Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಕ್ಫ್ ಆಸ್ತಿ ಗೆಜೆಟ್ ಪ್ರಕಟಣೆ ರದ್ದು ಮಾಡಬೇಕು

by admin November 1, 2024
written by admin November 1, 2024 0 comments 1 minutes read
0FacebookTwitterPinterestEmail
144

ಸಂಪುಟದಿಂದ ಸಚಿವ ಜಮೀರ್ ಅಹಮದ್ ವಜಾಕ್ಕೆ ಆಗ್ರಹ

ಬೆಂಗಳೂರು:ರೈತರು ಹಾಗೂ ನಾಗರಿಕರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಹಸ್ತಾಂತರ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಖಂಡನೀಯ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಹೆಸರಿನಲ್ಲಿ ನೋಟಿಸ್ ನೀಡುವ ಹಾಗೂ ಪಹಣಿ ಮಾಡಿಕೊಡುವ ಮೂಲಕ ಜನರ ಮತ್ತು ರೈತರ ಆಸ್ತಿ ಹಕ್ಕು ಮೊಟಕುಗೊಳಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ.

ಜಮೀರ್ ಅಹಮದ್ ಅಧಿಕಾರ ದುರ್ಬಳಕೆ

ವಕ್ಫ್ ಆಸ್ತಿ ಎಂಬ ಗೆಜೆಟ್ ಪ್ರಕಟಣೆಯನ್ನೇ ರದ್ದು ಮಾಡಬೇಕು, ಅಧಿಕಾರ ದುರ್ಬಳಕೆ ಮಾಡುತ್ತಿರುವ ಸಚಿವ ಜಮೀರ್ ಅಹಮದ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದರು.

ಸಾರ್ವಜನಿಕರ ಆಸ್ತಿ ವಕ್ಫ್ ಬೋರ್ಡ್ ಹೆಸರಿಗೆ ಮಾಡುತ್ತಿರುವ ವಿರುದ್ಧ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿ ಹೋರಾಟ ನಡೆಸಲಿದೆ, ಎಲ್ಲೆಲ್ಲಿ ಪಹಣಿಯಲ್ಲಿ ವಕ್ಫ್ ಹೆಸರು ಘೋಷಿಸಲಾಗಿದೆಯೋ, ಅವೆಲ್ಲವನ್ನೂ ಸಂಪೂರ್ಣ ಹಿಂಪಡೆಯಬೇಕು, ಕೇವಲ ನೋಟಿಸ್ ಹಿಂಪಡೆದರೆ ಸಾಲದು ಎಂದು ಎಚ್ಚರಿಸಿದರು.

ನಿಖಿಲ್ ಪರ ಸೋಮವಾರದಿಂದ ದೇವೇಗೌಡರ ಪ್ರಚಾರ
ರೈತರ ಜಮೀನು ಕಬಳಿಕೆ

ವಿಜಯಪುರ ಜಿಲ್ಲೆಯಲ್ಲಿ ರೈತರ ಹೆಸರಿನಲ್ಲಿದ್ದ ಪಹಣಿಗಳನ್ನು ವಕ್ಫ್ ಬೋರ್ಡ್ ಹೆಸರಿಗೆ ಬದಲಿಸಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮತ್ತು ಬೆಂಬಲ ಇದೆ ಎಂದ ಮಾತ್ರಕ್ಕೆ ಬಹುಸಂಖ್ಯಾತರು ಮತ್ತು ರೈತರ ಜಮೀನುಗಳನ್ನು ಕಬಳಿಸಲಾಗುತ್ತಿದೆ, ಅದಾಲತ್ ಮೂಲಕ ವಕ್ಫ್ ಆಸ್ತಿ ಎಂದು ಘೋಷಿಸಲು ಜಮೀರ್ ಹೊರಟಿದ್ದಾರೆ ಎಂದು ದೂರಿದರು.

ಗ್ಯಾರಂಟಿ ಯೋಜನೆಗಳನ್ನು ನೇರವಾಗಿ ಹಿಂಪಡೆಯುವ ಬದಲು ರಾಜ್ಯ ಸರ್ಕಾರ ಬಡಜನರ ಬಿಪಿಎಲ್ ಕಾರ್ಡ್‌ಗಳನ್ನು ಹಿಂಪಡೆಯುತ್ತಿದೆ, ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದೆ, ಶಕ್ತಿ ಯೋಜನೆ ಹಿಂಪಡೆಯುವುದಾಗಿ ಉಪಮುಖ್ಯಮಂತ್ರಿ ಹೇಳಿದ್ದರೆ, ಅದಕ್ಕೆ ವಿರುದ್ಧವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ, ಸರ್ಕಾರದಲ್ಲೇ ಗೊಂದಲಗಳಿವೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp state wide protestdr.ashwathanarayanafarmers land to wakf boardon 4th of this month
0 FacebookTwitterPinterestEmail
admin

previous post
ನಿಖಿಲ್ ಪರ ಸೋಮವಾರದಿಂದ ದೇವೇಗೌಡರ ಪ್ರಚಾರ
next post
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ