38
ಬೆಂಗಳೂರು:ದೀಪಾವಳಿ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆದೇಶ ಮಾಡಿದ್ದಾರೆ.
ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿ ಮತ್ತು ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಿ ಎಂದು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.
ದಾಸ್ತಾನು ಮಳಿಗೆಗಳ ಸುರಕ್ಷತೆ
ದೀಪಾವಳಿ ಹಬ್ಬಕ್ಕೂ ಮುನ್ನವೇ ನಿಮ್ಮ-ನಿಮ್ಮ ವ್ಯಾಪ್ತಿಯಲ್ಲಿ ಬರುವ ದಾಸ್ತಾನು ಮಳಿಗೆಗಳ ಸುರಕ್ಷತೆ ಮತ್ತು ಹಸಿರು ಪಟಾಕಿಗಳನ್ನೇ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು.
ನಿಯಮಾವಳಿ ವಿರುದ್ಧ ಪಟಾಕಿ ಮಾರಾಟ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಕಟ್ಟಾದೇಶ ಮಾಡಿದರು.