Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಕ್ಫ್ ವಿರುದ್ಧ ನವೆಂಬರ್ 4 ರಿಂದ ಬಿಜೆಪಿ ಹೋರಾಟ

by KM Shivaraju October 31, 2024
written by KM Shivaraju October 31, 2024 0 comments 2 minutes read
0FacebookTwitterPinterestEmail
198

ಶಕ್ತಿ ಗ್ಯಾರಂಟಿಗೆ ನಾಮ: ಆರ್.ಅಶೋಕ

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ ಎಂದು ತಿಳಿಸಿದರು.

ಭೂಗಳ್ಳರು ಮಾತ್ರವಲ್ಲದೆ, ಸರ್ಕಾರವೇ ಅಧಿಕೃತವಾಗಿ ಒತ್ತುವರಿ ಆರಂಭ ಮಾಡಿದೆ. ಇದರ ವಿರುದ್ಧ ರೈತ ಸಂಘಟನೆಗಳು ತೀವ್ರವಾಗಿ ಪ್ರತಿಭಟಿಸಬೇಕು. ಹಿಂದೆ ಮುಸ್ಲಿಂ ರಾಜರು ದಾಳಿ ಮಾಡಿ, ಮತಾಂಧತೆ ಮೆರೆದಿದ್ದರು. ಟಿಪ್ಪು ಸುಲ್ತಾನ ಕೊಡಗಿನಲ್ಲಿ ಮತಾಂತರ ಮಾಡಿರುವುದು ಇದಕ್ಕೆ ಸಾಕ್ಷಿ. ಇದೇ ರೀತಿ ಈಗ ಜಮೀನಿನ ಕಬಳಿಕೆ ನಡೆಯುತ್ತಿದೆ. ಇಂತಹವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಸುತ್ತಿದ್ದಾರೆ ಎಂದು ದೂರಿದರು.

ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ : ಕುಮಾರಸ್ವಾಮಿ

ಬಿಜೆಪಿ ಯಾವುದೇ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಾವು ಹೋರಾಟ ಮಾಡಿದ್ದಕ್ಕೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಹಾಗೂ ಇಡಿ ತನಿಖೆ ಮಾಡುತ್ತಿದೆ. ಬೆಂಬಲಿಗರ ವಿರುದ್ಧವೂ ತನಿಖೆ ನಡೆದಿದೆ. ಈ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಇನ್ನು ನ್ಯಾಯಾಲಯದ ಮೂಲಕ ಹೋರಾಟ ಮಾಡುತ್ತೇವೆ ಎಂದರು.

ಮೀಸಲಾತಿ: ಎಡಗೈ-ಬಲಗೈಗೆ ಸಮಾನವಾಗಿ ಹಂಚಿಕೆ

ವಕ್ಫ್ ವಿರುದ್ಧ ರೈತರು ಹೋರಾಟ ಮಾಡುತ್ತಿದ್ದು, ಬಿಜೆಪಿ ಅವರಿಗೆ ಬೆಂಬಲ ನೀಡುತ್ತಿದೆ. ರೈತರಿಗೆ ನೋಟಿಸ್ ಕೊಟ್ಟ ಅಧಿಕಾರಿಯನ್ನು ಜೈಲಿಗೆ ಹಾಕಲು ಸಿಎಂಗೆ ಧಮ್ ಇಲ್ಲ. ಇಲ್ಲಿ ರಾಜಕಾರಣಕ್ಕಿಂತ ರೈತರಿಗೆ ಉತ್ತರ ನೀಡುವುದು ಮುಖ್ಯ ಎಂದು ಆಗ್ರಹಿಸಿದರು.

ಶಕ್ತಿ ಯೋಜನೆಗೆ ನಾಮ

ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ನಾವು ಹಿಟ್ ಮಾಡಿದ ಕೂಡಲೇ ಕಾಂಗ್ರೆಸ್ ಓಡಿಹೋಗುತ್ತದೆ. ಈ ಸರ್ಕಾರ ತುಘಲಕ್ ಆಡಳಿತ ನೀಡಿ ನಗೆಪಾಟಲಿಗೀಡಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿದೆ. ಡಿ.ಕೆ‌.ಶಿವಕುಮಾರ್ ಅವರಿಗೆ ಮಹಿಳೆಯರು ಫೋನ್ ಕರೆ ಮಾಡಿ ಯೋಜನೆ ಬೇಡವೆಂದು ತಿಳಿಸಿದ್ದಾರಂತೆ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ, ಯೋಜನೆ ರದ್ದುಪಡಿಸಲು ಈ ರೀತಿ ಕಾರಣ ಹೇಳುತ್ತಿದ್ದಾರೆ. ಇದರ ಜೊತೆಗೆ ಪಡಿತರ ಚೀಟಿ ರದ್ದು ಮಾಡಲು ಎಲ್ಲ ಬಗೆಯ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಏನು ಬೇಕಾದರೂ ಮಾಡಬಹುದು ಎಂಬಂತೆ ವರ್ತಿಸುತ್ತಿದ್ದಾರೆ. ಲೋಕಸಭಾ ಚುನಾವಣೆ‌ ಬಳಿಕ ಗ್ಯಾರಂಟಿ ಇರಲ್ಲ ಎಂದು ನಾವು ಹೇಳಿದ್ದೆವು. ಈಗ ಅದರ ಮೊದಲ ಹೆಜ್ಜೆಯನ್ನು ಸರ್ಕಾರ ಇರಿಸಿದೆ ಎಂದರು.

ಶಕ್ತಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸರ್ಕಾರವೇ ಸಾರಿಗೆ ಇಲಾಖೆಗೆ ಕೋಟ್ಯಂತರ ರೂಪಾಯಿ ಹಣ ನೀಡಬೇಕಿದೆ. ಸರ್ಕಾರದ ಖಜಾನೆ ಪೂರ್ಣ ಖಾಲಿಯಾಗಿದೆ. ಇಷ್ಟಾದರೂ ಯಾವ ಮುಖ ಇಟ್ಟುಕೊಂಡು ಉಪಚುನಾವಣೆ‌ ಎದುರಿಸಲು ಮುಂದಾಗಿದ್ದಾರೆಂದು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಒಮ್ಮೆಯೂ ಚನ್ನಪಟ್ಟಣಕ್ಕೆ ಭೇಟಿ ನೀಡಿಲ್ಲ. ಡಿ.ಕೆ.ಶಿವಕುಮಾರ್ ಬೆಂಗಳೂರು ಉಸ್ತುವಾರಿ ವಹಿಸಿಕೊಂಡು ಕಮಿಶನ್ ಪಡೆಯುತ್ತಿದ್ದಾರೆ. ರಾಮಲಿಂಗಾರೆಡ್ಡಿ ಬೆಂಗಳೂರು ಉಸ್ತುವಾರಿ ಸಿಗಲು ಕಾಯುತ್ತಿದ್ದಾರೆ. ಜನರು ಈ ಸರ್ಕಾರವನ್ನು ತಿರಸ್ಕರಿಸಲಿದ್ದಾರೆ ಎಂದರು.

ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್

ನಮ್ಮ ಕುಟುಂಬದಿಂದ 65 ಎಕರೆ ಜಾಗವನ್ನು ಎಚ್ಎಂಟಿಗೆ ನೀಡಿದ್ದೆವು. ಈಗ ಆ ಜಾಗದಲ್ಲಿ ಅರಣ್ಯ ನಾಶವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇದು ಅರಣ್ಯ ಭೂಮಿ ಎನ್ನುವುದಾದರೆ, ಇದನ್ನು ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂಬುದನ್ನು ನೆನಪಿಸಿಕೊಳ್ಳಬೇಕು. ಎಚ್ಎಂಟಿ ಕಾರ್ಖಾನೆಯನ್ನು ಅಂದಿನ ಪ್ರಧಾನಿ ಜವಹರಲಾಲ್ ನೆಹರು ಉದ್ಘಾಟಿಸಿದ್ದರು‌.ಅವರೇ ಜಾಗ ನೀಡಿ, ಈಗ ಅದು ಅರಣ್ಯ ಭೂಮಿ ಎಂದು ಹೇಳುತ್ತಿದ್ದಾರೆ. ನಾನು ಒಂದನೇ ತರಗತಿಯಲ್ಲಿ ಇದ್ದಾಗಲೂ ಅದು ಎಚ್ಎಂಟಿಗೆ ಸೇರಿತ್ತು. ಈಗ ಇವರು ಮಾಜಿ ಪ್ರಧಾನಿ ನೆಹರು ವಿರುದ್ಧ ಪ್ರಕರಣ ದಾಖಲಿಸುತ್ತಾರಾ? ಅಂದಿನ ಕಾಂಗ್ರೆಸ್ ಮುಖ್ಯಮಂತ್ರಿ ವಿರುದ್ಧ ಕೇಸು ದಾಖಲಿಸುತ್ತಾರಾ? ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುರಿ ಮಾಡಲು ಈ ರೀತಿ ಮಾಡಬಾರದು. ಅರಣ್ಯ ಭೂಮಿಯನ್ನು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನೀಡಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಭೂ ಕಬಳಿಕೆ ಆರೋಪ ಮಾಡಬೇಕಾಗುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
againstbjpCongress governmentfarmersFIGHTlandNovember 4opposition leaderR Ashokatemples propertyWaqfWaqf Board
0 FacebookTwitterPinterestEmail
KM Shivaraju

previous post
ಶಕ್ತಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್
next post
ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ