಸುಳ್ಳು ಹೇಳಿದರು.

ತಳಹಂತದ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು, ಆದರೆ, ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ವಾಲ್ಮೀಕಿ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದಿದ್ದು ಹೆಮ್ಮೆಯ ಸಂಗತಿ.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು, ಜಗತ್ತಿಗೇ ಪ್ರೇರಣೆಯಾದರು, ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ವಾಲ್ಮೀಕಿ ಹೇಳಿದ್ದರು, ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ, ಸಮಾನ ಅವಕಾಶಗಳ ರಾಜ್ಯ ಎಂದರ್ಥ.

ರಾಮನ ಮಕ್ಕಳಾದ ಲವ-ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟ ವಾಲ್ಮೀಕಿ ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcm siddaramaiahcongresdr.br ambedkarvalmiki ramayana
0 FacebookTwitterPinterestEmail
admin

previous post
ಚನ್ನಪಟ್ಟಣ: ಸಮರ್ಥ ಅಭ್ಯರ್ಥಿ ಆಯ್ಕೆ ಕಗ್ಗಂಟು !
next post
ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಹಸ್ತಕ್ಷೇಪ ಮಾಡಬೇಡಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ