27
ಬೆಂಗಳೂರು:ವಕ್ಫ್ ಆಸ್ತಿ ವಿಚಾರದಲ್ಲಿ ಯಾವುದೇ ವಿವಾದ ಇಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ಬಿಜೆಪಿ ನಾಯಕರು ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಟೀಕಿಸಿದ್ದಾರೆ.
ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ, ರೈತರಿಗೆ ನೀಡಿರುವ ನೋಟಿಸ್ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ಪುನರ್ ಉಚ್ಚರಿಸಿದರು.
ಪ್ರತಿಭಟನೆಗೆ ಸಿದ್ಧತೆ
ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವುದನ್ನು ಖಂಡಿಸಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿ ನಾಯಕರು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ.