Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಕ್ತಿ ಯೋಜನೆ ನಿಲ್ಲಿಸಲು ಸರ್ಕಾರದ ಹುನ್ನಾರ : ಕುಮಾರಸ್ವಾಮಿ

by KM Shivaraju October 31, 2024
written by KM Shivaraju October 31, 2024 0 comments 2 minutes read
0FacebookTwitterPinterestEmail
138

ಮರು ಪರಿಶೀಲನೆ ನಾಟಕ;  ಗ್ಯಾರಂಟಿ ನಿಲ್ಲಿಸಲು ಇದು ಮೊದಲ ಹೆಜ್ಜೆ

ಬೆಂಗಳೂರು : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮಿತಿಮೀರಿದ ಓಲೈಕೆ ರಾಜಕಾರಣ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಅವರು ಕಿಡಿಕಾರಿದರು.

ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ?

ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು ಕೇಂದ್ರ ಸಚಿವರು.

ಮುಡಾ ಹಗರಣ ದಾಖಲೆಗಳ ಕಳ್ಳತನ, ಮಾಯ !

ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತಂದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು.

ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು. ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ ₹10,000 ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲಾತಿ: ಎಡಗೈ-ಬಲಗೈಗೆ ಸಮಾನವಾಗಿ ಹಂಚಿಕೆ

ಗ್ಯಾರಂಟಿ ಹೆಸರು ಹೇಳಿ ಜನರಿಗೆ ಹೊರೆ ಹೊರೆಸಿ, ಅವರ ಹಣವನ್ನೇ ಕಿತ್ತು ಅವರಿಗೆ ಚೂರುಪಾರು ಹಂಚುವ ಗ್ಯಾರಂಟಿಗಳಿಗೆ ಅರ್ಥ ಇದೆಯಾ? ಚುನಾವಣೆ ಗೆಲ್ಲುವ ದುರಾಸೆಯಿಂದ ಇಂಥ ಅವಾಸ್ತವಿಕ ಭರವಸೆಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಿದ್ದಾರೆ. ಜರನ್ನು ರಣಹದ್ದುಗಳ ರೀತಿಯಲ್ಲಿ ಸರಕಾರ ಕಿತ್ತು ತಿನ್ನುತ್ತಿದೆ ಎಂದು ಅವರು ದೂರಿದರು.

ಗ್ಯಾರಂಟಿಗಳಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಬರೀ ಖರ್ಚಾಗುತ್ತಿದೆ. ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆಯ ಭವಿಷ್ಯ ಹಾಳು ಮಾಡಬೇಡಿ. ಅನ್ನಭಾಗ್ಯಕ್ಕೂ ಷರತ್ತುಗಳನ್ನು ವಿಧಿಸಿದ್ದಾರೆ. ಗೃಹಲಕ್ಷ್ಮಿಗೂ ಷರತ್ತುಗಳನ್ನು ಹಾಕಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಈಜುವುದನ್ನು ಕಾದು ನೋಡಬೇಕು ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಗ್ಯಾರಂಟಿ ಬಗ್ಗೆ ನಮಗೆ ಹೊಟ್ಟೆ ಉರಿ ಇಲ್ಲ

ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ. ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ. ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಬೇರೆ ದೇಶಗಳಲ್ಲಿ ಉಂಟಾಗಿರುವ ಆರ್ಥಿಕ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ನನ್ನ ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DKDrama; StoppingFirst StepFive GuaranteeshdkreviewShakti SchemeShivakumarunion ministerWomen
0 FacebookTwitterPinterestEmail
KM Shivaraju

previous post
ಮೀಸಲಾತಿ: ಎಡಗೈ-ಬಲಗೈಗೆ ಸಮಾನವಾಗಿ ಹಂಚಿಕೆ
next post
ಶಕ್ತಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ