Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ: ರಾಜ್ಯ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ

by admin October 26, 2024
written by admin October 26, 2024 0 comments 2 minutes read
0FacebookTwitterPinterestEmail
330

ಬೆಂಗಳೂರು:ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು, ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು, ಇದು ಐತಿಹಾಸಿಕ ಸಭೆಯಾಗಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದರು.

ಜನರ ಮೇಲೆ ಕೇಸ್

ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ, ನಿಖಿಲ್ ನಾಮಪತ್ರ ಸಲ್ಲಿಕೆ ನಂತರ ನೊಟೀಸ್ ಕೊಟ್ಟಿದ್ದಾರೆ, ರೋಡ್ ಶೋಗೆ ಬಂದವರ ಮೇಲೆ ಕೇಸ್ ಹಾಕಿ ಚುನಾವಣೆ ನಡೆಸಲು ಹೊರಟಿದ್ದಾರೆ, ನಮ್ಮ ಪಕ್ಷದ ಅಧ್ಯಕ್ಷರಿಗೆ ನೊಟೀಸ್ ಕೊಟ್ಟಿದ್ದಾರೆ, ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ, ಜನರ ಬಳಿ ನಾವು ಮತ ಕೇಳುತ್ತೇವೆ, ಅವರೇ ತೀರ್ಪು ಕೊಡುತ್ತಾರೆ ಎಂದು ಗುಡುಗಿದರು.

ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ನೀಡಲಾಗಿದೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಚನ್ನಪಟ್ಟಣಕ್ಕೆ ಬಂದಿದ್ದರಲ್ಲ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡಿರಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವಿಡಿಯೊ ಮಾಡಿ, ಅಧಿಕಾರಿಗಳಿಗೆ ಹೇಳಿ, ಕೇಸ್ ಹಾಕಿಸಿ, ಯಾವ ಚುನಾವಣೆ ನಡೆಸಲು ಹೊರಟಿದ್ದಾರೆ, ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ, ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು.

ಅತಿವೃಷ್ಟಿ: ತಕ್ಷಣ ಪರಿಹಾರಕ್ಕೆ ಸಿದ್ದರಾಮಯ್ಯ ಸೂಚನೆ
ಮೂರೂ ಕ್ಷೇತ್ರಗಳಲ್ಲಿ ಗೆಲುವು

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಸೇರಿದಂತೆ ಮೂರೂ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ.

ಮೂರೂ ಕ್ಷೇತ್ರ ಗೆದ್ದಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ, ಕುಮಾರಸ್ವಾಮಿ ಅವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಎಂದಿದ್ದಾರೆ, ಪಾಪ.., ಇವರು ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ.

ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ, ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ, ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್‌ನಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ, ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ, ಇಷ್ಟಾದರೂ ಕುತಂತ್ರ ಮಾಡುತ್ತಿದ್ದಾರೆ.

ನಾನು ಟೀಕೆ ಮಾಡಲ್ಲ

ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ, ನನ್ನ ಕೆಲಸದ ಆಧಾರದಲ್ಲಿ ಮತ ಕೇಳುತ್ತೇನೆ.

ಕುಮಾರಸ್ವಾಮಿ ಮಂಡ್ಯಕ್ಕೆ ಮಾತ್ರ ಸೀಮಿತಾರಾಗಿದ್ದಾರೆ ಎಂದಿರುವ ಮುಖ್ಯಮಂತ್ರಿ ಕಳೆದ ನಾಲ್ಕು ತಿಂಗಳ ನನ್ನ ಪ್ರವಾಸ ಕಾರ್ಯಕ್ರಮ ನೋಡಿದ್ದೀರಾ, ಇಲಾಖೆಗೆ ಸಂಬಂಧಿಸಿದಂತೆ ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದೇನೆ.

ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸಗಢ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿಗೆ ಹೋಗಿದ್ದೇನೆ, ನಾನು ಎಷ್ಟು ರಾಜ್ಯಗಳಿಗೆ ಹೋಗಿದ್ದೀನಿ ಗೊತ್ತಿದೆಯಾ ಅವರಿಗೆ, ದೆಹಲಿಯಲ್ಲಿ ಸಮಯ ವ್ಯರ್ಥ ಮಾಡದೇ ಕೆಲಸ ಮಾಡುತ್ತಿದ್ದೇನೆ, ಇವರಿಂದ ನಾನು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅಗತ್ಯ ಇಲ್ಲ.

ದೇವೇಗೌಡ-ಉಪರಾಷ್ಟ್ರಪತಿ ಧನಕರ್ ಸೌಹಾರ್ದ ಭೇಟಿ
ಕರ್ನಾಟಕಕ್ಕೆ ಬರಲೇಬಾರದಾ

ನಾನು, ಕರ್ನಾಟಕಕ್ಕೆ ಬರಲೇಬಾರದಾ, ನನ್ನನ್ನು ಗೆಲ್ಲಿಸಿದ ಜನರ ಕಷ್ಟ ಕೇಳಲು ಬರಲೇಬಾರದಾ, ನಾನು ಕರ್ನಾಟಕಕ್ಕೆ ಬಂದರೆ ಇವರು ನಿದ್ದೆಗೆಡುತ್ತಾರೆ.

ನಗರದಲ್ಲಿ ಹೆಚ್‌ಎಂಟಿ ಕಂಪನಿಗೆ ಸೇರಿದ ಐದು ಎಕರೆ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆ ಮರುವಶಕ್ಕೆ ಪಡೆದಿದೆ, ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ.

ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರೆ, ಮೊದಲು ಅದರ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಕ್ರಮ ಕೈಗೊಳ್ಳಲಿ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕುಳಿತಿದ್ದಾರೆ, ಎಷ್ಟು ಎಕರೆ ಲೂಟಿ ಆಗಿದೆಯೋ ಅಲ್ಲಿ ನೋಡಲಿ, ಹೆಚ್‌ಎಂಟಿಯ ಐದು ಎಕರೆಗೆ ಬಲವಂತವಾಗಿ ಬೇಲಿ ಹಾಕಿದ್ದಾರೆ, ಕೋರ್ಟ್ ಆದೇಶಗಳಿಗೆ ಹೆಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದರು.

ಹಸಿರು ಪಟಾಕಿ ಮಾತ್ರ ಸಿಡಿಸಿ: ಸಿದ್ದರಾಮಯ್ಯ ಕಟ್ಟಾದೇಶ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
by-electioncongres govt. booking cases on opposition leadershd kumara swamynda will win all the three seats
0 FacebookTwitterPinterestEmail
admin

previous post
ಹಸಿರು ಪಟಾಕಿ ಮಾತ್ರ ಸಿಡಿಸಿ: ಸಿದ್ದರಾಮಯ್ಯ ಕಟ್ಟಾದೇಶ
next post
ಶಿಗ್ಗಾಂವಿ, ಸಂಡೂರು, ಚನ್ನಪಟ್ನದ FIR ಕಾಪಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ