Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡ

by KM Shivaraju November 7, 2024
written by KM Shivaraju November 7, 2024 0 comments 2 minutes read
0FacebookTwitterPinterestEmail
178

ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ

ಬೆಂಗಳೂರು : ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಅವರು ಮಾತನಾಡಿದರು.

ಮೇಕೆದಾಟು ಯೋಜನೆ ಆಗುತ್ತದೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ.

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ

ಆರು ತಿಂಗಳಿಂದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ‌ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು ದೇವೇಗೌಡರು.

Where is DK? Where is HDK..? Where is Kumaranna? Where is DK? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ನಿಖಿಲ್ ಕುಮಾರಸ್ವಾಮಿ ಅವರನ್ನು ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡರು ಹೇಳಿದರು.

ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು ಎಂದ ನಟಿ ತಾರಾ
ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ. ಏನೋ ಟೀಕೆ ಮಾಡಬಾರದು ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ನಟಿ ತಾರಾ ಹೇಳಿದರು.

ದೇವೇಗೌಡರ ಜತೆ ನಿಲಸಂದ್ರದಲ್ಲಿ ನಿಖಿಲ್ ಪರ ಪ್ರಚಾರ ಮಾಡಿದ ತಾರಾ ಅವರು, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು.

ಅಭಿವೃದ್ಧಿ ಬಗ್ಗೆ ಮಾತಾಡಿದರೆ ಬಹಳ‌ ಮಾತಾಡಬಹುದು. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೆ ಒಂದು ಅವಕಾಶ ಕೊಡಿ. ಈ ಕ್ಷೇತ್ರಕ್ಕೆ ದೇವೆಗೌಡರು, ಕುಮಾರಸ್ವಾಮಿ ಏನನ್ನು ಮಾಡಿದ್ದಾರೆ ಅಂತ ನೆನಪು ಮಾಡಿಕೊಳ್ಳಿ. ನೂರಾರು ಕೆರೆ ತುಂಬಿಸಿದವರು ಕುಮಾರಸ್ವಾಮಿ. ಆದರೆ, ಯಾರೋ ಕೆರೆ ತುಂಬಿಸಿದವರು ಅಂತಾರೆ. ಇದು ಸರಿಯಲ್ಲ ಎಂದು ತಾರಾ ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BeforechannapatnaDeve GowdaDKdk shivakumarFormer Prime MinisterHD Deve GowdahdkKumarannaLast BreathMekedatu ProjectModi’s Approvalramanagara
0 FacebookTwitterPinterestEmail
KM Shivaraju

previous post
ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿ ಷಡ್ಯಂತ್ರ
next post
ಎಫ್‌ಐಆರ್ ದಾಖಲಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಡ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ